ಯವಕರನ್ನೂ ಬಲಿತೆಗೆದುಕೊಳ್ಳುತ್ತದೆ ಕೊರೋನಾ

ದೆಹಲಿ: ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಾಣು ಯುವಕರನ್ನೂ ಬಲಿತೆಗೆದುಕೊಳ್ಳುತ್ತಿವೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ವಿಶ್ವದಾದ್ಯಂತ ಯುವ ಜನರೂ ಕೊರೋನಾ ವೈರಸ್‌ಗೆ ತುತ್ತಾಗಿ ಬಲಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್, ವಿಶ್ವದಾದ್ಯಂತ 17.3 ದಶಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ ಯುವಕರನೇಕರು ಬಲಿಯಾಗಿದ್ದಾರೆ ಎಂದು ಬೊಟ್ಟು ಮಾಡಿದ್ದಾರೆ.

ವಾಷಿಂಗ್ಟನ್‌ ‌ನಲ್ಲಿ ಹೇಳಿಕೆ ನೀಡಿರುವ ಅವರು, ವಿಷಮ ಪರಿಸ್ಥಿತಿ ಇರುವಾಗ ಯುವಕರೂ ಕೂಡಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ.

Related posts