ಹೆಲ್ಮೆಟ್ ವಿಷಯ.. ರಸ್ತೆಗಳಲ್ಲಿನ್ನು ಕಳ್ಳ-ಪೊಲೀಸ್ ಆಟವಿಲ್ಲ

ಬೆಂಗಳೂರು: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುವವರನ್ನು , ಸೀಟ್ ಬೆಲ್ಟ್ ಹಾಕದೆ ಕಾರು ಚಲಾಯಿಸುತ್ತಿರುವವರನ್ನು ಕಾಡುತ್ತಿರುವ ಪೊಲೀಸರಿಗೆ ಸದ್ಯಕ್ಕೆ ಬ್ರೇಕ್.. ಸಾರ್ವಜನಿಕರಿಗೂ ರಿಲೀಫ್.. ಆದರೆ ಕಾನೂನು ಉಲ್ಲಂಘಿಸಿದಲ್ಲಿ ನಿಲ್ಲದು ಫೈನ್. ಏನಿದು ಅಚ್ಚರಿ ಅಂತೀರಾ? ಈ ವರೆಗೂ ಬೆಂಗಳೂರಿನ ರಸ್ತೆಗಳು ವಾಹನ ಸವಾರರು ಮತ್ತು ಹಾಗೂ ಸಂಚಾರ ಪೊಲೀಸರ ನಡುವೆ ನಿತ್ಯವೂ ಕಳ್ಳ-ಪೊಲೀಸ್ ಆಟದ ರೀತಿ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದ್ದವು. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸವಾರಿ ಕೈಗೊಂಡರೆ ದಂಡ ಕಟ್ಟಿಟ್ಟ ಬುತ್ತಿ. ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದರೂ ಫೈನ್. ಸಿಗ್ನಲ್ ಜಂಪ್ ಮಾಡಿದರಂತೂ ಜೇಬಿಗೆ ಕತ್ತರಿ ಗ್ಯಾರಂಟಿ. ತಿರುವು ರಸ್ತೆಗಳಲ್ಲಿ, ಮರಗಳ ಮರೆಯಲ್ಲಿ ನಿಂತು ಪೊಲೀಸ್ ಸಿಬ್ಬಂದಿ ಈ ನಿಯಮ ಉಲ್ಲಂಘನೆ ಬಗ್ಗೆ ಹದ್ದಿನ ಕಣ್ಣಿಡುತ್ತಿದ್ದರು. ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದ ನೂರಾರು ಮಂದಿಯಿಂದ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡುತ್ತಿದ್ದರು. ಆದರೆ ಈ…

263 ಕಡೆ ಲಸಿಕೆ ತಾಲೀಮು: ಜನಾಂದೋಲನ ರೀತಿ ವಿತರಣೆ ಕಾರ್ಯ

ಬೆಂಗಳೂರು: ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ 263 ಕೇಂದ್ರಗಳನ್ನು ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ಸಂಬಂಧ ರಾಜ್ಯ ಸರ್ಕಾರ ಗುರುತಿಸಿದೆ.ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಅವರೊಂದಿಗೆ ಮಾಹಿತಿ ಹಂಚಿಕೊಂಡಿರುವ ರಾಜ್ಯದ ಆರೋಗ್ಯ ಸಚಿವ ಡಾ.ಸುಧಾಕರ್, ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ತಿಳಿಸಿದ್ದಾರೆ. ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜನವರಿ 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30…

ಸಂಕ್ರಾಂತಿಗೆ ಜನಸೇವಕ ಯೋಜನೆ ಪುನರಾರಂಭ: ಸುರೇಶ್ ಕುಮಾರ್

ಬೆಂಗಳೂರು: ನಾಗರಿಕರ ಮನೆಬಾಗಿಲಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಜನಸೇವಕ ಯೋಜನೆಯನ್ನು ಜನವರಿ 15ಕ್ಕೆ ಬೆಂಗಳೂರಿನ 05 ವಿಧಾನಸಭಾ ಕ್ಷೇತ್ರಗಳಲ್ಲಿ ಮರು ಪ್ರಾರಂಭಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರದ ಸಂಬಂಧಿತ ಕ್ಷೇತ್ರಗಳ ಶಾಸಕರ ಸಭೆ‌ ನಡೆಸಿ ಸಹಕಾರ ಕೋರಿದ ಸಚಿವರು ಸರ್ಕಾರದ ಈ‌ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಸಹಕಾರ ಸಚಿವರಾದ ಶ್ರೀ.ಎಸ್.ಟಿ.ಸೋಮಶೇಖರ್, ಶಾಸಕ ಸತೀಶ್‌ ರೆಡ್ಡಿ, ಇ ಆಡಳಿತ ಇಲಾಖೆಯ ಅಪರ‌ ಮುಖ್ಯ ಕಾರ್ಯದರ್ಶಿ ರಾಜೀವ ಚಾವ್ಲಾ, ಬೆಂಗಳೂರು ನಗರದ ಅಪರ ಜಿಲ್ಲಾಧಿಕಾರಿ, ಬಿಬಿಎಂಪಿ ವಿಶೇಷ ಆಯುಕ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೂ ಜನಸೇವಕ ಯೋಜನೆಯನ್ನು ವಿಸ್ತರಿಸಲಾಗುತ್ತಿದ್ದು, ಬಿಬಿಎಂಪಿಯ ಖಾತಾ ವರ್ಗಾವಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಸೇವೆಗಳು,  ಆಧಾರ್ ಕಾರ್ಡಿನಲ್ಲಿನ ದೋಷಗಳ ತಿದ್ದುಪಡಿ, ಕಂದಾಯ ಇಲಾಖೆ, ಪೊಲಿಸ್…

ಚಾಮರಾಜನಗರ ಜಿಲ್ಲೆಯಲ್ಲಿ ಬಂಡವಾಳ ಆಕರ್ಷಣೆಗೆ ತಮಿಳುನಾಡು, ಕೇರಳದಲ್ಲಿ ರೋಡ್‌ ಶೋ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಅವಕಾಶಗಳಿವೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಹಲವಾರು ಪ್ರಸ್ತಾವನೆಗಳು ಬಂದಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಇನ್ನೂ ಹೆಚ್ಚಿನ ಬಂಡವಾಳ ಆಕರ್ಷಣೆಗೆ ಹಾಗೂ ಇಲ್ಲಿರುವ ಅವಕಾಶಗಳ ಬಗ್ಗೆ ಪ್ರಚಾರ ಮಾಡುವ ಉದ್ದೇಶದಿಂದ ತಮಿಳುನಾಡಿನ ಕೊಯಮತ್ತೂರು, ತಿರಪೂರ್ ಹಾಗೂ ಕೇರಳ ರಾಜ್ಯಗಳಲ್ಲಿ ರೋಡ್‌ ಶೋ ಆಯೋಜಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಬದನಗುಪ್ಪೆ – ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಸಚಿವ ಜಗದೀಶ ಶೆಟ್ಟರ್, ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೈಗಾರಿಕಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೈಗಾರಿಕೋದ್ಯಮಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿಫುಲ ಅವಕಾಶಗಳು ಇವೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಸಮೀಪವಾಗಿರುವ ಈ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು…

ಜನಸ್ನೇಹಿಯಾಗಿ ಸ್ಮಾರ್ಟ್ ಸಿಟಿ ಕಾಮಗಾರಿ; ಅಧಿಕಾರಿಗಳಿಗೆ ಬಸವರಾಜ್ ಸಲಹೆ

ಬೆಂಗಳೂರು: ನಗರಗಳ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಅಖಾಡಕ್ಕಿಳಿದಿರುವ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯಿಂದಾಗಿ ಹಲವೆಡೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಜನಸ್ನೇಹಿಯಾಗಿ ಕಾಮಗಾರಿ ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವರಲಕ್ಷ್ಮಿ ಗುಂಡೂರಾವ್ ಅವರಿಗೆ ಡಿಕೆಶಿ ಶ್ರದ್ದಾಂಜಲಿ

ಬೆಂಗಳೂರು: ಮಾತೃ ವಿಯೋಗಕ್ಕೆ ಒಳಗಾಗಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ರಾತ್ರಿ ತೆರಳಿ, ವರಲಕ್ಷ್ಮಿ ಗುಂಡೂರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ಟಬು ಅವರಿಗೆ ಸಾಂತ್ವನ ಹೇಳಿದರು.