ಸದ್ಯದಲ್ಲೇ ತೆರೆಯ ಮೇಲೆ ‘ಮೈಸೂರ್ ಸ್ಯಾಂಡಲ್’

‘ಮೈಸೂರ್ ಸ್ಯಾಂಡಲ್’ ಹೆಸರಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಸಿನಿಮಾ ತೀವ್ರ ಕುತೂಹಲ ಸೃಷ್ಟಿಸಿದೆ. ವಿಶಾಲ್ ಕುಮಾರ್ ಮತ್ತು ಮಹಿಮಾ ಅಭಿನಯದ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊ ಸಕತ್ ವೈರಲ್ ಆಗುತ್ತಿದೆ.

ಕೊರೋನಾ ಆಯಿತು.. ‘ರೂಪಾಂತರಿ’ ಬಂತು.. ಇದೀಗ ಮತ್ತೊಂದು ಹೊಸ ವೈರಸ್..

ದೆಹಲಿ: ಚೀನಾದಲ್ಲಿ ಹುಟ್ಟಿ ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾದ ರೂಪಾಂತರಿ ಇದೀಗ ಹಲವು ಭೀತಿಯ ಅಲೆಯನ್ನೇ ಸೃಷ್ಟಿಸಿದೆ. ಇದರ ಜೊತೆಯಲ್ಲೇ ಉದಯ ರವಿ ನಾಡು ಜಪಾನಿನನಲ್ಲಿ ಮತ್ತೊಂದು ಹೊಸ ಪ್ರಬೇಧದ ವೈರಾಣು ಸೋಂಕು ಪತ್ತೆಯಾಗಿದೆ. ಬ್ರಿಟನ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ರೂಪಾಂತರಿ ಕೊರೋನಾ ವೈರಸ್ ನ ಮತ್ತೊಂದು ರೂಪ ಇದಾಗಿದೆ ಎನ್ನಲಾಗುತ್ತಿದೆ. ಬ್ರೆಜಿಲ್ ನಿಂದ ಜಪಾನ್ ಗೆ ತೆರಳಿದ್ದ ಹಲವರಲ್ಲಿ ಈ ಪರಿವರ್ತಿತ ಹೊಸ ಮಾದರಿಯ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಟೋಕಿಯೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ರೆಜಿಲ್ ನಿಂದ ಬಂದಿದ್ದ 40 ವರ್ಷದ ವ್ಯಕ್ತಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದು ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್ ಗಿಂತಲೂ ಭಿನ್ನವಾಗಿದೆ ಎಂದು ಜಪಾನ್ ಸರ್ಕಾರ ಹೇಳಿದೆ.

ಹೊನ್ನಾಳಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಪಂಚಾಯತ್ ಸಮರ ವಿಜೇತರಿಗೆ ಸನ್ಮಾನ

ದಾವಣಗೆರೆ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದ ಭಾರತೀಯ ಜನತಾ ಪಕ್ಷ ಬೆಂಬಲಿಗರು ಗೆದ್ದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಯಿತು. ಬೃಹತ್ ಸಮಾವೇಶದಲ್ಲಿ ಪಂಚಾಯತ್ ನೂತನ ಸದಸ್ಯರನ್ನು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಅಭಿನಂದಿಸಲಾಯಿತು. ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹಿತ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಕೊರೊನಾ ಲಸಿಕೆ‌ ಸಂಗ್ರಹಕ್ಕೆ ಸಿದ್ಧತೆ ಪೂರ್ಣ: ವ್ಯವಸ್ಥೆ ಪರಿಶೀಲಿಸಿದ ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಲಸಿಕೆ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಸಂಜೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈಗಾಗಲೇ ಪ್ರಧಾನಿಗಳು ಜನವರಿ 16 ರಿಂದ ಕೊರೊನಾ ಲಸಿಕೆ ನೀಡುವ ಬಗ್ಗೆ ತಿಳಿಸಿದ್ದಾರೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ 3 ಕೋಟಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ ಎಂದರು. ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 2 ಲಸಿಕೆ ಸಂಗ್ರಹ ವ್ಯವಸ್ಥೆಗಳಿವೆ. ಇದಲ್ಲದೆ, ಚಿತ್ರದುರ್ಗ, ಕಲಬುರಗಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಬಾಗಲಕೋಟೆಯಲ್ಲಿ 5…

ಸಂಪುಟ ಸೇರಲು ಭರ್ಜರಿ ಪೈಪೋಟಿ; ಇವರೇ ಅದೃಷ್ಟವಂತರು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಂಕ್ರಾಂತಿ ಆಚರಣೆಗೆ ತಯಾರಿಗೆ ಮುನ್ನ ಇದೀಗ ಸಂಪುಟ ವಿಸ್ತರಣೆಯ ಸಡಗರ ಮನೆಮಾಡಿದೆ. ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಲಗಾರ ಬಿಎಸ್’ವೈ ಅವರು ಸಂಕ್ರಾಂತಿಗೆ ಮುನ್ನವೇ ಸಂಪುಟ ವಿಸ್ತರಣೆ ಮಾಡಲಿದ್ದು ಸಚಿವಾಕಾಂಕ್ಷಿಗಳಿಂದ ಲಾಬಿಯೂ ಬಿರುಸುಗೊಂಡಿದೆ. ಆದರೆ ಯಾರೆಲ್ಲಾ ಸಂಪುಟ ಸೇರಲಿದ್ದಾರೆ ಎಂಬುದೇ ಈಗಿರುವ ಕುತೂಹಲ. ಎಂ.ಟಿ.ಬಿ.ನಾಗರಾಜ್, ಶಂಕರ್, ಅರವಿಂದ ಲಿಂಬಾವಳಿ, ಸಿ.ಪಿ.ಯೋಗೀಶ್ವರ್, ಪ್ರೀತಮ್ ಗೌಡ, ಯತ್ನಾಳ್, ಉಮೇಶ್ ಕತ್ತಿ, ಹಾಲಪ್ಪ ಆಚಾರ್, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಸುನಿಲ್ ಕುಮಾರ್ ಹೆಸರುಗಳು ಮುಂಚೂಣಿಯಲ್ಲಿವೆ. ದತ್ತಾತ್ರೇಯ ಪಟೇಲ್ ರೇವೂರ, ಅಂಗಾರ, ರಾಮದಾಸ್, ರೂಪಾಲಿ ನಾಯಕ್, ಎಂ.ಪಿ.ಕುಮಾರಸ್ವಾಮಿ ಮೊದಲಾದವರ ಹೆಸರೂ ಕೇಳಿಬರುತ್ತಿವೆ. ಭಾನುವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಸಧ್ಯವೇ ಲೋಕಸಭಾ ಉಪಚುನಾವಣೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಉಪಸಮರ ನಡೆಯಲಿರುವುದರಿಂದ ಸಂಪುಟ ವಿಸ್ತರಣೆ ಮಾಡಿ ಅತೃಪ್ತರನ್ನು ಸಂತುಷ್ಟಗೊಳಿಸುವ…

ಸಂಕ್ರಾಂತಿ ಮುನ್ನಾ ದಿನವೇ ಸಂಪುಟ ವಿಸ್ತರಣೆ?

ಬೆಂಗಳೂರು: ಒಂದೆಡೆ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯತೆಗಳ ಬಗ್ಗೆ ರಾಜ್ಯ ರಾಜಕಾರಣದ ಒಂದು ಗುಂಪು ಕಾದು ಕುಳಿತಿದ್ದರೆ, ಇನ್ನೊಂದೆಡೆ ಸಂಪುಟ ವಿಸ್ತರಣೆಗೆ ಕಸರತ್ತು ಸಾಗಿದೆ. ಭಾನುವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜಕೀಯ ಲೆಕ್ಕಾಚಾರದ ಸಮೀಕರಣ ಸೂತ್ರವನ್ನು ಯಡಿಯೂರಪ್ಪ ಮುಂದಿಟ್ಟಿದ್ದಾರೆ. ಸಧ್ಯವೇ ಲೋಕಸಭಾ ಉಪಚುನಾವಣೆ ನಡೆಯಲಿದೆ. ಜೊತೆಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಉಪಸಮರ ನಡೆಯಲಿದೆ. ಹಾಗಾಗಿ ಸಂಪುಟ ವಿಸ್ತರಣೆ ಮಾಡಿ ಅತೃಪ್ತರನ್ನು ಸಂತುಷ್ಟಗೊಳಿಸುವ ಅನಿವಾರ್ಯತೆಯನ್ನು ಬಿಎಸ್’ವೈ ಅವರು ಹೈಕಮಾಂಡ್ ಮುಂದೆ ಇತ್ತರೆನ್ನಲಾಗಿದೆ. ಈ ಸಂಗತಿಗಳ ಬಗ್ಗೆ ಮುಂದೆ ನೋಡೋಣ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕಳುಹಿಸಿಕೊಟ್ಟ ವರಿಷ್ಠರು, ಸಿಎಂ ಬೆಂಗಳೂರು ವಿಮಾನ ನಿಲ್ದಾಣ ತಲುಪುತ್ತಿದ್ದಂತೆಯೇ ಕೆರೆ ಮಾಡಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆನ್ನಲಾಗಿದೆ. ಈ ಕುರಿತಂತೆ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ…

ಜನರ ಸಮಸ್ಯೆಗಳತ್ತ ಚಿತ್ತ; ಡಿಕೆಶಿ ಸಂಘಟನಾ ಮಂತ್ರ

ಹುಬ್ಬಳ್ಳಿ: ಪ್ರತಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು, ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಹೋರಾಟ ಹಾಗೂ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಸಮಸ್ಯೆಗಳೇನು? ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಏನೇನು ಸಮಸ್ಯೆಗಳಿವೆ? ಜನರ ಧ್ವನಿ ಹಾಗೂ ಅಭಿಪ್ರಾಯ ಏನು ಎಂಬುದನ್ನು ತಿಳಿಯಲು ಬ್ಲಾಕ್, ಜಿಲ್ಲಾ ಮಟ್ಟದ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಅವರ ಅಭಿಪ್ರಾಯಗಳನ್ನು ಆಲಿಸಿದ ನಂತರ, ಪ್ರತಿ ಕ್ಷೇತ್ರದಲ್ಲೂ ಪ್ರತ್ಯೇಕ ಹೋರಾಟ ನಡೆಸುತ್ತೇವೆ. ಈ ವರ್ಷವನ್ನು ಹೋರಾಟದ ವರ್ಷ, ಸಂಘಟನೆ ವರ್ಷ ಎಂದು ಘೋಷಿಸಿದ್ದೇವೆ ಎಂದರು. ಪ್ರತಿ ಕ್ಷೇತ್ರದಲ್ಲಿಯೂ ಅನೇಕ ಸಮಸ್ಯೆಗಳಿವೆ. ಜತೆಗೆ ಕೊರೋನಾ ಸಂದರ್ಭದಲ್ಲಿ ಆಡಳಿತ ವೈಫಲ್ಯದಿಂದ ಜನ ಸಾಕಷ್ಟು ನೊಂದಿದ್ದಾರೆ.…