ನ.17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ

ಬೆಂಗಳೂರು: ಕೋವಿಡ್‌-19 ಪಿಡುಗಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣಾ ವಿಧಾನ) ಯನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ಡಿಸಿಎಂ ತಿಳಿಸಿದ್ದಾರೆ.

Related posts