ಪಾಕ್ ಉಗ್ರ ಹಫೀಜ್​ ಸಯೀದ್​ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಲಾಹೋರ್: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜಮಾತ್​​-ಉದ್​-ದಾವಾ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಾಗಿರುವ ಹಫೀಜ್​ ಸಯೀದ್ ಪಾಕ್ ನೆಲದಲ್ಲೂ ಉಗ್ರಗಾಮಿ ಕೃತ್ಯಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದ ಎಂಬ ಆರೋಪಕ್ಕೆ ಗುರಿಯಾಗಿದ್ದ. ಕಳೆದ ವರ್ಷ ಜುಲೈನಲ್ಲಿ ನಡೆದ ವಿದ್ವಾಂಸಕ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಗುರುವಾರ ಮತ್ತೆರಡು ಪ್ರಕರಣಗಳಲ್ಲಿ ಕೋರ್ಟ್​ ಹಫೀಜ್ ಗೆ ಕೋರ್ಟ್ ಮತ್ತೆ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

ಟೆಕ್‌ ಸಮಿಟ್ ವೈಶಿಷ್ಟ್ಯ; ವರ್ಚುವಲ್‌ ವೇದಿಕೆಯಲ್ಲೇ ಚರ್ಚಾಗೋಷ್ಠಿಗಳು

ಬೆಂಗಳೂರು: ಉದ್ಯಾನ ನಗರಿಯಲ್ಲಿ ನಡೆಯುತ್ತಿರುವ ಟೆಕ್‌ ಸಮಿಟ್‌ ವೈವಿಧ್ಯಮಯ ವಿಚಾರಗಳಿಂದಾಗಿ ಜಾಗತಿಕ ಗಮನಸೆಳೆದಿದೆ. ಟೆಕ್‌ ಸಮಿಟ್‌ನಲ್ಲಿ ಮೂರು ದಿನಗಳ ಕಾಲ ವಿವಿಧ ವರ್ಚುಯಲ್‌ ವೇದಿಕೆಗಳಲ್ಲಿ ನಡೆಯುತ್ತಿರುವ ಚರ್ಚಾಗೋಷ್ಠಿಗಳಲ್ಲಿ ದೇಶ-ವಿದೇಶಗಳ ಹೂಡಿಕೆದಾರರು, ತಾಂತ್ರಿಕ ನಿಪುಣರು, ವಿವಿಧ ಕಂಪನಿಗಳ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಮೊದಲ ದಿನ ನವೆಂಬರ್‌ 19ರಂದು ಮಹೀಂದ್ರಾ ಮಹೀಂದ್ರಾ ಕಂಪನಿ ಅಧ್ಯಕ್ಷ ಆನಂದ್‌ ಮಹೀಂದ್ರ ಮುಖ್ಯ ಭಾಷಣ ಮಾಡಿದರಲ್ಲದೆ, ಕೋವಿಡ್‌ ನಂತರದ ಕಾಲದಲ್ಲಿ ಕರ್ನಾಟಕ ಮತ್ತು ಭಾರತದಲ್ಲಿರುವ ಹೂಡಿಕೆ ಅವಕಾಶಗಳ ಬಗ್ಗೆ, ಮುಖ್ಯವಾಗಿ ಆಟೋಮೊಬೈಲ್‌ ಕ್ಷೇತ್ರದ ಬೆಳವಣಿಗೆ ಮೇಲೆ ಬೆಳಕು ಚೆಲ್ಲಿದರು. ಇದಾದ ಮೇಲೆ 4 ಚರ್ಚಾಗೋಷ್ಠಿಗಳು ನಡೆದು, ಅನೇಕ ಹೊಸ ಸಾಧ್ಯತೆಗಳತ್ತ ಗಮನ ಸೆಳೆಯುವಂತೆ ಮಾಡಿದವು. ಮಧ್ಯಾಹ್ನ ನಡೆದ ಮೊದಲ ಗೋಷ್ಠಿಯಲ್ಲಿ ನಿತ್ಯಜೀವನದಲ್ಲಿ ಟೆಕ್ನಾಲಜಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಯಿತು. ಆರೋಗ್ಯ, ಕೃಷಿ ಮತ್ತು ಪ್ರಕೃತಿ ವಿಕೋಪದಂಥ ಸಂದತ್ಭದಲ್ಲಿ ದ್ರೋಣ್‌ಗಳನ್ನೂ, ರೋಬೋಟ್‌ಗಳನ್ನು ಬಳಸಿಕೊಳ್ಳುವ ಬಗ್ಗೆ ಹಾಗೂ…

ಟೆಕ್‌ ಸಮಿಟ್; ದೂರದ ದೇಶಗಳು ಈಗ ಹತ್ತಿರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಟೆಕ್‌ ಸಮಿಟ್‌ನಲ್ಲಿ ವರ್ಚುಯಲ್‌ ಮೂಲಕ ಆವಿಷ್ಕಾರ ಮೈತ್ರಿಕೂಟದ ದೇಶಗಳಾದ ಇಪ್ಪತ್ತೈದು ಗಣರಾಜ್ಯಗಳು ಇದೀಗ ಭಾರತದ ಹತ್ತಿರಕ್ಕೆ ಬಂದಿವೆ. ಮುಖ್ಯವಾಗಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು, ತಂತ್ರಜ್ಞಾನ ವಿನಿಮಯ ಮಾಡಿಕೊಳ್ಳಲು ಈ ದೇಶಗಳು ಉತ್ಸುಕವಾಗಿವೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಆಸ್ಟ್ರೀಯಾ, ಬೆಲ್ಪಿಯಂ, ಡೆನ್ಮಾರ್ಕ್‌, ಫಿನ್‌ಲೆಂಡ್‌, ಫ್ರಾನ್ಸ್‌, ಜರ್ಮನಿ, ಜಪಾನ್‌, ಇಸ್ರೇಲ್‌, ಲಿಥುವೇನಿಯಾ, ನೆಡರ್‌ಲ್ಯಾಂಡ್ಸ್‌, ಸಿಂಗಾಪುರ, ಸ್ವೀಡನ್‌, ದಕ್ಷಿಣ ಕೊರಿಯಾ, ಸ್ವಿಡ್ಜರ್‌ಲೆಂಡ್‌, ಬ್ರಿಟನ್‌, ತೈವಾನ್‌ ಮತ್ತು ಅಮೆರಿಕ ದೇಶಗಳ ವಿವಿಧ ನಾಯಕರು, ಕೈಗಾರಿಕೋದ್ಯಮಿಗಳು ಬೆಂಗಳೂರು ಟೆಕ್‌ ಸಮಿಟ್‌ನಲ್ಲಿ ಭಾಗಿಯಾಗಿದ್ದಾರೆ. ಟೆಕ್‌ ಸಮಿಟ್‌ನಲ್ಲಿ ರಾಜ್ಯವು ವಿವಿಧ ದೇಶಗಳ ಅನೇಕ ಒಪ್ಪಂದಗಳಿಗೆ ಸಹಿ ಹಾಕಲಿದೆ. ಈಗಾಗಲೇ ಏಳಕ್ಕೂ ಹೆಚ್ಚು ಪ್ರಮುಖ ಒಪ್ಪಂದಗಳು ಅಂತಿಮಗೊಂಡಿವೆ. ಅವುಗಳಿಗೆ ಅಂಕಿತ ಬೀಳುವುದೊಂದೇ ಬಾಕಿ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ. ಮುಖ್ಯವಾಗಿ; ಅಂತರೀಕ್ಷ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ರಕ್ಷಣೆ, ಕೃಷಿ, ವೈದ್ಯಕೀಯ ಆವಿಷ್ಕಾರ, ಮಾಹಿತಿ…

ಬೆಂಗಳೂರಿನ ಟೆಕ್‌ ಸಮಿಟ್‌ನಲ್ಲಿ ವರ್ಚುಯಲ್‌ ವಿಶ್ವರೂಪ!

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ರಾಜ್ಯ ಕರ್ನಾಟಕವು, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಹಮ್ಮಿಕೊಂಡಿರುವ ಬೆಂಗಳೂರು ಟೆಕ್‌ ಸಮಿಟ್-‌2020 ಅನೇಕ ಕಾರಣಗಳಿಗೆ ಮಹತ್ವದ್ದೆನಿಸಿದ್ದು, ಜಗತ್ತೇ ಒಂದು ಗ್ರಾಮ ಎನ್ನುವ ಪರಿಕಲ್ಪನೆಯನ್ನು ಮತ್ತಷ್ಟು ವಿಸ್ತಾರಗೊಳಿಸಿದೆ. ಕೋವಿಡ್‌ ಪೀಡೆಯು ಅಂಕೆಗೆ ಬಾರದ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಹಾಗೂ ಅನೇಕ ದೇಶಗಳು ಕೈಚೆಲ್ಲಿ ಕೂತಿರುವುದರ ನಡುವೆಯೇ ಕ್ರಿಯಾಶೀಲವಾಗಿ ಹೂಡಿಕೆಯ ಆಕರ್ಷಣೆ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ದಾಪುಗಾಲು ಇಟ್ಟಿರುವ ರಾಜ್ಯವು, 25ಕ್ಕೂ ಹೆಚ್ಚು ದೇಶಗಳನ್ನು ಒಂದೇ ಒಂದು ವರ್ಚುಯಲ್ ವೇದಿಕೆಯಲ್ಲಿ ಒಗ್ಗೂಡಿಸಿ ತಂತ್ರಜ್ಞಾನದ ವಿಶ್ವರೂಪವನ್ನು ಜಗತ್ತಿಗೆ ಪರಿಚಯಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಟೆಕ್‌ ಸಮಿಟ್-2020 ಚಾಲಕಶಕ್ತಿ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, “ಇದೊಂದು ಅಸಾಧಾರಣ ಹೆಜ್ಜೆ. ಕೋವಿಡ್‌ನಂಥ ಮಾರಕ ಪಿಡುಗಿನ ನಡುವೆಯೇ ಈ ಶೃಂಗವನ್ನು ಹಮ್ಮಿಕೊಳ್ಳಲಾಗಿದೆ. ವೈರಸ್‌ ಉಪಟಳದಿಂದ ಕಂಗೆಟ್ಟಿರುವ ಜಗತ್ತಿನ ಎಲ್ಲಡೆಯಂತೆ ರಾಜ್ಯದ ಮೇಲೂ ಒತ್ತಡ ಬಿದ್ದಿದೆ.…

ಆರ್ಯವೈಶ್ಯ ಜನಾಂಗವನ್ನು ಕಡೆಗಣಿಸಬೇಡಿ; ಸಿಎಂಗೆ ಶರವಣ ಮನವಿ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಮೇಲೆ ಆರ್ಯವೈಶ್ಯ ಜನಾಂಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು ಈ ಸಾಲಿನಲ್ಲಿ ಕೇವಲ 5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಂಸ್ಥಾಪಕ ಅಧ್ಯಕ್ಷ ಟಿ.ಎ.ಶರವಣ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಾತ್ರ ಬರೆದಿರುವ ಟಿ ಎ ಶರವಣ, ಸಂಪೂರ್ಣ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಆರ್ಯವೈಶ್ಯ ಜನಾಂಗ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವ ಜನಾಂಗವಾಗಿದ್ದು, ಈ ಸಮುದಾಯದ ಅಭಿವೃದ್ಧಿ ಗಾಗಿ ಕೂಡಲೇ 25 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಟಿ.ಎ.ಶರವಣ ಅವರು ಸಿಎಂಗೆ ಬರೆದಿರುವ ಪತ್ರದ ಪೂರ್ಣ ಹೀಗಿವೆ. ಕರ್ನಾಟಕದಲ್ಲಿ ಅತಿಕಡಿಮೆ ಜನಸಂಖ್ಯೆ ಇರುವ ಆರ್ಯವೈಶ್ಯ ಜನಾಂಗವು ಹಿಂದಿನಿಂದಲೂ ಶೋಷಣೆಗೊಳಪಟ್ಟಿರುತ್ತದೆ. ಈ ಜನಾಂಗದ ಅಭಿವೃದ್ಧಿ ನಿಗಮ ಸ್ಥಾಪಿಸಲು ಬಹಳ ವರ್ಷಗಳ ಕಾಲ ಹೋರಾಟ ನಡೆಸಿದ ಫಲವಾಗಿ…