ಎಸ್ ಬಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿರ; ಹೆಲ್ತ್ ಬುಲೆಟಿನ್

ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿರುವ ಖ್ಯಾತ ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರನ್ನು ಜೀವ ರಕ್ಷಕ ಸಾಧನಗಳ ನೆರವಿನಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಬುಲೆಟಿನ್ ನಲ್ಲಿ ಹೇಳಲಾಗಿದೆ.

ಕೊರೋನಾವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಜ್ವರ ಸ್ವಲ್ಪ ಕಡಿಮೆಯಾಗಿದೆ ಎನ್ನಲಾಗಿದೆ. ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಗುಣಮುಖರಾಗಲಿ ಎಂದು ಸೆಲೆಬ್ರಿಟಿಗಳು, ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Related posts