ಬಲವಂತದಿಂದ ಬಂದ್ ನಡೆಸಿದರೆ ಕಠಿಣ ಕ್ರಮ; ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಲವಂತದಿಂದ ಬಂದ್ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರೇ ಎಂದು ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಮರಾಠಾ ಅಭಿವೃದ್ಧಿಗಾಗಿ ಮಾಡಿರುವ ಪ್ರಾಧಿಕಾರ. ಮರಾಠಿಗರು ಕೂಡ ಕಟ್ಟಾ ಹಿಂದುತ್ವ ವಾದಿಗಳು. ಬೆಳಗಾವಿಯ ವಿಶ್ವಸಮ್ಮೇಳನದಲ್ಲೂ ಅವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಎಂದ ಯಡಿಯೂರಪ್ಪ, ಸರ್ಕಾರ ಮರಾಠಾ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುತ್ತಿದೆಯೇ ವಿನಃ ಬೇರೆ ಯಾವುದೋ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಬಲವಂತದಿಂದ ಬಂದ್ ನಡೆಸಿದರೆ ಕಟ್ಟುನಿಟ್ಟಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಏನೇ ಹೇಳು ಮಮ್ಮಿ ನಾನು ಆಗೋದೇ ಲವ್ ಮ್ಯಾರೇಜ್ ಮಮ್ಮಿ

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಟಿಸುತ್ತಿರುವ‌ ತ್ರಿವಿಕ್ರಮ ಚಿತ್ರ ಇದೀಗ ಸ್ಸದ್ದಾಗುತ್ತಿದೆ. ಈ ಚಿತ್ರದ ‘ಮಮ್ಮಿ ಪ್ಲೀಸ್ ಮಮ್ಮಿ’ ಹಾಡು ಯುವಾ ಜನಾರನ್ನು ರಂಜಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡಿಗೆ ಸಕತ್ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್’ಗೆ ಮೋದಿ ಅಭಿನಂದನೆ

ದೆಹಲಿ: ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿರುವ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತಾವು ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರಿಗೆ ಕರೆ ಮಾಡಿ ಶುಭ ಹಾರೈಸಿರುವುದಾಗಿ ಹೇಳಿಕೊಂಡಿದ್ದಾರೆ. ಕಮಲಾ ಹ್ಯಾರಿಸ್​ಗೂ ಕೂಡ ಮೋದಿ ಶುಭಾಶಯ ತಿಳಿಸಿದ್ದಾರೆ. Spoke to US President-elect @JoeBiden on phone to congratulate him. We reiterated our firm commitment to the Indo-US strategic partnership and discussed our shared priorities and concerns – Covid-19 pandemic, climate change, and cooperation in the Indo-Pacific Region. — Narendra Modi (@narendramodi) November 17, 2020

ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಸಮರ; ಡಿ.5ರಂದು ಕರ್ನಾಟಕ ಬಂದ್?

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕೆರಳಿರುವ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡುವ ಎಚ್ಚರಿಕೆ ನೀಡಿವೆ. ಮರಾಠರಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚಿಸಿ 50 ಕೋಟಿ ರೊಪಾಯಿ ಅನುದಾನ ಘೋಷಿಸಿರುವ ಸರ್ಕಾರದ ತೀರ್ಮಾನ ವಿರುದ್ಧ ಕನ್ನಡ ಪರ ಸಂಘಟನೆಗಳು ಕೆಲವು ದಿನಗಳಿಂದ ಪ್ರಟಿಭಟನೆ ನಡೆಸುತ್ತಿವೆ. ಇದೀಗ ಈ ತೀರ್ಮಾನವನ್ನು ಹಿಂಪಡೆಯಲು ನವೆಂಬರ್ 27ರ ಗಡುವು ನೀಡಿರುವ ಕನ್ನಡ ಸಂಘಟನೆಗಳು, ಸರ್ಕಾರ ನಿರ್ಧಾರ ಹಿಂಪಡೆಯದೇ ಹೋದರೆ ಡಿ.5ರಂದು ಕರ್ನಾಟಕ ಬಂದ್ ನಡೆಸುವ ಚಿಂತನೆ ನಡೆಸಿವೆ. ಈ ಬಗ್ಗೆ ಹೇಳಿಕೆ ನೀಡಿರುವ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಮರಾಠಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿರುವುದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಿದೆ. ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಯಾದರೆ ಕನ್ನಡಿಗರಿಗೆ ಅಂತ್ಯ ಹಾಡಿದಂತೆ ಎಂದು ಹೇಳಿದ್ದಾರೆ. ನವೆಂಬರ್…

ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆ; ಸಿಎಂಗೆ ಸ್ವಾಮೀಜಿಗಳ ಅಭಿನಂದನೆ

ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಐತಿಹಾಸಿಕ‌ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ ಎಂದು ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಅವರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಲಿ ಎಂದು ಶ್ರೀಗಳು ಶುಭಹಾರೈಸಿದ್ದಾರೆ.

ಜಮೀನು ಅಕ್ರಮ ಮಂಜೂರು ಆರೋಪ; ತಹಸೀಲ್ದಾರ್ ವಿರುದ್ಧ ರೈತರ ಪ್ರತಿಭಟನೆ

ತುಮಕೂರು: ಕೊರಟಗೆರೆ ತಾಲ್ಲೂಕು ದಂಡಾಧಿಕಾರಿಯನ್ನು ಕೂಡಲೇ ವಜಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊರಟಗೆರೆ ತಾಲ್ಲೂಕಿನ ತಹಸೀಲ್ದಾರರು ತಾಲೂಕಿನನಾದ್ಯಂತ ನೀಡಿರುವ ಅಕ್ರಮ ಸಾಗುವಳಿಗಳನ್ನು ಪತ್ತೆ ಮಾಡಿ ಕೂಡಲೆ ವಜಾ ಮಾಡಬೇಕೆಂದು ತಾಲ್ಲೂಕು ರೈತಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಆಗ್ರಹಿಸಿ ಈ ಪ್ರತಿಭಟನೆ ನಡೆಸಿದರು. ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ, ಅಕ್ಕಾಜಿಹಳ್ಳಿ ಸ. ನಂ 33ರ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವದನ್ನು ಖಂಡಿಸಿ ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕ ಹಾಗೂ ಗ್ರಾಮಲೆಕ್ಕಿಗರನ್ನು ಕೂಡಲೆ ಅಮಾನತು ಮಾಡಬೇಕು. ಮತ್ತು ಬೆಂಗಳೂರಿನಿಂದ ಬಂದ ಹೊರಗಡೆ ಜನರಿಗೆ ನೀಡಿರುವ ಸಾಗುವಳಿ ಪತ್ರ ವನ್ನು ಕೊಡಲೇ ರೈತರರಿಗೆ ಕೊಡಬೇಕು ಎಂದು ತಾಲ್ಲೂಕು ಅಧ್ಯಕ್ಷ ಸಿದ್ದರಾಜು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  

ಬಿಜೆಪಿ ರಾಜ್ಯ ಕಾರ್ಯಕಾರಿಣಿ ; ಪೂರ್ ಸಿದ್ದತೆ ಪರಿಶೀಲಿಸಿದ ಸಚಿವ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್ 5ರಂದು ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಪರಿಶೀಲಿಸಿದರು. ಈ ಮಹತ್ವದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಪಕ್ಷದ ಕೇಂದ್ರೀಯ ವರಿಷ್ಠರೂ ಸಹಾ ಭಾಗವಹಿಸುವ ನಿರೀಕ್ಷೆ ಇರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶ್ರೀ ರಮೇಶ್ ಜಾರಕಿಹೊಳಿ‌ ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್‌ ಪಾಟೀಲ್, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್, ಬಿಜೆಪಿ ಮುಖಂಡರಾದ ಕಿರಣ್ ಜಾಧವ್, ರಾಜು ಚಿಕ್ಕನಗೌಡ್ರು ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ತುರ್ತು ನವದೆಹಲಿಗೆ ತೆರಳಲಿದ್ದ ಸಚಿವ ರಮೇಶ್ ಜಾರಕಿಹೊಳಿ‌, ಅದಕ್ಕೂ ಮೊದಲು ಪಕ್ಷದ‌ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಅಚ್ಚುಕಟ್ಟಾಗಿ ರಾಜ್ಯ ಕಾರ್ಯಕಾರಿಣಿ ನಡೆಸಲು ಸೂಚನೆ ನೀಡಿದರು.…

ರಾಜ್ಯದಲ್ಲಿ ಕಡಿಮೆಯಾಗುತ್ತಿದೆ ಕೊರೋನಾ ಸೋಂಕಿನ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಬೆಂಗಳೂರಿನ ಕೋವಿಡ್-19 ಮರಣ ಪ್ರಮಾಣ ಶೇ.1.1% ರಷ್ಟಿದ್ದು, ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ಅತ್ಯಂತ ಕನಿಷ್ಠವಾಗಿದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಈವರೆಗೂ 3,36,880 ಜನ ಗುಣಮುಖ ಹೊಂದಿದ್ದು, 17,707 ಸಕ್ರಿಯ ಪ್ರಕರಣಗಳಿವೆ. ನಗರದ ಚೇತರಿಕೆ ದರ ಶೇ.93.94% ರಷ್ಟಿದ್ದು, ಸಕ್ರಿಯ ದರ ಶೇ.4.93% ರಷ್ಟಿದೆ ಎಂದು ಸಚಿವ ಸುದ್ಧಾಕರ್ ತಿಳಿಸಿದ್ದಾರೆ. ಬೆಂಗಳೂರಿನ ಕೋವಿಡ್-19 ಮರಣ ಪ್ರಮಾಣ ಶೇ.1.1% ರಷ್ಟಿದ್ದು, ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ಅತ್ಯಂತ ಕನಿಷ್ಠವಾಗಿದೆ. ಬೆಂಗಳೂರಿನಲ್ಲಿ ಈವರೆಗೂ 3,36,880 ಜನ ಗುಣಮುಖ ಹೊಂದಿದ್ದು, 17,707 ಸಕ್ರಿಯ ಪ್ರಕರಣಗಳಿವೆ. ನಗರದ ಚೇತರಿಕೆ ದರ ಶೇ.93.94% ರಷ್ಟಿದ್ದು, ಸಕ್ರಿಯ ದರ ಶೇ.4.93% ರಷ್ಟಿದೆ. @BSYBJP @DHFWKA @BBMPCOMM pic.twitter.com/4val2SXLkS — Dr Sudhakar K (@mla_sudhakar) November 18, 2020

ಕೋಲಾರ ಮಾದರಿಯಾಗಬೇಕು: ಬಿ‌.ಸಿ.ಪಾಟೀಲ್

ಕೋಲಾರ: ಕೋಲಾರ ಜಿಲ್ಲೆಯನ್ನು, ರೈತರ ಆತ್ಮವಿಶ್ವಾಸವನ್ನು ತಾವು ಬಹಳವಾಗಿ ಮೆಚ್ಚಿಕೊಂಡಿದ್ದು, ಕೋಲಾರ ಜಿಲ್ಲೆಯನ್ನು ಕೃಷಿಯಲ್ಲಿ ಮಾದರಿ ಜಿಲ್ಲೆಯನ್ನಾಗಿಸುವ ಗುರಿ ತಮ್ಮದಾಗಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಹೇಳಿದ್ದಾರೆ. ಕೋಲಾರದ‌ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕೃಷಿ ಸಚಿವರು, ಕೋಲಾರ ರೈತರು ಕಡಿಮೆ ಮಳೆ ಕಡಿಮೆ ನೀರಿನಲ್ಲಿಯೂ ಸಮಗ್ರ ಕೃಷಿ ನೀತಿಯನ್ನು ಅಳವಡಿಸಿ ಉತ್ತಮ ಬೆಳೆ ಬೆಳೆದು ಮಾದರಿಯಾಗಿದ್ದಾರೆ.ತಾವು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಕೋಲಾರ ರೈತರು ಸ್ವಾಭಿಮಾನದಿಂದ ಹೇಳಿದ್ದಾರೆ. ಕೋಲಾರ ರೈತರ ಕೃಷಿ ನೀತಿ ಸ್ವಾಭಿಮಾನ ಇಡೀ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು. ಮಂಡ್ಯದಲ್ಲಿ ತಾವು ನಡೆಸಿದ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಕೋಲಾರದ ಬಗ್ಗೆಯೇ ತಾವು ಹೆಚ್ಚು ಉಲ್ಲೇಖಿಸಿ ಇಲ್ಲಿನ ರೈತರ ಆತ್ಮವಿಶ್ವಾಸವನ್ನು ಉದಾಹರಣೆಯಾಗಿ ನೀಡಿದ್ದೇನೆ.ಅಲ್ಲದೇ ಹೋದಲೆಲ್ಲಾ ಕೋಲಾರ ರೈತರ ಸಾಧನೆ ಬಗ್ಗೆ ಮಾತನಾಡುತ್ತಿದ್ದೇನೆ. ಕಡಿಮೆ ಮಳೆಯಲ್ಲಿಯೂ ಉತ್ತಮ ಬೆಳೆ ಬೆಳೆಯುವ ಕೋಲಾರ ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿದೆ ಎಂದರು.