ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧಕ್ಕೆ ಸರ್ಕಾರದ ಮುನ್ನುಡಿ

ಬೆಂಗಳೂರು: ಕೇಸರಿ ಪಾಳಯದ ಮಹತ್ವಾಕಂಕ್ಷೆಯ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ರಾಜ್ಯ ಬಿಜೆಪಿ ಸರ್ಕಾರ ಅಸ್ತು ಎಂದಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಗಿದೆ.

ಪಶು ಸಂಗೋಪನೆ ಮತ್ತು ವಕ್ಪ್ ಸಚಿವ ಪ್ರಭು ಚೌವ್ಹಾಣ್ ವಿಧೇಯಕ ಮಂಡಿಸಿದರು. ಇದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಏಕಾಏಕಿ ಹೊಸ ಬಿಲ್ ಮಂಡಿಸುತ್ತಿದ್ದಾರೆ ಎಂದು ಈ ವಿದೇಯಕವನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಆರೋಪ ಪ್ರತ್ಯಾರೋಪ ತಾರಕಕ್ಕೇರುತ್ತಿದ್ದಂತೆಯೇ ಜೆಡಿಎಸ್ ಶಾಸಕರೂ ರಾಜ್ಯ ಸರ್ಕಾರದ ತೀರ್ಮಾನದ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಎರಡೂ ಪಕ್ಷಗಳ ಪ್ರತಿರೋಧದ ನಡುವೆಯೇ ವಿದೇಯಕ ಅಂಗೀಕಾರಗೊಂಡಿತು.

Related posts