ಪಾಕ್ ನೆಲದಲ್ಲಿ ಅಂದು ಸರ್ಜಿಕಲ್ ಸ್ಟ್ರೈಕ್; ಇದೀಗ ಪಿನ್ ಪಾಯಿಂಟ್ ದಾಳಿ

ದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಭಾರತೀಯ ಸೇನೆ ಪಿನ್ ಪಾಯಿಂಟ್ ದಾಳಿ ಮಾಡಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನ ಸೇನೆ ಅವಕಾಶ ನೀಡುತ್ತಿತ್ತೆನ್ನಲಾಗಿದೆ. ಇದೇ ಸಂದರ್ಭದಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಿನ್ ಪಾಯಿಂಟ್ ದಾಳಿ ಮಾಡಿದೆ. ಪಿಒಕೆಯಲ್ಲಿನ ಉಗ್ರರ ಲಾಂಚ್ ಪ್ಯಾಡ್ ಮತ್ತು ಉಗ್ರ ಶಿಬಿರಗಳ ಮೇಲೆ ನಡೆದ ದಾಳಿಯಲ್ಲಿ ಹತ್ತಾರು ಉಗ್ರರು ಸಾವನ್ನಪ್ಪಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಈ ಸೇನಾ ದಾಳಿಯಲ್ಲಿ ನಾಗರಿಕರ ಸಾವು ನೋವು ಸಂಭವಿಸಿಲ್ಲ ಎಂದು ಹೇಳಿದೆ.

‘ಗ್ರಾಮ-1’ ಕೇಂದ್ರಕ್ಕೆ ಸಿಎಂ ಪ್ರಾಯೋಗಿಕ ಚಾಲನೆ

ಬೆಂಗಳೂರು: ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ‘ಗ್ರಾಮ-1’ ಕೇಂದ್ರವನ್ನು ಸಕಾಲ ಯೋಜನೆ ಅಡಿಯಲ್ಲಿ ಅನುಷ್ಠಾನ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚಾಲನೆ ನೀಡಿದರು. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಶ್ರೀ ಎಂ.ಪಿ.ರೇಣುಕಾಚಾರ್ಯ ಉಪಸ್ಥಿತಿಯಲ್ಲಿ ‘ಗ್ರಾಮ-1’ ಚಾಲನೆ ನೀಡಲಾಯಿತು. ಮಾಯಕೂಂಡ ಶಾಸಕರಾದ ಪ್ರೊ. ಲಿಂಗಣ್ಣ , ಶಂಕರ್ ಗೌಡ ಪಾಟೀಲ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳು ಎಲ್ಲರನ್ನು ಗೌರವದಿಂದ ಕಾಣುತ್ತಿದ್ದಾರೆ: ಬಿ.ಸಿ.ಪಾಟೀಲ್

ಹೊಸಪೇಟೆ: ಸಂಪುಟ ಸರ್ಜರಿ ವಿಚಾರ ಕುರಿತಂತೆ ಬಿಜೆಪಿ ನಾಯಕರ ನಡುವೆ ವಲಸಿಗರು ಮೂಲ ನಾಯಕರು ಎಂಬ ಚರ್ಚೆ ನಡೆದಿದೆ ಎಂಬ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಹೊಸಪೇಟೆಯಲ್ಲಿನ 67 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಯುವಜನ ಮಹಿಳಾ ಮತ್ತು ಅಬಲ ವರ್ಗದವರಿಗಾಗಿ ಸಹಕಾರ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ. ಎಲ್ಲರೂ ಸಹೋದರರಂತಿದ್ದೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿಗಳನ್ನಾಗಲೀ ಪಕ್ಷದ ವರಿಷ್ಠರನ್ನಾಗಲಿ ಶಾಸಕರು ಭೇಟಿ ಮಾಡಿದ ತಕ್ಷಣ ಅವರೆಲ್ಲ ಮಂತ್ರಿಗಿರಿಗಾಗಿಯೇ ಹೋಗಿದ್ದಾರೆ ಎನ್ನುವ ಕಲ್ಪನೆ ತಪ್ಪು.ಶುಭಾಶಯ ಕೋರಲೋ ಅಥವಾ ಕ್ಷೇತ್ರದ ಕೆಲಸಕ್ಕಾಗಿಯೋ ಭೇಟಿ ಮಾಡುವುದು ಸಹಜವೇ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಹದಿನೇಳು ಜನರನ್ನು ಬಹಳ ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ.ಅದರಂತೆ ಎಲ್ಲಾ ಶಾಸಕರು ಸಚಿವರನ್ನೂ ಸಹ ಗೌರವದಿಂದಲೇ ಕಾಣುತ್ತಿದ್ದಾರೆ. ಯಾರ್ಯಾರಿಗೆ ಏನು…

ಸೊಲಬಕ್ಕನವರ್ ನಿಧನಕ್ಕೆ ಸಚಿವ ರಮೇಶ್ ಜಾರಕಿಹೊಳಿ‌ ಸಂತಾಪ

ಬೆಂಗಳೂರು: ಕರ್ನಾಟಕ ರಾಜ್ಯ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿದ್ದ ಡಾ. ಟಿ. ಬಿ. ಸೊಲಬಕ್ಕನವರ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಸೊಲಬಕ್ಕನವರ್ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಾಗಿದ್ದರು. ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿ ಎಂಬ ಗ್ರಾಮದಲ್ಲಿ ಶಿಲ್ಪಕಲಾ ಕುಟೀರ ಉತ್ಸವ ರಾಕ್ ಗಾರ್ಡನ್ ನಿರ್ಮಿಸಿ, ದೇಶೀ ಕಲೆಯ ಪ್ರಚಾರಕರಾಗಿದ್ದರು ಎಂದು ತಿಳಿಸಿರುವ ಸಚಿವ ರಮೇಶ್ ಜಾರಕಿಹೊಳಿ‌, ಇವರ ಕಲಾಪ್ರತಿಭೆಯನ್ನು ಗಮನಿಸಿ ಬಯಲಾಟ ಅಕಾಡೆಮಿ ಗೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಂರಕ್ಷಿತ ಸ್ಮಾರಕಗಳ ವಿವರಣಾ ಪುಸ್ತಕ ‘ಕಲಾ ವೈಭವ’

ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ ವತಿಯಾ ದ ವಿಶ್ವ ಪರಂಪರೆ ಸಪ್ತಾಹ ಅಂಗವಾಗಿ ಬೆಂಗಳೂರು ವಲಯದ ಸಂರಕ್ಷಿತ ಸ್ಮಾರಕಗಳ ವಿವರಣಾ ಪುಸ್ತಕ “ಕಲಾ ವೈಭವ” ವನ್ನು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ದಲ್ಲಿ ಬಿಡುಗಡೆ ಮಾಡಿದರು. ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಮ್. ಪಿ.ರೇಣುಕಾಚಾರ್ಯ,ಶಂಕರ್ ಪಾಟೀಲ್, ಶಾಸಕರಾದ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ ಘೋಷಣೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್‌ ಸಮ್ಮಿಟ್‌ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್‌ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು. ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್‌ ಡಿಜಿಟಲ್‌ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ…

ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ. ಆಪ್ಟಿಕ್ ಫೈಬಲ್ ಜಾಲ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

ಬೆಂಗಳೂರು: ಡಿಜಿಟಲ್ ತಾಂತ್ರಿಕತೆಯ ಬೆಳವಣಿಗೆಗೆ ಪೂರಕವಾಗಿ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿರುವ ಕೇಂದ್ರ ಸರ್ಕಾರವು 1000 ದಿನಗಳಲ್ಲಿ 6 ಲಕ್ಷ ಕಿ.ಮೀ. ಉದ್ದದಷ್ಟು ಆಪ್ಟಿಕ್ ಫೈಬರ್ ಕೇಬಲ್ ಜಾಲ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದರು. ಮೂರು ದಿನಗಳ ಕಾಲ ನಡೆಯಲಿರುವ ದೇಶದ ಮಹತ್ವದ ತಾಂತ್ರಿಕ ಕಾರ್ಯಕ್ರಮವಾದ “ಬೆಂಗಳೂರು ತಂತ್ರಜ್ಞಾನ ಮೇಳ-2020’ ದ (23ನೇ ಆವೃತ್ತಿ) ಉದ್ಘಾಟನಾ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು. ಕೋವಿಡ್ ಸಂದರ್ಭವು ಒಂದೆಡೆ ನಮಗೆ ಸಂಕಷ್ಟವನ್ನು ತಂದೊಡ್ಡಿತು. ಮತ್ತೊಂದೆಡೆ, ಇಲ್ಲಿನ ಡಿಜಿಟಲ್ ತಂತ್ರಜ್ಞಾನ ಪರ್ಯಾವರಣವು ಹೊಸ ಅವಕಾಶಗಳನ್ನು ಸೃಷ್ಟಿಸಿತು. ಜಾಗತಿಕ ತಯಾರಿಕಾ ಕಂಪನಿಗಳು ಕೋವಿಡ್ ಸನ್ನಿವೇಶದಲ್ಲಿ ಭಾರತದೆಡೆಗೆ ಧಾವಿಸಿಬಂದಿವೆ. ಕೋವಿಡ್ ಅವಧಿಯಲ್ಲಿ ದೇಶದ ಮಾಹಿತಿ ತಂತ್ರಜ್ಞಾನ ವಲಯವು ಶೇ 7ರಷ್ಟು ಬೆಳವಣಿಗೆ ಕಂಡಿದೆ.…

ಭಾರತದ ತಂತ್ರಜ್ಞಾನ ಪರಿಹಾರಗಳನ್ನು ವಿದೇಶಗಳಿಗೆ ತಲುಪಿಸಲು ಇದು ಸಕಾಲ- ನರೇಂದ್ರ ಮೋದಿ

ಬೆಂಗಳೂರು: ಭಾರತದಲ್ಲಿ ಅಭಿವೃದ್ಧಿಪಡಿಸಲಾದ ತಂತ್ರಜ್ಞಾನ ಪರಿಹಾರಗಳನ್ನು ಜಗತ್ತಿನ ಬೇರೆ ದೇಶಗಳಿಗೆ ತಲುಪಿಸಲು ಇದು ಸೂಕ್ತ ಸಮಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಇದೇ ಮೊತ್ತಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಮೇಳ” (ಬಿಟಿಎಸ್-2020)ವನ್ನು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. “ಡಿಜಿಟಲ್ ಇಂಡಿಯಾ” ಎಂಬುದು ಈಗ ಕೇವಲ ಸರ್ಕಾರದ ಅಭಿಯಾನವಾಗಿ ಉಳಿದಿಲ್ಲ. ಇದು ಬದುಕಿನ ರೀತಿಯೇ ಆಗಿ ಹೋಗಿದೆ. ಡಿಜಿಟಲ್ ತಂತ್ರಜ್ಞಾನವು ಜನರಿಗೆ ಪಾರದರ್ಶಕ ರೀತಿಯಲ್ಲಿ ತ್ವರಿತವಾಗಿ ಸೇವೆಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತಿದೆ. ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ, ನಿರ್ಲಕ್ಷಿತ ಸಮುದಾಯಗಳಿಗೆ ಹಾಗೂ ಸರ್ಕಾರಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಇದಕ್ಕಾಗಿ ನಾವು “ಡಿಜಿಟಲ್ ಇಂಡಿಯಾ”ಗೆ ಧನ್ಯವಾದ ಸಲ್ಲಿಸಬೇಕು ಎಂದು ಅಭಿಪ್ರಾಯಪಟ್ಟರು. ಕೋವಿಡ್ ಸೋಂಕಿನ ಸನ್ನಿವೇಶದಲ್ಲಿ ರೂಢಿಗೆ ಬಂದ “ಎಲ್ಲಿಂದಾದರೂ ಕೆಲಸ ಮಾಡಿ” ಎಂಬ ಪರಿಕಲ್ಪನೆಯು ಇನ್ನು ಮುಂದೆಯೂ ಉಳಿದುಕೊಳ್ಳಲಿದೆ.…