ಉತ್ತರ ಕರ್ನಾಟಕದಲ್ಲಿ ಮಳೆ ಆರ್ಭಟ; ಬೆಳೆ ಹಾನಿ

ಬೀದರ್: ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರೀ ಮಳೆ ಪ್ರವಾಹದಿಂದಾಗಿ ಹಲವು ಗ್ರಾಮಗಳಲ್ಲಿ ಸಂಪರ್ಕ ಕಡಿದುಕೊಂಡಿದೆ. ಸಾವಿರಾರು ಎಕ್ರೆ ಪ್ರದೇಶದಲ್ಲಿನ ಬೆಲೆ ಹಾನಿಗೀಡಾಗಿವೆ. ಬೀದರ್ ಜಿಲ್ಲೆಯ ಕಮಠಾಣಾ ಬಳಿಯ ಹಳ್ಳ ತುಂಬಿ ಹರಿಯುತ್ತಿದ್ದು, ರೈತರ ಜಮೀನುಗಳಲ್ಲಿ ನೀರು ನುಗ್ಗಿದ ಪರಿಣಾಮ ಬೆಳೆಗಳು ಹಾನಿಗಿಡಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್, ಈ ಭಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಆದರೆ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹೆಸರು, ಉದ್ದು, ತೊಗರಿ, ಕಬ್ಬು ಸೇರಿದಂತೆ ಬಹುತೇಕ ಬೆಳೆಗಳು ಹಾಳಾಗಿವೆ. ಬೆಳೆ ಕಳೆದುಕೊಂಡ ರೈತರಿಗೆ ಶೀಘ್ರವಾಗಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು. ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಈ ಹಿಂದೆ…

ಗಂಗಾವತಿಯಲ್ಲಿ ನೂತನ ಕೃಷಿ ಮಹಾವಿದ್ಯಾಲಯ; ಮುಖ್ಯಮಂತ್ರಿಗೆ ಪ್ರಸ್ತಾವನೆ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೊಪ್ಪಳ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಗಂಗಾವತಿ ನೀರಾವರಿ ಮತ್ತು ಒಣಭೂಮಿ ಹೊಂದಿರುವ ಪ್ರದೇಶವಾಗಿದ್ದು, ಅಲ್ಲಿನ ಮಣ್ಣು ಮತ್ತು ನೀರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸೂಕ್ತವಾಗಿದೆ. ಅಲ್ಲದೇ ಜಿಲ್ಲೆಯಯ ಕೃಷಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಎರಡು ಕೃಷಿ ಸಂಶೋಧನಾ ಕೇಂದ್ರಗಳು, ಒಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಒಂದು ಕೃಷಿ ವಿಜ್ಞಾನ ಕೇಂದ್ರವಿದ್ದು, ಒಟ್ಟು 19 ವಿಜ್ಞಾನಿಗಳು ಮತ್ತು 20 ಶಿಕ್ಷಕೇತರ ಸಿಬ್ಬಂದಿಗಳಿದ್ದು, ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಬೇಕಾದ ಎಲ್ಲಾ ರೀತಿಯ ಅನುಕೂಲವನ್ನು ಹೊಂದಿರುತ್ತದೆ ಎಂದು ಪ್ರಸ್ತಾವನೆಯಲ್ಲಿ ಸರ್ಕಾರದ ಗಮನಸೆಳೆಯಲಾಗಿದೆ. ಕೃಷಿಗೆ ಪೂರಕವಾದ ವಾತಾವರಣವನ್ನು ಹೊಂದಿರುವ ಜಿಲ್ಲೆಯಲ್ಲಿ ಕೃಷಿ ಮಹಾವಿದ್ಯಾಲಯದ ಅಗತ್ಯವಿರುತ್ತದೆ. ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು ಕೃಷಿ ಪದವಿ ಹೊಂದಲು…

ಮಳೆಯಿಂದ ಹೈರಾಣಾದ ಹೈದರಾಬಾದ್; ಸರಣಿ ದುರ್ಘಟನೆಗಳಲ್ಲಿ 32 ಮಂದಿ ಬಲಿ

ಹೈದರಾಬಾದ್: ಭಾರೀ ಮಳೆಯಿಂದಾಗಿ ತೆಲಂಗಾಣ ರಾಜ್ಯ ತತ್ತರಿಸಿದೆ. ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿಮಾನವಾಗಿದೆ. ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಹಲವಾರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಹೈದರಾಬಾದ್ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ಮಳೆ, ಪ್ರವಾಹ ವಿಕೋಪಕ್ಕೆ ಇದುವರೆಗೆ ಮೃತಪಟ್ಟವರ ಸಂಖ್ಯೆ 32ಕ್ಕೇರಿದೆ. ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದಾರೆ. ಮಹಬೂಬ್ ನಗರ ಜಿಲ್ಲೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಹೈದರಾಬಾದ್ ನ ಸಮೀಪ 9 ಮಂದಿ ಕಾಣೆಯಾಗಿದ್ದಾರೆ. ಗಂಗನ್ ಪಹಾಡ್ ನಲ್ಲಿ ಮೂವರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ. ಚಂದ್ರಯಾನಗುಟ್ಟದಲ್ಲಿ ಗೋಡೆ ಕುಸಿದುಬಿದ್ದು 8 ಮಂದಿ ಮೃತಪಟ್ಟಿದ್ದಾರೆ.

ಆರ್ ಆರ್ ನಗರ ಉಪಚುನಾವಣೆ; ಕೈ, ಕಮಲ ವಿರುದ್ಧ ಹೆಚ್ಡಿಕೆ ವಾಗ್ಬಾಣ

ಬೆಂಗಳೂರು: ಆರ್.ಆರ್ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ ಎಂದು ಮಾಜಿ ಸಿಎಂ ಹಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರ್. ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಮಾಜಿ ಸಿಎಂ ಹಚ್.ಡಿ ಕುಮಾರಸ್ವಾಮಿ, ಈ ಬಾರಿ ನಾನು ನಿಷ್ಟಾವಂತ ಕಾರ್ಯಕರ್ತನ ಪರ ಇರ್ತೇನೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್,ಆರ್ ನಗರ 2008ರಲ್ಲಿ ರಚನೆಯಾಗಿತ್ತು. ಈವೆರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿದೆ ಎಂದರು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟಿಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇದೇ ವೇಳೆ ಬಿಜೆಪಿ ವಿರುದ್ದವೂ ಕಿಡಿಕಾರಿದ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ ನಿಯಂತ್ರಿಸುವಲ್ಲಿ…

ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ; ಸರ್ಕಾರದ ನೀಲಿ ನಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಹೃದ್ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಬೆಂಗಳೂರು, ಮೈಸೂರು ಮತ್ತು ಕಲಬುರಗಿಯ ಜಯದೇವ ಹೃದ್ರೋಗ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರಗಳ ಮೂಲ ಸೌಲಭ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಗುಣಮಟ್ಟದ ಚಿಕಿತ್ಸೆಗೆ ನೀಲಿನಕ್ಷೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು. ಹೃದ್ರೋಗಗಳಿಂದಾಗುವ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಶೇ.25 ರಷ್ಟು ಸಾವು ಹೃದಯ ಸಂಬಂಧಿ ಕಾಯಿಲೆಗಳಿಂದ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಭಾಗಗಳ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ನೀಲಿನಕ್ಷೆ ಸಿದ್ಧಪಡಿಸಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ 700 ಹಾಸಿಗೆಗಳಿದ್ದು, ಅದನ್ನು 1 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ…

ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ; ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಪ್ರಮಾಣೀಕೃತ ಕಾರ್ಯಾಚರಣೆ ವಿಧಾನಗಳ (ಎಸ್.ಒ.ಪಿ) ಪರಿಣಾಮಕಾರಿ ಜಾರಿ ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳನ್ನು ವ್ಯಾಪಕಗೊಳಿಸುವ ಮೂಲ️ಕ ಕೋವಿಡ್ 19 ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ️.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಲ️ಯವಾರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸಲು ಮಧ್ಯವರ್ತಿಗಳು ಹಣ ಪಡೆಯುತ್ತಿರುವ ಬಗ್ಗೆ ಹಾಗೂ ಮನೆ ಆರೈಕೆಯಲ್ಲಿದ್ದು ಶುಶ್ರೂಷೆ ಪಡೆಯುತ್ತಿರುವುವರ ಹೆಸರಲ್ಲಿ ಆಸ್ಪತ್ರೆಯಲ್ಲಿರುವುದಾಗಿ ಸುಳ್ಳು ಬಿ️ಲ್ಲುಗಳನ್ನು ಸಲ್ಲಿಸುತ್ತಿರುವ ಬಗ್ಗೆಯೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ನಿಗಾ ವಹಿಸಿ ತಕ್ಷಣವೇ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಹೋಮ್ ಐಸೊಲೇಷನ್‍ನಲ್ಲಿ ಇರುವವರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದರ ಮೂಲ️ಕ ಟೆಲಿಮಾನಿಟರಿಂಗ್ ಮೂಲ️ಕ ನಿರಂತರ ನಿಗಾ…

ಶಿರಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ನಾಮಪತ್ರ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಸಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ಉಮೇದುವಾರಿಕೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ದುಮುಕಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಜೊತೆ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸಿದರು. ಸಂದರ್ಭದಲ್ಲಿ ಸಂಸದರಾದ ಶ್ರೀ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸುರೇಶ್ ಗೌಡ, ಮುಖಂಡರಾದ ಶ್ರೀ ಎಸ್.ಆರ್. ಗೌಡ, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ಹುಚ್ಚಯ್ಯ ಮತ್ತಿತರರು ಉಪಸ್ಥಿತರಿದ್ದರು.

ರಾಜರಾಜೇಶ್ವರಿ ನಗರ ಉಪಚುನಾವಣೆ; ಕೈ ಅಭ್ಯರ್ಥಿ ಕುಸುಮಾ ನಾಮಪತ್ರ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ಆರ್.ಆರ್.ನಗರ ಬಿಬಿಎಂಪಿ ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.

ರಾಜರಾಜೇಶ್ವರಿ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ

ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ರವರು ಹಾಗೂ ಕಂದಾಯ ಮಂತ್ರಿಆರ್ ಅಶೋಕ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜಿಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭ್ಯರ್ಥಿ‌ ಮುನಿರತ್ನ ಅವರಿಗೆ ಬಿ.ಪಾರಂ ವಿತರಿಸಿದರು. ಬಳಿಕ ಮುನಿರತ್ನ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ, ಡಾ.ಸುಧಾಕರ್ ಉಪಸ್ಥಿತರಿದ್ದರು.