ಕೇಂದ್ರ ಗೃಹ ಸಚಿವರಿಂದ ಕ್ಷಿಪ್ರ ಕಾರ್ಯ ಪಡೆ ಘಟಕ ಶಂಕುಸ್ಥಾಪನೆ.

ಹಿವಮೊಗ್ಗ: ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದರು. ಭದ್ರಾವತಿಯಲ್ಲಿ ಆರ್. ಎ. ಎಫ್ ಬೆಟಾಲಿಯನ್ ಸ್ತಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ. ಇಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಘಟಕ ನಿರ್ಮಾಣವಾಗಲಿದ್ದು, ರಾಜ್ಯ ಸರಕಾರ 50ಎಕ್ರೆ ಜಮೀನು ನೀಡಿದೆ. ಇಲ್ಲಿ ಸುಸಜ್ಜಿತವಾದ ವಸತಿಗೃಹಗಳು, ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ, ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದರ ಪ್ರಯೋಜನ ಸ್ಥಳೀಯರಿಗೂ ದೊರೆಯುವಂತೆ ಮಾಡಲಾಗುವುದು. ಸ್ಥಳೀಯರು ಇಲ್ಲಿನ ಎಲ್ಲಾ ಸೌಲಭ್ಯಗಳ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಇದೊಂದು ಐತಿಹಾಸಿಕ ದಿನ. ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ 97ಎಕ್ರೆ ಪ್ರದೇಶದಲ್ಲಿ ಆರ್‍ಎಎಫ್ ಘಟಕಕ್ಕೆ ರಾಜ್ಯ ಸರ್ಕಾರ 50ಎಕ್ರೆ ಪ್ರದೇಶ ನೀಡಿದೆ. ಸಾರಿಗೆ…

ಕೊರೋನಾ ಲಸಿಕೆ; ಸರ್ಕಾರಿ ಮಾಹಿತಿ ಮಾತ್ರ ನಂಬಿ

ಬೆಂಗಳೂರು: ಕೊರೋನಾ ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ ಎಂದರು. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ ಎಂದು ಸಚಿವರು ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ…

ಹುಬ್ಬಳಿ–ಧಾರವಾಡ ಎಲಿವೇಟೆಡ್ ಕಾರಿಡಾರ್; ಗಡ್ಕರಿ ಶಂಕುಸ್ಥಾಪನೆ

ಬೆಂಗಳೂರು: ಕೇಂದ್ರ ಭೂಸಾರಿಗೆ ಮಂತ್ರಾಲಯದ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ (ರಾಷ್ಟ್ರೀಯ ಹೆದ್ದಾರಿ) ವತಿಯಿಂದ ಆಯೋಜಿಸಿರುವ ” ಹುಬ್ಬಳಿ – ಧಾರವಾಡ ಎಲಿವೇಟೆಡ್ ಕಾರಿಡಾರ್”ನ ಶಂಕುಸ್ಥಾಪನೆ ಕಾರ್ಯವನ್ನು  ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನರವೇರಿಸಿದರು ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಛೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ರಾಜ್ಯದ 243 ಕಡೆ ಕೊರೊನಾ ಲಸಿಕೆ ವಿತರಣೆ: 8,14,500 ಡೋಸ್ ಲಭ್ಯ

ಬೆಂಗಳೂರು: ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದರು. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. 7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ…

ಏರೋ ಇಂಡಿಯಾ ಅಪೆಕ್ಸ್ ಸಮಿತಿ ಸಭೆ; ರಾಜನಾಥ್ ಸಿಂಗ್’ಗೆ ಸ್ವಾಗತ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಸ್ವಾಗತಿಸಿದರು.

ಬೆಳಗಾವಿಯಲ್ಲಿ ಐಟಿ ಪಾರ್ಕ್;‌ ಯೋಜನೆ ಕಾರ್ಯಗತವಾದರೆ 60 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750 ಎಕರೆ ಭೂಮಿಯನ್ನು ರಾಜ್ಯ ಸರಕಾರಕ್ಕೆ ಬಿಟ್ಟುಕೊಡುವಂತೆ ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಶುಕ್ರವಾರ ಸಂಜೆ ರಕ್ಷಣಾ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ ಡಿಸಿಎಂ, ರಾಜನಾಥ್‌ ಸಿಂಗ್‌ ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ತಿಳಿಸಿದರು. ಈ ಹಿಂದೆಯೇ ಹತ್ತು ಸಾವಿರ ಎಕರೆಯಷ್ಟು ಭೂಮಿಯನ್ನು ರಕ್ಷಣಾ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಪ್ರತೀ ಹತ್ತು ವರ್ಷಕ್ಕೊಮ್ಮೆ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಇಷ್ಟು ಪ್ರಮಾಣದ ಭೂಮಿಯನ್ನು ರಕ್ಷಣಾ ಇಲಾಖೆ ಬಳಸುತ್ತಿಲ್ಲ. ಹೀಗಾಗಿ ಈ ಜಾಗದ 750 ಎಕರೆ ಪ್ರದೇಶದಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್‌ ಸ್ಥಾಪನೆ ಮಾಡುವ ಬಗ್ಗೆ ಪ್ರಸ್ತಾವನೆ ಬಂದಿದೆ. ಈ…

ಗುರುಪುರದಲ್ಲಿ ‘ಗುತ್ತುದ ವರ್ಸೋದ ಪರ್ಬೋ’; ಕೈಂಕರ್ಯದ ಸಿದ್ದತೆಗೆ ಅಂತಿಮ ಸ್ಪರ್ಶ

ಮಂಗಳೂರು: ತುಳನಾಡು ಪರಶುರಾಮನಿಂದ ಸೃಷ್ಟಿಯಾದ ತಪೋಭೂಮಿ ಎಂಬ ನಂಬಿಕೆ ಇದೆ. ಸಾಲು ಸಾಲು ದುರ್ಗಾ ದೇವಿಗಳ ತಾಣ ಎಂಬ ಪ್ರತೀತಿಗೆ ಪಾತ್ರವಾಗಿರುವ ಕರಾವಳಿಯಲ್ಲಿ ತುಳು ಪರಂಪರೆಯ ದೈವಾರಾಧನೆಗೂ ಮಹತ್ವವಿದೆ. ಸೀಮೆಗೊಂದು ದೈವಸ್ಥಾನ, ಕುಟುಂಬಕ್ಕೊಂದು ದೈವಸ್ಥಾನ ಹೀಗೆ ಭೂತಾರಾಧನೆಯ ಮಜಲುಗಳು ಅನೇಕ ಇವೆ. ಅದರಲ್ಲೂ ‘ಗುತ್ತು’ ಪರಂಪರೆಯಲ್ಲಿನ ಆಚರಣೆಯ ಗತ್ತು ಗಮ್ಮತ್ತು ತುಳುಪರಂಪರೆಗಷ್ಟೇ ಸೀಮಿತ ಎನ್ನಬಹುದು. ಅಂತಹಾ ಗುತ್ತುಗಳ ವರ್ಷದ ಪರ್ಬೋ ತನ್ಬದೇ ಅದ ಆಕರ್ಷಣೆಯಿಂದ ನಾಡಿನ ಗಮನ ಕೇಂದ್ರೀಕರಿಸುತ್ತದೆ. ಈ ಸೊಗಸು ಸೊಬಗಿಗೆ ಸಾಕ್ಷಿಯಾಗುತ್ತದೆ ಮಂಗಳೂರು ಹೊರವಲಯದ ಗುರುಪುರದ ಗೋಳಿದಡಿ ಗುತ್ತು. ಪ್ರತೀ ವರ್ಷದಂತೆ ಈ ಬಾರಿಯೂ ಇಲ್ಲಿ ‘ಗುತ್ತುದ ವರ್ಸೋದ ಪರ್ಬೋ’ ನಡೆಯಲಿದೆ. ಜನವರಿ 19 ಮತ್ತು 20ರಂದು ನಡೆಯುವ ಅನನ್ಯ ವೈಭವದ ಈ ಕೈಂಕರ್ಯದ ಸಿದ್ದತೆಗೆ ಅಂತಿಮ ಸ್ಪರ್ಷ ಸಿಕ್ಕಿದೆ. ದೇವಾಲಯಗಳಲ್ಲಿ ನೆರವೇರುವ ವರ್ದಂತ್ಯುತ್ಸವದ ರೀತಿಯಲ್ಲೇ ಈ ದೈವಾರಾಧನೆಯ, ನ್ಯಾಯದೇಗುಲ ಸ್ವರೂಪದ ಗದ್ದುಗೆಯಲ್ಲಿ ವಾರ್ಷಿಕ ಜಾತ್ರೆ…