ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ರಾಜ್ಯದಲ್ಲಿ ಮೊದಲ ದಿನವೇ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ ಎಂದರು. ಡಾ.ಸುದರ್ಶನ್ ಬಲ್ಲಾಳ್ ಅವರು ಲಸಿಕೆ ಪಡೆದಿದ್ದು, ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೀಗಾಗಿ ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯವರೆಗೂ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಸಚಿವರು ಹೇಳಿದರು. ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ…

ಕನ್ನಡ ಕಾರ್ಯಕರ್ತರ ಆಕ್ರೋಶ; ಗಡಿನಾಡಲ್ಲಿ ಪ್ರತಿಭಟನೆ; ಬಿಎಸ್’ವೈ ಸರ್ಕಾರದ ವಿರುದ್ದವೂ ಸಿಟ್ಟು.

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರುದ್ಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರದ ವಿರುದ್ದವೂ ಸಿಟ್ಟು ವ್ಯಕ್ತ ಪಡಿಸಿದ ಪ್ರತಿಭಟನಾಕಾರರು, ಇಲ್ಲಿ ಮರಾಠಿ ಅಭಿವೃದ್ಧಿ ನಿಗಮ ಮಾಡ್ತಾರೆ, ಅಲ್ಲಿ ಬೆಳಗಾವಿ ನಮಗೆ ಸೇರಿದ್ದು ಎಂದು ಮರಾಠಿಗರು ಹೇಳುತ್ತಾರೆ. ಹಾಗಾದರೆ ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಸಿಟ್ಟು ಹೊರಹಾಕಿದ್ದಾರೆ.

ಗಡಿ ವಿಚಾರ; ರಾಜ್ಯದ ಶಾಸಕರು ಸಚಿವರು ಎಲ್ಲಿದ್ದಾರೆ? ವಾಟಾಳ್ ಪ್ರಶ್ನೆ

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಕನ್ನಡ ಪರ ಸಂಘಟನೆಗಳ ನಾಯಕರನ್ನು ಕೆರಳುವಂತೆ ಮಾಡಿದೆ. ಉದ್ಧವ್ ಠಾಕ್ರೆ ಹೇಳಿಕೆಯಿಂದ ಸಿಡಿಮಿಡಿಗೊಂಡಿರುವ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಈ ಬೆಳವಣಿಗೆಗೆ ರಾಜ್ಯದ ರಾಜಕೀಯ ನಾಯಕರೇ ಹೊಣೆ ಎಂದು ಬೊಟ್ಟು ಮಾಡಿದ್ದಾರೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆಯ ಶಾಸಕರು, ಸಚಿವರು ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸೊಲ್ಲಾಪುರ ಸಹಿತ ಮಹಾರಾಷ್ಟ್ರ ವ್ಯಾಪ್ತಿಯಲ್ಲಿರುವ ಅನೇಕ ಪ್ರದೇಶಗಳಲ್ಲಿ ಕನ್ನಡ ಭಾಷಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಪ್ರದೇಶಗಳು ಕರ್ನಾಟಕಕ್ಕೇ ಸೇರಬೇಕಿದೆ ಎಂದು ವಾಟಾಳ್ ನಾಗರಾಜ್ ಅವರು ಮರಾಠಿ ನಾಯಕರಿಗೆ ಎದಿರೇಟು ನೀಡಿದ್ದಾರೆ.

ಮಹಾರಾಷ್ಟ್ರದಿಂದ ಮತ್ತೆ ಗಡಿ ಕ್ಯಾತೆ; ವಿವಾದ ಸೃಷ್ಟಿಸಿದ ಠಾಕ್ರೆ ಟ್ವೀಟ್

ಮುಂಬೈ: ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಜನರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ, ಬಹುಸಂಖ್ಯೆಯಲ್ಲಿ ಮರಾಠಿ ಸಂಸ್ಕೃತಿ ಹೊಂದಿರುವ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಬೆಳಗಾವಿ ಗಡಿ ವಿವಾದವನ್ನು ಕೆದಕಿ ಕನ್ನಡ ಪರ ಸಂಘಟನೆಗಳ ನಾಯರ ಆಕ್ರೋಶಕ್ಕೆ ಗುರಿಯಲಿದ್ದಾರೆ. ಮಹಾರಾಷ್ಟ್ರ ಏಕೀಕರಣಕ್ಕಾಗಿ ಹೋರಾಡಿದವರ ಗೌರವಾರ್ಥಕವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಜನವರಿ 17 ರಂದು ಆಚರಿಸುವ ಹುತಾತ್ಮರ ದಿನ ಪ್ರಮುಕ್ತ ಉದ್ಧವ್ ಠಾಕ್ರೆ ಈ ಟ್ವೀಟ್ ಮಾಡಿದ್ದಾರೆ. कर्नाटकव्याप्त मराठी भाषिक आणि सांस्कृतिक प्रदेश महाराष्ट्रात आणणे हीच या सीमा लढ्यात हौतात्म्य पत्करलेल्या सैनिकांना आदरांजली ठरणार आहे. त्यासाठी आम्ही एकजूट आणि कटिबद्ध…