ಬಿಎಸ್’ವೈ ಭವಿಷ್ಯ; ಸಿಎಂ ಬದಲಾವಣೆ ಸನ್ನಿಹಿತವೆ?

ಬೆಂಗಳೂರು: ಬಿಜೆಪಿ ಹೈಕಮಾಂಡ್’ನಿಂದ ಸಿಎಂ ಯಡಿಯೂರಪ್ಪ ಅವರಿಗೆ ಬುಲಾವ್.. ಬಿಜೆಪಿಯಲ್ಲಿನ ಈ ದಿಢೀರ್ ವಿದ್ಯಮಾನ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ರಾಜ್ಯ ಸರ್ಕಾರದ ಸಂಪುಟ ಸಚಿವರ ಬೇಗುದಿ, ರಾಜ್ಯ ಬಿಜೆಪಿ ನಾಯಕರ ನಡುವಿನ ಶೀತಲ ಸಮರದ ನಡುವೆ ನಾಯಕತ್ವ ಬದಲಾವಣೆ ಸಾಧ್ಯತೆಯ ಮಾತುಗಳು ಕೆಲವು ದಿನಗಳಿಂದ ಹೆಚ್ಚಾಗಿ ಚರ್ಚೆಗೆ ಬರುತ್ತಿವೆ. ಅದರಲ್ಲೂ ಡಿನೋಟಿಫಿಕೇಷನ್ ಅಕ್ರಮ ಕುರಿತಂತೆ ಹೈಕೋರ್ಟ್ ನೀಡಿರುವ ಆದೇಶಗಳು ಬಿಜೆಪಿ ಹೈಕಮಾಂಡ್’ಗೆ ಸಹಾಯವಾಗಿಯೇ ಮುಜುಗರವನ್ನುಂಟು ಮಾಡಿದೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ವರಿಷ್ಠರು ದೆಹಲಿಗೆ ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳಿಗೆ ರೋಚಕತೆ ತುಂಬಿದ್ದಾರೆ. ಸಿಎಂ ಬದಲಾವಣೆ ಸನ್ನಿಹಿತವೆ? ಬಿಜೆಪಿ ಪಾಳಯದಲ್ಲಿ ಯಾವಾಗ ಏನು ಬೇಕಾದರೂ ನಡೆಯಬಹುದು ಎಂಬ ಮಾತಿದೆ. ಅದರಲ್ಲೂ ರಾಜ್ಯ ರಾಜಕೀಯದ ಸ್ಥಿತಿ ಗಮನಿಸಿದರೆ ಸದ್ಯವೇ ಕುತೂಹಲಕಾರಿ ಬೆಳವಣಿಗೆ ಸನ್ನಿಹಿತ ಎಂಬ ವಿಶ್ಲೇಷಣೆ ಸಾಗಿದೆ. ಅಧಿಕಾರ…

ಕೊಪ್ಪಳ ಟಾಯ್ಸ್ ಕ್ಲಸ್ಟರ್; ಯಾರಿಂದಲೋ ತಯಾರು ಇನ್ಯಾರದ್ದೋ ಹೆಸರು?

ಬೆಂಗಳೂರು: ಯಾರಿಂದಲೋ ತಯಾರು ಇನ್ಯಾರದ್ದೋ ಹೆಸರು ಎಂಬ ಅಪವಾದಕ್ಕೆ ಗುರಿಯಾಯಿತೇ ದೇಶದ ಮೊದಲ ಟಾಯ್ಸ್ ಕ್ಲಸ್ಟರ್? ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ತಾವು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇದೀಗ ಮರು ಚಾಲನೆ ನೀಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!1/4 — H D Kumaraswamy (@hd_kumaraswamy)…

ಭಾರತದ ಮೊಟ್ಟ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ನಿರ್ಮಾಣಕ್ಕೆ ಅಡಿಗಲ್ಲು

ಕೊಪ್ಪಳ: ಆಟಿಕೆಗಳ ಕ್ಲಸ್ಟರ್‌ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಅರಣ್ಯ ಸಚಿವ ಆನಂದ್ ಸಿಂಗ್, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ, ಏಕಸ್ ಕಂಪೆನಿಯ ಚೇರ್ಮನ್ ಅರವಿಂದ ಮೆಳ್ಳಿಗೆರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಕಸ್ ಟಾಯ್ ಕ್ಲಸ್ಟರ್ ಕರ್ನಾಟಕ ಸರ್ಕಾರದ ‘ನಿರ್ದಿಷ್ಟ ಉತ್ಪನ್ನ ಕೈಗಾರಿ ಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಒಂದು ಪ್ರಮುಖ ಭಾಗವಾಗಿದ್ದು, ಆಟಿಕೆ ಕ್ಲಸ್ಟರ್ ಸ್ಥಾಪನೆ ಮಾಡುವ ಮೂ ಲಕ ನಾವು 1 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುತ್ತಿದ್ದೇವೆ. ಇದಕ್ಕೆ 5 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವನ್ನು ಆಕರ್ಷಣೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಭಾರತದ ಮೊಟ್ಟ ಮೊದಲ ಆಟಿಕೆ…

ಉಡುಪಿ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಸಮಸ್ಯೆ; ಶಾಸಕ ರಘುಪತಿ ಭಟ್ ಸಿಎಂ ಭೇಟಿ

ಬೆಂಗಳೂರು: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕೃಷಿ ವಲಯದಲ್ಲಿ ಭೂ ಪರಿವರ್ತನೆ ಸಮಸ್ಯೆ, ಏಕ ನಿವೇಶನ ಮಾಡಲು ರಸ್ತೆ ದಾನ ಪತ್ರದ ಬಗ್ಗೆ ಭೂಪರಿವರ್ತನೆ ಸಮಸ್ಯೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಇತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರುಗಳು ಈ ವೇಳೆ ಉಪಸ್ಥಿತರಿದ್ದರು. ಮುಖ್ಯಮಂತ್ರಿಯವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ತಾಂತ್ರಿಕ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿ ಬಗೆಹರಿಸುವ ಭರವಸೆಯನ್ನು ನೀಡಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕೆ. ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ್ ಕುಮಾರ್ ಶೆಟ್ಟಿ , ದಿನಕರ ಪೂಜಾರಿ ಕುಂಜಿಬೆಟ್ಟು ಉಪಸ್ಥಿತರಿದ್ದರು.

ಮತ್ತೊಮ್ಮೆ ರಾಜ್ಯದಲ್ಲಿ ಅಮಿತ್ ಶಾ ಶಕ್ತಿಪ್ರದರ್ಶನ; ಬೆಳಗಾವಿಯಲ್ಲಿ ಜ.17ರಂದು ಬಿಜೆಪಿ ಬೃಹತ್ ಸಮಾವೇಶ

ಬೆಂಗಳೂರು: ಬೆಳಗಾವಿಯಲ್ಲಿ ಜನವರಿ 17ರಂದು ಬಿಜೆಪಿ ಬೃಹತ್ ಸಾರ್ವಜನಿಕ ಸಭೆs ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನವರಿ 11ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗೋಪೂಜೆ ಮತ್ತು ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಜನಸೇವಕ ಸಮಾವೇಶದ ಉದ್ಘಾಟನೆ ನಡೆಯಲಿದೆ. ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್‌ಗಳಲ್ಲೂ ಬಿಜೆಪಿ ಅಧಿಕಾರ ಪಡೆಯುವ ದೃಷ್ಟಿಯಿಂದ ಮಹತ್ವದ ಹೆಜ್ಜೆ ಇದಾಗಿದೆ ಎಂದು ವಿವರ ನೀಡಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ,…

ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.