ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್; ಅಪಹರಣಕಾರರಿಗೆ ಖಾಕಿ ಬೇಟೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ತನಿಖೆ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಅಪಹರಣ ಮಾಡಿದವರು ಯಾರು ಎಂಬ ಬಗ್ಗೆ ವರ್ತೂರು ಪ್ರಕಾಶ್ ಸ್ಪಷ್ಟ ಮಾಹಿತಿ ನೀಡದಿರುವುದು ಪೊಲೀಸ್ ತನಿಖೆಯ ವೇಗಕ್ಕೆ ಆದಿಯಾಗಿದೆ ಎನ್ನಲಾಗಿದೆ. ವರ್ತೂರು ಪ್ರಕಾಶ್ ಅವರನ್ನು ಕಿಡಿಗೇಡಿಗಳು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ಆರಂಭಿಸಿದ್ದಾರೆ. ವರ್ತೂರು ಪ್ರಕಾಶ್ ಹೇಳಿಕೆಯನ್ನಾಧರಿಸಿ ತನಿಖೆಗೆ ಮುನ್ನುಡಿ ಬರೆದಿರುವ ಬೆಳ್ಳಂದೂರು ಠಾಣೆಯ ಪೊಲೀಸರು, ವರ್ತೂರು ಪ್ರಕಾಶ್ ಕಿಡ್ನಾಪ್ ಆದ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ತನ್ನದೇ ಕಾರಿನಲ್ಲಿ ಕಿಡಿಗೇಡಿಗಳು ಕಿಡ್ನಾಪ್ ಮಾಡಿದ್ದರು. ಹಲ್ಲೆ ನಡೆಸಿ 30 ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದರು ಎಂದು ವರ್ತೂರು ಪ್ರಕಾಶ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಹಾಗಾಗಿ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ಕರೆದೊಯ್ಯಲಾಗಿದೆ ಎನ್ನಲಾದ…

ವಿಶ್ವನಾಥ್ ಆರೋಪದ ಅಚ್ಚರಿ; ಕಮಲದಲ್ಲಿ ತಳಮಳ

ಬೆಂಗಳೂರು: ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿರುವ ಮಾಜಿ ಸಚಿವ ಎಚ್.ವಿಶ್ವನಾಥ್ ಇದೀಗ ತಮ್ಮನ್ನು ಆಪರೇಷನ್ ಕಮಲಕ್ಕೆ ಖೆಡ್ಡಾ ತೋಡಿದವರ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಹುಣಸೂರು ಉಪ ಚುನಾವಣೆಯಲ್ಲಿ ತಮ್ಮ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್, ಹುಣಸೂರು ಉಪ ಚುನಾವಣೆಯಲ್ಲಿ ಖರ್ಚಿಗಾಗಿ ಪಕ್ಷ ನೀಡಿದ್ದ ಹಣವನ್ನು ಈ ನಾಯಕರು ಲಪಟಾಯಿಸಿದ್ದಾರೆ ಎಂದು ದೂರಿದರು. ಕಟೀಲ್ ಬಗ್ಗೆಯೂ ಬೇಸರ ಮುಖ್ಯಮಂತ್ರಿ ಹಾಗೂ ಪಕ್ಷದಿಂದ ಚುನಾವಣಾ ಖರ್ಚಿಗಾಗಿ ನೀಡಿದ ದೊಡ್ಡಮಟ್ಟದ ಹಣವನ್ನು ಸಿ.ಪಿ. ಯೋಗೀಶ್ವರ್ ಹಾಗೂ ಎನ್.ಆರ್ ಸಂತೋಷ್ ಲಪಟಾಯಿಸಿದರ ಎಂದ ಅವರು, ಉಪ ಚುನಾವಣೆ ಅಭ್ಯರ್ಥಿ ಘೋಷಣೆಗೂ ಮುನ್ನವೇ ತಾನೆ ಅಭ್ಯರ್ಥಿ ಎಂದು ಎಲ್ಲೆಡೆ ಫ್ಲೆಕ್, ಬ್ಯಾನರ್ ಹಾಕಿಹೊಂಡು ಪ್ರಚಾರ ಮಾಡಿದರು. ಸೀರೆ, ಕುಕ್ಕರ್ ನೀಡಿದರು. ಅದರೂ ಸಹ…

ಖಡಕ್ ಅಧಿಕಾರಿಯ ನಿಷ್ಠುರ ನಡೆ; ಬರೋಬ್ಬರಿ 3.4 ಕೋಟಿ ದಂಡ ವಸೂಲಿ

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕೆಲವು ತಿಂಗಳ ಕಾಲ ಚಾಲಕರನ್ನು ಭೌತಿಕವಾಗಿ ತಡೆದು ಸಂಚಾರ ನಿಯಮ ಉಲ್ಲಂಘನಾ ಪ್ರಕರಣಗಳನ್ನು ಪೊಲೀಸರು ದಾಖಲು ಮಾಡುತ್ತಿರಲಿಲ್ಲ. ಇದನ್ನೇ ಗಮನಿಸಿ ಸಾರ್ವಜನಿಕರು ಪರಿಸ್ಥಿತಿಯನ್ನು ದುರುಪಯೋಗಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಕಠಿಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್.ರವಿಕಾಂತೇಗೌಡ, ತನ್ನ ಸಹೋದ್ಯೋಗಿಗಳಿಗೆ ಖಡಕ್ ಆರೇಶವನ್ನು ನೀಡಿ ನಿಸ್ಪಕ್ಷಪಾತ ಕಾರ್ಯಾಚರಣೆಗೆ ಸೂಚಿಸಿದ್ದಾರೆ. ಜಂಟಿ ಆಯುಕ್ತರ ಸೂಚನೆಯಂತೆ ಬೆಂಗಳೂರಿನ ಎಲ್ಲೆಡೆ ಸಂಚಾರ ವಿಭಾಗದ ಪೊಲೀಸರು ನಿಷ್ಠುರ ಕಾರ್ಯಾಚರಣೆಗಿಳಿದಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ಒಂದೇ ವಾರದಲ್ಲಿ ಭಾರಿ ಮೊತ್ತದ ದಂಡ ವಸೂಲಿ ಮಾಡಿದ್ದಾರೆ. ವಾರದಲ್ಲಿ ಬರೋಬ್ಬರಿ 3.34 ಕೋ ರೂ ದಂಡ ನವೆಂಬರ್ ಕೊನೆಯ ವಾರದಲ್ಲಿ ಅಂದರೆ ನವೆಂಬರ್ 23ರಿಂದ 29ರವರೆರಗೆ ಬರೋಬ್ಬರಿ 79,359 ಪ್ರಕರಣಗಳನ್ನು ಪತ್ತೆ ಮಾಡಿರುವ…

ಪಿಎಂ ಕೇರ್ಸ್ ಫಂಡ್‌ ಹಣ ಎಲ್ಲಿ ಹೋಯಿತು? ಏಕೆ ಆಡಿಟ್ ಮಾಡಲಿಲ್ಲ?; ಮೋದಿಗೆ ಮಮತಾ ಪ್ರಶ್ನೆ

ಕೋಲ್ಕತಾ: ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಪಿಎಂ ಕೇರ್ಸ್ ನಿಧಿಯ ಲೆಕ್ಕ ಕೇಳಿದ್ದಾರೆ. ಕೊಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿದರು. ಪಿಎಂ ಕೇರ್ಸ್ ನಿಧಿಯ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಜನತೆಗೆ ತಿಳಿಸಬೇಕು ಎಂದು ಮೋದಿ ಸರ್ಕಾರವನ್ನು ಒತ್ತಾಯಿಸಿದರು. ಪಿಎಂ ಕೇರ್ಸ್ ಫಂಡ್‌ನ ಲಕ್ಷ ಕೋಟಿ ಹಣ ಎಲ್ಲಿ ಹೋಯಿತು? ಏಕೆ ಆಡಿಟ್ ಮಾಡಲಿಲ್ಲ? ಮಮತಾ ಬ್ಯಾನರ್ಜಿ ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕೇಂದ್ರ ಸರ್ಕಾರ ನಮಗೆ ಏನು ನೀಡಿದೆ? ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದೂ ಅವರು ಆರೋಪಿಸಿದರು.

ಮೋದಿ ಸರ್ಕಾರದ ಭರವಸೆ ತಿರಸ್ಕರಿಸಿದ ಅನ್ನದಾತರು, ಡಿ.3ರಂದು ಮತ್ತೊಮ್ಮೆ ಸಂಧಾನ

ದೆಹಲಿ: ನೂತನ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಸಮಸ್ಯೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಸರ್ಕಾರ ನೀಡಿದ ಭರವಸೆಗಳನ್ನು ಪ್ರತಿಭಟನಾ ನಿರತ ಸಂಘಟನೆಗಳ ಪ್ರತಿನಿಧಿಗಳು ತಿರಸ್ಕರಿಸಿದ್ದಾರೆ. ಮಂಗಳವಾರ ಕೇಂದ್ರ ಸರ್ಕಾರ ನಡೆಸಿದ ಸಂಧಾನ ಸಭೆಯಲ್ಲಿ ಈ ಭರವಸೆ ನೀಡಲಾಯಿತಾದರೂ ಅದಕ್ಕೆ ರೈತ ಪ್ರತಿನಿಧಿಗಳು ನಿರಾಕರಿಸಿದರು. ಹಾಗಾಗಿ ಯಾವುದೇ ಪರಿಹಾರ ಕಾಣದೆ ಮೂರು ಕೇಂದ್ರ ಸಚಿವರ ಸಮ್ಮುಖದಲ್ಲಿ ನಡೆದ ಸಭೆ ಫಲ ಕಾಣಲಿಲ್ಲ. ಸಭೆಯಲ್ಲಿ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಜಾರಿಯಾಗಿರುವ ಮೂರು ನೂತನ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ರೈತ ಪ್ರತಿನಿಧಿಗಳು ಪಟ್ಟು ಹಿಡಿದರು. ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಗುರುವಾರ ಮತ್ತೊಂದು ಸುತ್ತಿನ ಚರ್ಚೆಗೆ ಸರ್ಕಾರ ಆಹ್ವಾನ ನೀಡಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 13 ರಂದು ನಡೆದ ಹಿಂದಿನ ಸಭೆಯಲ್ಲೂ ಯಾವುದೇ ಪ್ರಗತಿ ಇಲ್ಲದೆ ವಿಫಲವಾಗಿತ್ತು. ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಡಿ.3ಕ್ಕೆ…

ಎಚ್ ಐವಿ ಸೋಂಕಿತರಿಗೆ 5 ಲಕ್ಷ ರೂ.ವರೆಗೆ ಉಚಿತ ಔಷಧಿ

ಬೆಂಗಳೂರು: ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್‍ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮಂಗಳವಾರ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು, ಜವಾಬ್ದಾರಿಯ ಹಂಚಿಕೆಯೊಂದಿಗೆ ಏಡ್ಸ್ ನಿಯಂತ್ರಣಕ್ಕೆ ತರಬೇಕು ಎಂದು ಈ ಬಾರಿ ಘೋಷಿಸಲಾಗಿದೆ. ಎಚ್ ಐವಿಗೊಳಗಾದವರು ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಕೋವಿಡ್ ಬಂದಾಗ, ‘ರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧ ಅಲ್ಲ’ ಎಂಬ ಸಂದೇಶ ನೀಡಲಾಯಿತು. ಈ ಸಂದೇಶ ಎಲ್ಲ ರೋಗಗಳಿಗೂ ಅನ್ವಯವಾಗುತ್ತದೆ. ಏಡ್ಸ್ ರೋಗಿಗಳನ್ನು ಅವಮಾನಕಾರಿಯಾಗಿ ನೋಡಬಾರದು ಎಂದರು. ಎಚ್ ಐವಿ ಸೋಂಕಿತರಿಗೆ ಕೋವಿಡ್ ಕೂಡ ಬಂದರೆ ಕಷ್ಟ ಎಂದು ಮೊದಲಿಗೆ ಭಯವಾಗಿತ್ತು. ರಾಜ್ಯದಲ್ಲಿ 280 ಎಚ್ ಐವಿ ಸೋಂಕಿತರು ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಪೈಕಿ…

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಆಯುಕ್ತಾಲಯದ ಕಾರ್ಯನಿರ್ವಹಣೆ; ಸಚಿವರಿಂದ ಪರಿಶೀಲನೆ

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಆಯುಕ್ತಾಲಯದ ಕಾರ್ಯನಿರ್ವಹಣೆ ಮತ್ತು ಹೊಣೆಗಾರಿಕೆ ವಿಷಯಗಳ ಬಗ್ಗೆ ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಆಯುಕ್ತಾಲಯದ ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದರು. ಆಹಾರ ಸುರಕ್ಷತಾ ಆಯುಕ್ತಾಲಯದ ಆಯುಕ್ತೆ ಮಂಜುಶ್ರೀ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ 400 ಕೋ.ರೂ. ಒದಗಿಸಿ; ಸಿಎಂಗೆ ಒತ್ತಡ

ಬೆಂಗಳೂರು: ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಪ್ರಸಕ್ತ ವರ್ಷದಲ್ಲಿ 400 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು ಎಂಬ ಮನವಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ನಿಯೋಗ ಮಂಗಳವಾರ ಬೆಳಿಗ್ಗೆ ವಿಧಾನಸೌದ ದಲ್ಲಿ ನಗರಾಭಿವೃದ್ಧಿ ಸಚಿವರಾದ  ಬಿ.ಎ.ಬಸವರಾಜ ಅವರನ್ನು ಭೇಟಿ ಮಾಡಿ ನೀಡಿದ್ದರು. ಈ ನಿಯೋಗದ ಜೊತೆ ಚರ್ಚೆ ನಡೆಸಿದ ನಂತರ ಬಿ.ಎ.ಬಸವರಾಜ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಇರುವ ಕುರುಬರ ಸ್ಥಿತಿಗತಿಗಳ ಬಗ್ಗೆ ವಿವರಣೆ ನೀಡಿ ಸಮಸ್ತ ಕುರುಬ ಸಮಾಜದ ಪರವಾಗಿ ಮಾನ್ಯ ನಗರಾಭಿವೃದ್ಧಿ ಸಚಿವರು, ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮಾಜದ ಅಭಿವೃದ್ಧಿಗೆ ಪ್ರಸಕ್ತ ವರ್ಷದಲ್ಲಿ 400 ಕೋಟಿ ರೂಪಾಯಿಗಳನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.