ತಣ್ಣೀರುಬಾವಿ ಬೀಚ್ ಅಭಿವೃದ್ಧಿಗೆ ಕ್ರಮ; ಜಿಲ್ಲಾಧಿಕಾರಿಯಿಂದ ಸ್ಥಳ ಪರಿಶೀಲನೆ

ಮಂಗಳೂರು: ಅನ್ಲಾಕ್ ಪ್ರಕ್ರಿಯೆ ಚುರುಕಾಗುತ್ತಿರುವಂತೆಯೇ ಕಡಲತಡಿಯ ನಗರಿ ಮಂಗಳೂರಿನಲ್ಲಿ ಪ್ರವಾಸೋದ್ಯಮ ಉತ್ತೇಜನ ಕಸರತ್ತು ಬಿರುಸುಗೊಂಡಿದೆ. ತಣ್ಣೀರುಬಾವಿ ಬೀಚ್ ಅಭಿವೃದ್ಧಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಸ್ಥಳ ಪರಿಶೀಲನೆ ನಡೆಸಿದರು. dc visit ಶಾಸಕ ಡಾ.‌ಭರತ್ ಶೆಟ್ಟಿ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬೀಚ್ ನಲ್ಲಿ ಪ್ರವಾಸಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಸ್ತ್ರತ ಯೋಜನಾ ವರದಿ ತಯಾರಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಕಡಲ ಕಿನಾರೆ ಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಅವರು ಬೀಚ್ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದರು.

ಒಳಮೀಸಲಾತಿ ಜಾರಿ ಬಗ್ಗೆ ನಿಲುವನ್ನು ಸ್ಪಷ್ಟಪಡಿಸಬೇಕು; ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ

ಒಳಮೀಸಲಾತಿ “ಸರ್ವರಿಗೂ ಸಮಪಾಲು ಸಮಬಾಳು” ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟ್’ನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗುತ್ತದೆ ಎಂದು ಹೇಳಿದ್ದಾರೆ. ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು.1/6 — H D Kumaraswamy (@hd_kumaraswamy) August 30, 2020 ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ…

ರಾಜ್ಯದಲ್ಲಿ ಗೋಹತ್ಯೆ ನಿಷೇಧ; ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಚಿಕ್ಕಬಳ್ಳಾಪುರ: ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ ಎಂದರು. ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು ಎಂದವರು ಹೇಳಿದ್ದಾರೆ. ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆಯಾಗಬೇಕಿದೆ. ನಮ್ಮ ಪಕ್ಷ…

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್’ಗೆ ಕೊರೋನಾ ಪಾಸಿಟಿವ್

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೋವಿಡ್-೧೯ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ಟ್ವೀಟ್ ಮಾಡಿ ತಾವು ಕೊರೋನಾ ಸೋಂಕಿನ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ‘ನಾನು COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದು, ‘ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಹೇಳಿಕೊಂಡಿದ್ದಾರೆ. ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ…

ನೆಲಮಂಗಲ-ಬಾಲೆ ನಡುವೆ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಹಸಿರು ನಿಶಾನೆ

ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣ ದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ರೈಲ್ವೇ ರಾಜ್ಯ ಸಚಿವರಾದ ಶ್ರೀ ಸುರೇಶ್ ಅಂಗಡಿ. ಕಂದಾಯ ಸಚಿವರಾದ ಆರ್ ಅಶೋಕ್.‌ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಶಾಸಕರಾದ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು

ಅಕ್ಟೊಬರ್ ತಿಂಗಳಲ್ಲಿ ಶಾಲೆ-ಕಾಲೇಜು ಆರಂಭ?

ದೆಹಲಿ: ಕೊರೋನಾ ವೈರಾಣು ಹಾವಳಿ ನಿಯಂತ್ರಣ ಸಂಬಂಧ ಜಾರಿಗೊಳಿಸಲಾಗಿದ್ದ ಲಾಕ್’ಡೌನ್ ನಿಯಮಗಳನ್ನು ಸಾದಿಸಲಾಗುತ್ತಿದೆ. ಇದೀಗ 4ನೇ ಅನ್ಲಾಕ್ ಪ್ರಕ್ರಿಯೆ ನಡೆದಿದ್ದು. ಸೆಪ್ಟೆಂಬರ್ 21ರಿಂದ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳು ನಡೆಯಬಹುದು ಎಂದು ಕೇಂದ್ರ ಹೇಳಿದೆ. ಹಾಗಾಗಿ ಅಕ್ಟೊಬರ್ ತಿಂಗಳಿನಿಂದ ಶಾಲಾ-ಕಾಲೇಜುಗಳು ಆರಂಭವಾಗಬಹುದೇ ಎಂಬ ಚರ್ಚೆಗಳು ಸಾಗಿವೆ. ಕ್ರೀಡೆ, ಮನರಂಜನೆ, ಸಾಂಸ್ಕತಿಕ, ಧಾರ್ಮಿಕ, ರಾಜಕೀಯ ಮತ್ತಿತರ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಗರಿಷ್ಠ 100 ಮಂದಿ ಪಾಲ್ಗೊಳ್ಳಲು ಅನುಮತಿ ಕೊಡಲಾಗಿದೆ. ಈ ಕುರಿತ ಮಾರ್ಗಸೂಚಿಯ ಹೈಲೈಟ್ಸ್ ಇಲ್ಲಿದೆ: ಸೆಪ್ಟೆಂಬರ್ 21ರಿಂದ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳು ನಡೆಯಬಹುದು ಕ್ರೀಡೆ, ಮನರಂಜನೆ, ಸಾಂಸ್ಕತಿಕ, ಧಾರ್ಮಿಕ, ರಾಜಕೀಯ ಮತ್ತಿತರ ಕಾರ್ಯಕ್ರಮಗಕ್ಕೆ ಅನುಮತಿ. ಸಾಮಾಜಿಕ ಅಂತರ ಕಾಯ್ದುಕೊಂಡು ಗರಿಷ್ಠ 100 ಮಂದಿ ಪಾಲ್ಗೊಳ್ಳಲು ಅನುಮತಿ ಸೆಪ್ಟೆಂಬರ್ 21ರಿಂದಲೇ ಬಯಲು ರಂಗಮಂದಿರಗಳನ್ನು ತೆರೆಯಲು ಅವಕಾಶ ಕಂಟೈನ್ಮೆಂ ಟ್ ವಲಯದ…

ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ; ಹೆಚ್ಡಿಕೆ ಗರಂ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸರಣಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕರೋನಾ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ ಎಂದೂ ದೂರಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ…

ಸರ್ಕಾರದ ವೈಫಲ್ಯ ವಿರುದ್ಧ ಹೋರಾಟಕ್ಕೆ ಜೆಡಿಎಸ್ ರಣತಂತ್ರ

ಬೆಂಗಳೂರು: ಪಕ್ಷ ಸಂಘಟನೆ, ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಹೋರಾಟಕ್ಕೆ ಜೆಡಿಎಸ್ ಸಜ್ಜಾಗುತ್ತಿದೆ. ಇದಕ್ಕಾಗಿ ಪಕ್ಷದ ಪ್ರಮುಖರು ರಣತಂತ್ರ ರೂಪಿಸುತ್ತಿದ್ದಾರೆ. ಈ ಸಂಬಂಧ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹಿತ ಜೆಡಿಎಸ್ ಪ್ರಮುಖರು ಶನಿವಾರ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆ ಗಮನಸೆಳೆಯಿತು. ಮಂಡ್ಯ, ಮೈಸೂರು, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಕೊರೊನಾದ ಇಂತಹ‌ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು…

ಪ.ಜಾತಿ-ಪಂಗಡ, ಹಿಂದುಳಿದವರಿಗೆ ಪರಿಣಾಮಕಾರಿ ಶಿಕ್ಷಣಕ್ಕೆ ವಿಶೇಷ ಕ್ರಿಯಾಯೋಜನೆ ರೂಪಿಸಿ; ಅಧಿಕಾರಿಗಳಿಗೆ ಕಾರಜೋಳ ಸೂಚನೆ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಪಡಿಸಲಿದೆ. ಈ ಶಿಕ್ಷಣ ನೀತಿಯಡಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ, ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡಿ, ವಿಶೇಷ ಕ್ರಿಯಾಯೋಜನೆಯನ್ನು ಸಿದ್ದಪಡಿಸುವಂತೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು. ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನ ಕುರಿತು ಸಭೆ ನಡೆಸಿದ ಅವರು, ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳನ್ನು ಅವಲಂಭಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡಲು ಈ ಶಿಕ್ಷಣ ನೀತಿಯಡಿ ಪರಿಣಾಮಕಾರಿ ಶಿಕ್ಷಣಕ್ಕೆ ವಿಪುಲ ಅವಕಾಶಗಳಿವೆ. ಈ ಎಲ್ಲಾ ವಿಪುಲ ಅವಕಾಶಗಳು ಈ ಸಮುದಾಯದ ವಿದ್ಯಾರ್ಥಿಗಳಿಗೆ ಸದ್ಬಳಕೆಯಾಗಿ, ಪರಿಣಾಮಕಾರಿ ಉನ್ನತ ಶಿಕ್ಷಣ ಹಾಗೂ…

ಕೋವಿಡ್‌ ವಿರುದ್ಧ ಸಂಘಟಿತ ಹೋರಾಟ ಅಗತ್ಯ : ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರದ ಪ್ರಮಾಣಿಕ ಪ್ರಯತ್ನಗಳ ಜತೆಗೆ ಸಮಾಜದ ಪ್ರತಿಯೊಬ್ಬರ ಸಹಕಾರ ಮತ್ತು ಸಂಘಟಿತ ಹೋರಾಟದಿಂದ ಮಾತ್ರ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಜೆಎಸ್‌ಎಸ್‌ ಸಂಸ್ಥೆ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಜಿಯವರ ಜಯಂತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ʼಕೋವಿಡ್‌-೧೯ : ಸವಾಲು ಮತ್ತು ನಿರ್ವಹಣೆ ʼ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶನಿವಾರ ಸಚಿವರು ಮಾತನಾಡಿದರು. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಮಾನವೀಯ ನೆಲೆಯಲ್ಲಿ ಬಡವ-ಶ್ರೀಮಂತ, ಹಿರಿಯರು-ಕಿರಿಯರು ಬೇಧವಿಲ್ಲದೆ ಸಮಭಾವದಿಂದ ಎಲ್ಲರಿಗೂ ಗುಣಮಟ್ಟದ ಕೋವಿಡ್‌ ಚಿಕಿತ್ಸೆ ನೀಡುತ್ತಿವೆ. ಅದರಲ್ಲೂ ರೋಗಕ್ಕೆ ತುತ್ತಾಗುವ ಅವಕಾಶಗಳಿರುವ ಮಕ್ಕಳು ಮತ್ತು ಹಿರಿಯರ ವಿಷಯದಲ್ಲಿ ವಿಶೇಷ ಕಾಳಜಿ ವಹಿಸಿದೆ. ಕೆಲ ಮುಂದುವರಿದ ರಾಷ್ಟ್ರಗಳು ತಮ್ಮದೇ ಕಾರಣಗಳಿಂದ ರೋಗಪೀಡಿತರಾದ ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸಿದ…