ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ; ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಪ್ರಮಾಣೀಕೃತ ಕಾರ್ಯಾಚರಣೆ ವಿಧಾನಗಳ (ಎಸ್.ಒ.ಪಿ) ಪರಿಣಾಮಕಾರಿ ಜಾರಿ ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳನ್ನು ವ್ಯಾಪಕಗೊಳಿಸುವ ಮೂಲ️ಕ ಕೋವಿಡ್ 19 ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ️.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಲ️ಯವಾರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸಲು ಮಧ್ಯವರ್ತಿಗಳು ಹಣ ಪಡೆಯುತ್ತಿರುವ ಬಗ್ಗೆ ಹಾಗೂ ಮನೆ ಆರೈಕೆಯಲ್ಲಿದ್ದು ಶುಶ್ರೂಷೆ ಪಡೆಯುತ್ತಿರುವುವರ ಹೆಸರಲ್ಲಿ ಆಸ್ಪತ್ರೆಯಲ್ಲಿರುವುದಾಗಿ ಸುಳ್ಳು ಬಿ️ಲ್ಲುಗಳನ್ನು ಸಲ್ಲಿಸುತ್ತಿರುವ ಬಗ್ಗೆಯೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ನಿಗಾ ವಹಿಸಿ ತಕ್ಷಣವೇ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಹೋಮ್ ಐಸೊಲೇಷನ್‍ನಲ್ಲಿ ಇರುವವರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದರ ಮೂಲ️ಕ ಟೆಲಿಮಾನಿಟರಿಂಗ್ ಮೂಲ️ಕ ನಿರಂತರ ನಿಗಾ ವಹಿಸುವುದು ಅತಿ ಮುಖ್ಯ. ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ಕಡಿಮೆ ಮಾಡಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಮಾಡಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಿ ಎಂದು ಸಲಹೆ ಮಾಡಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಲು ಪೋಲಿಸರೊಂದಿಗೆ ವಲ️ಯ ಉಸ್ತುವಾರಿ ಅಧಿಕಾರಿಗಳು ಸಮನ್ವಯ ಸಾಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಹಬ್ಬಗಳು ಪ್ರಾರಂಭವಾಗುತ್ತಿರುವುದರಿಂದ ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

Related posts