ಭಾರತದಲ್ಲೂ ಶರವೇಗದಲ್ಲಿ ಹರಡುತ್ತಿರುವ ರೂಪಾಂತರಿ ವೈರಾಣು

ದೆಹಲಿ; ಭಾರತದಲ್ಲೂ ಬ್ರಿಟನ್ ರೂಪಾಂತರಿ ಕೊರೋನಾ ವೈರಾಣು ತಲ್ಲಣ ಸೃಷ್ಟಿಸಿದೆ. ಕೊರೋನಾ ವೈರಾಣುಗಿಂತಲೂ ಭಯಾನಕತೆಗೆ ಕೊಂಡೊಯ್ಯುವ ರೂಪಾಂತರಿ ಪ್ರಬೇಧ ಮಂಗಳವಾರ 10 ಮಂದಿಯಲ್ಲಿ ದೃಢಪಟ್ಟಿತ್ತು. ಈ ಸಂಖ್ಯೆ ಇಂದು ಬೆಳಗಾಗುವಷ್ಟರಲ್ಲಿ 20 ಕ್ಕೆ ಏರಿಕೆಯಾಗಿದೆ. ಕೇವಲ ಬ್ರಿಟನ್’ನಿಂದ ಬಂದವರಷ್ಟೇ ಅಲ್ಲ, ಅವರನ್ನು ಸಂಪರ್ಕಿಸಿದವರಲ್ಲೂ ಈ ವೈರಾಣು ಸೋಂಕು ಕಂಡು ಬಂದಿದೆ. ದೆಹಲಿಯಲ್ಲಿ 8 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ 7 ಮಂದಿ ಈ ಹೊಸ ಪ್ರಬೇಧದ ವೈರಾಣು ಸೋಂಕಿನಿಂದ ಬಳಲುತ್ತಿದ್ದಾರೆ ಎಂಬ ಅಂಕಿ ಅಂಶ ಸಿಕ್ಕಿದೆ. ಕರ್ನಾಟಕದಲ್ಲೂ ಮಂಗಳವಾರ 3 ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಾಣು ಆತಂಕ; ಮತ್ತೆ ಸೀಲ್ ಡೌನ್ ರಗಳೆ

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೋನಾ ವೈರಾಣು ಆತಂಕ ಸೃಷ್ಟಿಸಿದೆ. ಬೆಂಗಳೂರಿನ ಬಹುಮಹಡಿ ಕಟ್ಟಡವೊಂದರಲ್ಲಿ ನೆಲೆಸಿದ್ದ ಇಬ್ಬರು ವ್ಯಕ್ತಿಗಳಲ್ಲಿ ಈ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ಕಟ್ಟಡವನ್ನು ಸೀಲ್‌ಡೌನ್‌ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ ಬೊಮ್ಮನಹಳ್ಳಿ ಸಮೀಪದ ಆ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸುಮಾರು ೨೨ ಕುಟುಂಬಗಳು ವಾಸವಿದೆ. ಅಲ್ಲಿದ್ದ ತಾಯಿ ಹಾಗೂ ಮಗಳಿಗೆ ಸೋಂಕು ದೃಢಪಟ್ಟಿದ್ದರಿಂದ, ಬಿಬಿಎಂಪಿ ಅಧಿಕಾರಿಗಳು ಕಟ್ಟಡದಲ್ಲಿ 22 ಕುಟುಂಬಗಳನ್ನು ಬೇರೆಡೆಗೆ ವರ್ಗಾಯಿಸಿ ಕ್ವಾರಂಟೈನ್‌ನಲ್ಲಿರಿಸಲು ಯತ್ನಿಸಿದರು. ಆದರೆ, ನಿವಾಸಿಗಳು ಹೊರಬರಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಡೀ ಅಪಾರ್ಟ್‌ಮೆಂಟನ್ನು ಸೀಲ್‌ಡೌನ್‌ ಮಾಡಲಾಗಿದೆ. ಒಂದೇ ಲಿಫ್ಟ್ ಮತ್ತು ಮೆಟ್ಟಿಲುಗಳನ್ನು ಬಳಸಿದ್ದರಿಂದ ಅವರೆಲ್ಲರೂ ದ್ವಿತೀಯ ಸಂಪರ್ಕ ವ್ಯಕ್ತಿಗಳಾಗಿದ್ದಾರೆ. ಹಾಗಾಗಿ ಅವರ ಮಾದರಿಗಳನ್ನು ಆರ್‌ಟಿಪಿಸಿಆರ್ ಪರೀಕ್ಷೆಗಳಿಗಾಗಿ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಕ್ಕೆ ಹೊಸ ಆರೋಗ್ಯ ನೀತಿ; ರಾಜ್ಯಕ್ಕೆ ಸಿಗಲಿದೆ ಏಮ್ಸ್ ಸಂಸ್ಥೆ

ಬೆಂಗಳೂರು,: ರಾಜ್ಯಕ್ಕೆ ಹೆಚ್ಚು ವೈದ್ಯರು ಅಗತ್ಯವಿರುವುದರಿಂದ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಬೇಕಾಗುತ್ತದೆ. ಇದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಶಿವಾಜಿನಗರದಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಒಂದು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 600-700 ಕೋಟಿ ರೂ. ಬೇಕಾಗುತ್ತದೆ. ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸ, ಜನರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡಬಹುದು. ಗುಜರಾತ್ ನಲ್ಲಿ ಈ ರೀತಿ ಪ್ರಯತ್ನ ನಡೆಯುತ್ತಿದ್ದು, ನಮ್ಮಲ್ಲೂ ಈ ಬಗೆಯ ಪ್ರಯತ್ನ ಮಾಡಲಾಗುವುದು ಎಂದರು. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಒಂದು ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ ಇರಬೇಕು. ಆದರೆ ದೇಶದಲ್ಲಿ 10-12…

ಕಳೆ ಕಟ್ಟಿದ ಸಾಂಸ್ಕೃತಿಕ ತಂಡಗಳ ಪ್ರದರ್ಶನ, ಹಬ್ಬದ ಸಡಗರ

ಬೆಂಗಳೂರು: ಕುವೆಂಪು ಜನ್ಮ ದಿನದ ಪ್ರಯುಕ್ತ ಮಲ್ಲೇಶ್ವರಂನಲ್ಲಿ ವಿವಿಧ ಸಾಂಸ್ಕೃತಿಕ ತಂಡಗಳ ಪ್ರದರ್ಶನದೊಂದಿಗೆ ಹಬ್ಬದ ವಾತಾವರಣ ಕಂಡುಬಂತು. ಮಂಗಳವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಿ.ಸೋಮಶೇಖರ್, ಸಾ.ರಾ.ಗೋವಿಂದು ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸಾಗಿದ ಕನ್ನಡಿಗರ ಚೈತನ್ಯ ರಥದ ಮೆರವಣಿಗೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕುವೆಂಪು ಅವರ ಚಿತ್ರವನ್ನುಳ್ಳ ಭಿತ್ತಿಪತ್ರದೊಂದಿಗೆ 50ಕ್ಕೂ ಹೆಚ್ವು ಅಟೊಗಳು ಮಲ್ಲೇಶ್ವರಂನ ವಿವಿಧ ರಸ್ತೆಗಳ ಮೂಲಕ ಸಾಗಿ ಗಮನ ಸೆಳೆದವು. ಈ ವೇಳೆ, ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸರ್ವಕಾಲಕ್ಕೂ ಸಲ್ಲುವ ಕುವೆಂಪು ಅವರ ಸಾಹಿತ್ಯ ಕೃತಿಗಳನ್ನು ಪ್ರಪಂಚದ ಎಲ್ಲಾ ಪ್ರಮುಖ ಭಾಷೆಗಳಿಗೆ ಅನುವಾದ ಮಾಡಿಸಿ ಜಗತ್ತಿನೆಲ್ಲೆಡೆಯ ಓದುಗರಿಗೆ ಅವನ್ನು ಲಭ್ಯವಾಗಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕುವೆಂಪು ಅವರ ಸಾಹಿತ್ಯವು ಕಾಲದ ತೆಕ್ಕೆಯನ್ನು ಮೀರಿದ್ದು. ಇತ್ತೀಚೆಗೆ…

ಉಪಸಭಾಪತಿ ಧರ್ಮೇಗೌಡರ ನಿಧನಕ್ಕೆ ಶರವಣ ಸಂತಾಪ

ಬೆಂಗಳೂರು: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮಾಜಿ ಶಾಸಕ, ಜೆಡಿಎಸ್ ನಾಯಕ ಟಿ.ಎ.ಶರವಣ ಸಂತಾಪ ಸೂಚಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ, ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ ಎಂದು ಟಿ.ಎ.ಶರವಣ ಟ್ವೀಟ್ ಮಾಡಿ ನೋವು ಹಂಚಿಕೊಂಡಿದ್ದಾರೆ. ಅವರ ಜೊತೆ ಎರಡು ವರ್ಷ ವಿಧಾನಪರಿಷತ್ತಿನಲ್ಲಿ ಕೆಲಸ ಮಾಡಿರುವೆ, ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ ಎಂದಿರುವ ಟಿ.ಎ.ಶರವಣ, ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ, ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ.ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ. pic.twitter.com/OZImELU5Na — Sharavana…

ಧರ್ಮೇಗೌಡ ನಿಧನಕ್ಕೆ ಕುಮಾರಸ್ವಾಮಿ ಸಂತಾಪ

ಬೆಂಗಳೂರು: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಚ್​.ಡಿ.ಕುಮಾರಸ್ವಾಮಿ, ಸಹೋದರರಂತಿದ್ದ ಧರ್ಮೆಗೌಡರ ಸಾವಿನ ಸುದ್ದಿ ತೀವ್ರ ಆಘಾತ ತಂದಿದೆ ಎಂದಿದ್ದಾರೆ. ಅವರ ಕುಟುಂಬಕ್ಕೆ ನೋವು ಭರಿಸುವ ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ, @Janatadal_S ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ. — H D Kumaraswamy (@hd_kumaraswamy) December 29, 2020

ಧರ್ಮೇಗೌಡ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಸಿಎಂ ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.

Uncategorized

ಉಪಸಭಾಪತಿ ಎಸ್​.ಎಲ್​.ಧರ್ಮೇಗೌಡ ನಿಧನಕ್ಕೆ ಎಚ್​.ಡಿ.ದೇವೇಗೌಡ ಕಂಬನಿ

ಬೆಂಗಳೂರು: ಜೆಡಿಎಸ್ ಮುಖಂಡ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧಾನ ಜೆಡಿಎಸ್ ಕಾರ್ಯಕರ್ತರಿಗೆ ಅತೀವ ನೋವು ತಂದಿದೆ. ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಪಕ್ಷದ ಮುಖಂಡರು ಕಂಬನಿ ಮಿಡಿದಿದ್ದಾರೆ. ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಉಪಸಭಾಪತಿ ನಿಧನ ಬಗ್ಗೆ ಟ್ವೀಟ್ ಮಾಡುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯಕ್ಕೆ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಹಾಗೂ @JanataDal_S ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ. — H…

ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಇದುವೇ ಕಾರಣ?

ಬೆಂಗಳೂರು: ಜೆಡಿಎಸ್ ಮುಖಂಡ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಸಾವಿನ ಸುತ್ತ ಸಹಜವೆಂಬಂತೆಯೇ ಅನುಮಾನಗಳು ಹುಟ್ಟಿಕೊಂಡಿದೆ. ಕಡೂರು ಸಮೀಪ ರೈಲು ಹಳಿಯ ಪಕ್ಕದಲ್ಲೇ ಅವರ ಮೃತದೇಹ ಪತ್ತೆಯಾಗಿದೆ. ರುಂಡ ಮುಂದ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದೇ ಹೇಳಲಾಗುತ್ತಿದೆ. ಆದರೆ ಈ ಸಾವು ನ್ಯಾಯವೇ? ಈ ಸಾವಿಗೆ ಕಾರಣವಾದರೂ ಏನು? ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಎಸ್.ಎಲ್. ಧರ್ಮೇಗೌಡ ಅವರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸದೃಢ ಕುಟುಂಬದ ಹಿನ್ನೆಲೆಯವರು. ಆದರೆ ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ಸಭಾಪತಿ ಪೀಠದ ಮೇಲೆ ಕುಳಿತಿದ್ದ ಅವರನ್ನ ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದರು. ಆ ದಿನದ ಗಲಾಟೆಯ ಘಟನೆ ಧರ್ಮೇಗೌಡ ಅವರ ಮನಸಿಗೆ ತುಂಬಾ ನೋವು ತಂದಿತ್ತು. ಈ ನೋವಿನ ಅಕ್ಷರಗಳು ಡೆತ್ ನೋಟ್​ನಲ್ಲಿ ಇದೆ ಎನ್ನಲಾಗಿದೆ. ಸೋಮವಾರ ಸಂಜೆ 6:30ಕ್ಕೆ ಸಖರಾಯಪಟ್ಟಣದಿಂದ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೊರಟ ಎಸ್.ಎಲ್. ಧರ್ಮೇಗೌಡ ಅವರು…

ಪರಿಷತ್ ಫೈಟ್’ನಿಂದ ಬೇಸತ್ತಿದ್ದ ಉಪಸಭಾಪತಿ ಧರ್ಮೇಗೌಡ ಇನ್ನಿಲ್ಲ

ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ವಿಧಿವಶರಾಗಿದ್ದಾರೆ. ಸೋಮವಾರ ರಾತ್ರಿ ಅವರ ಮೃತದೇಹ ಕಡೂರು ತಾಲೂಕು ಬಳಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ ದೇಹ ಪತ್ತೆಯಾಗಿದ್ದು, ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗುತ್ತಿದೆ. ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಘಟನೆಯಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಅನುಮಾನ ಕಾಡತೊಡಗಿದೆ. ಸೋಮವಾರ ಸಂಜೆ 6:30ಕ್ಕೆ ಸಖರಾಯಪಟ್ಟಣದಿಂದ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೊರಟ ಎಸ್.ಎಲ್. ಧರ್ಮೇಗೌಡ ಅವರು ಕಡೂರು ಸಮೀಪದ ಗುಣಸಾಗರ ಬಳಿ ಕಾರಿನಿಂದ ಇಳಿದು ಒಬ್ಬ ವ್ಯಕ್ತಿ ಜೊತೆ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಹೋದರೆನ್ನಲಾಗಿದೆ. ನಂತರ ಕಡೂರಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಶತಾಬ್ದಿ ಎಕ್ಸ್​ಪ್ರೆಸ್ ಬರುವ ಸಮಯ ವಿಚಾರಿಸಿದರೆನ್ನಲಾಗಿದೆ. ಅದಾದ ಸ್ವಲ್ಪ ಹೊತ್ತಿನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ.