ಹಿಂದಿ ಸಮರ್ಥನೆ ಇಲ್ಲ; ಕ್ಷಮೆಯಾಚಿಸಿದ ದೊಡ್ಡರಂಗೇಗೌಡ

ಬೆಂಗಳೂರು: ಹಿಂದಿ ಭಾಷೆಯ ಸಮರ್ಥನೆ ಮೂಲಕ ಕನ್ನಡ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾಗಿದ್ದ ಸಾಹಿತಿ ದೊಡ್ಡರಂಗೇಗೌಡ, ಈಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆ ಹೇರಿಕೆಯ ರೀತಿ ನೀತಿಗಳನ್ನು ಸಹಿಸುವುದಿಲ್ಲ. ಹಾಗಾಗಿ ತಮ್ಮ ಮಾತು ನೋಯಿಸಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. ನಾನು ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

Related posts