ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,ರೈತ ಸಂಘದ ಕೆಲ ಕಾರ್ಯಕರ್ತರು ಹಾಗೂ ಕೆಲ ಸಂಘಟನೆಗಳ ಮೂಲಕ ಕಾಂಗ್ರೆಸ್ ನಾಯಕರು ತಪ್ಪು ಮಾಹಿತಿ ರವಾನಿಸುತ್ತಿದ್ದರೆ ಎಂದು ದೂರಿದರು. ಕೃಷಿ ಮಸೂದೆ ಹಾಗೂ ಭೂಸುಧಾರಣಾಕಾಯ್ದೆ ರೈತರ ಪರವಾಗಿದೆ. ಈ ಮಸೂದೆಯಿಂದ ಎಸ್ ಸಿ, ಎಸ್ ಟಿಗೆ ಸೆರಿದ ರೈತರಿಗೆ ಅನ್ಯಾಯವಾಗದು ಎಂದವರು ಸ್ಪಷ್ಟಪಡಿಸಿದರು.
Day: October 3, 2020
ಸತ್ಯ ಘಟನೆಯ ‘ದಿಶಾ’ ಎನ್ ಕೌಂಟರ್ ಚಿತ್ರ; ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು
ಸತ್ಯ ಘಟನೆಯನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ‘ದಿಶಾ’ ಎನ್ ಕೌಂಟರ್ ಚಿತ್ರ ಇದೀಗ ಎಲ್ಲರ ಕುತೂಹಲದ ಕೇಂದ್ರಬಿಂದು. ಈ ಸಿನಿಮಾದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿದೆ. ಇಡೀ ಆಂಧ್ರ ಪ್ರದೇಶವನ್ನು ಬೆಚ್ಚಿ ಬೀಳಿಸಿದ್ದ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈ ‘ದಿಶಾ’ ಎನ್ ಕೌಂಟರ್ ಚಿತ್ರದಲ್ಲಿ ಪ್ರತಿಬಿಂಬಿಸಿದೆ ಎಂದೇ ಹೇಳಲಾಗುತ್ತಿದೆ.
ಜಗತ್ತಿನ ಅತ್ಯಂತ ಉದ್ದದ ಅಟಲ್ ಸುರಂಗ ಮಾರ್ಗ ಲೋಕಾರ್ಪಣೆ
ದೆಹಲಿ: ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆ ಇದಾಗಿದೆ. 2002ರಲ್ಲಿ ಆರಂಭಿಸಲಾಗಿದ್ದ ಈ ಸುರಂಗ ಮಾರ್ಗ ಇಂದು ಲೋಕಾರ್ಪಣೆಗೊಂಡಿದೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದಾಗಿ 4ರಿಂದ 5 ಗಂಟೆ ಸಮಯವೂ ಉಳಿತಾಯವಾಗಲಿದೆ.
ಜಗತ್ತಿನ ಅತ್ಯಂತ ಉದ್ದದ ಅಟಲ್ ಸುರಂಗ ಮಾರ್ಗದ ವೈಶಿಷ್ಟ್ಯ.. ವೀಡಿಯೋ ನೋಡಿ
ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗ ಹಲವು ವೈಶಿಷ್ಟ್ಯವನ್ನು ಹೊಂದಿದೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದಾಗಿ 4ರಿಂದ 5 ಗಂಟೆ ಸಮಯವೂ ಉಳಿತಾಯವಾಗಲಿದೆ.
ಬೆಳಗಾವಿಗಾಗಿ ಡಿ.ಕೆ.ಶಿ. ರಣತಂತ್ರ
ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಉಪಚುನಾವಣೆಯಲ್ಲಿ ಸುರೇಶ ಅಂಗಡಿಯವರ ಪತ್ನಿಗೆ ಟಿಕೆಟ್ ನೀಡಬೆಂಬ ಒತ್ತಡ ಬಿಜೆಪಿ ನಾಯಕರಿಂದ ಸಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಕೂಡಾ ಈ ಬಾರಿ ವರ್ಚಸ್ವೀ ನಾಯನನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ಭೇಟಿ ಕುತೂಹಲದ ಕೇಂದ್ರಬಿಂದುವಾಯಿತು. ಈ ನಡುವೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಡಿ.ಕೆ.ಶಿವಕುಮಾರ್ ಶುಕ್ರವಾರ ಉದ್ಘಾಟಿಸಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಹಿರಿಯ ನಾಯಕ ವೀರಣ್ಣ ಮತ್ತಿಕಟ್ಟಿ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.…
ಸುರೇಶ್ ಅಂಗಡಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ
ಬೆಳಗಾವಿ: ಇತ್ತೀಚೆಗೆ ಕೊರೋನಾ ಸೋಂಕಿನಿಂದ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಬೆಳಗಾವಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಬೆಳಗಾವಿ ಪ್ರವಾಸದ ಸಂದರ್ಭದಲ್ಲಿ ಅಂಗಡಿ ನಿವಾಸಕ್ಕೆ ತೆರಳಿದ ಅವರು ಮಾಜಿ ಸಚಿವ ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಚ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.