ದೊಡ್ಡಬಳ್ಳಾಪುರ: ಆರೋಗ್ಯಪೂರ್ಣ ಆಹಾರ ಎಂದೇ ಗುರುತಾಗಿರುವ ಸಿರಿಧಾನ್ಯದ ಕುರಿತು ಜಾಗೃತಿ ಮೂಡಿಸಲು ಹಾಗೂ ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಆದ್ಯತೆ ನೀಡಲು ದೊಡ್ಡಬಳ್ಳಾಪುರದಲ್ಲಿ ಶನಿವಾರ ಮ್ಯಾರಥಾನ್ ನಡೆಯಿತು. ‘ಸಿರಿಧಾನ್ಯದ ನಡಿಗೆ ಆರೋಗ್ಯದ ಕಡೆಗೆ’ ಎಂಬ ಈ ಮ್ಯಾರಥಾನ್ ಯುವಜನರ ಗಮನಸೆಳೆಯಿತು. ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರ ವೃತ್ತದಲ್ಲಿ ಈ ಮ್ಯಾರಥಾನ್’ಗೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು. ಪ್ರವಾಸಿ ಮಂದಿರ ವೃತ್ತದಿಂದ ಆರಂಭವಾದ ಮ್ಯಾರಥಾನ್ ಕೋರ್ಟ್ ರಸ್ತೆ, ತಾಲೂಕು ಕಚೇರಿ ವೃತ್ತದಿಂದ ಮೂಲಕ ಸಾಗಿದ ಓಟ, ಬಸವ ಭವನ ವೃತ್ತದ ಮೂಲಕ ಮೂರು ಕಿಲೋಮೀಟರ್ ಸಾಗಿ ಮತ್ತೆ ಪ್ರವಾಸಿ ಮಂದಿರದಲ್ಲಿ ಕೊನೆಯಾಯಿತು. ಇದೇ ಸಂದರ್ಭದಲ್ಲಿ ಸಾಮೂಹಿಕ ವ್ಯಾಯಾಮ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಸಾವಯವ ಸಿರಿಧಾನ್ಯದ ಕುರಿತು ಜಾಗೃತಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ…
Day: January 23, 2021
ತಕ್ಷಣವೇ ಚುನಾವಣೆ ನಡೆದರೂ ಮೋದಿ ಜಯಭೇರಿ.. ಸಮೀಕ್ಷೆಯ ಅಚ್ಚರಿ
ಪ್ರಸ್ತುತ ಪರಿಸ್ಥಿತಿಯಲ್ಲಿ ಲೋಕಸಭೆಗೆ ಚುನಾವಣೆ ನಡೆದರೆ ಫಲಿತಾಂಶ ಹೇಗಿರಬಹುದು? ಕಳೆದ ಚುನಾವಣೆ ವೇಳೆ ಉತ್ತುಂಗದಲ್ಲಿದ್ದ ಪ್ರಧಾನಿ ಮೋದಿ ಜನಪ್ರಿಯತೆ ಈಗಲೂ ವ್ಯಕ್ತವಾಗಬಹುದೇ? ದೆಹಲಿಯಲ್ಲಿನ ರೈತರ ಹೋರಾಟ, ಕೊರೋನಾ ವಿಚಾರದಲ್ಲಿನ ಬೆಳವಣಿಗೆ ಮೋದಿಗೆ ಹೊಡೆತ ಕೊಡಬಹುದೇ? ಎಂಬ ಚರ್ಚೆ ಸಾಗಿರುವಾಗಲೇ ಸಮೀಕ್ಷೆಯೊಂದು ಅಚ್ಚರಿಯ ಫಲಿತಾಂಶವೊಂದನ್ನು ದೇಶದ ಜನರ ಮುಂದಿಟ್ಟಿದೆ. ಸದ್ಯವೇ ಚುನಾವಣೆ ನಡೆದರೆ ಮೋದಿ ಸಾರಥ್ಯದ ಎನ್ಡಿಎ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಬಹುದೆಂಬ ಅಭಿಪ್ರಾಯವು ಇಂಡಿಯಾ ಟುಡೇ ನಡೆಸಿರುವ ಸಮೀಕ್ಷೆಯಿಂದ ವ್ಯಕ್ತವಾಗಿದೆ. ದೆಹಲಿಯಲ್ಲಿನ ರೈತರ ಪ್ರತಿಭಟನೆ ಸೇರಿದಂತೆ ಯಾವುದೇ ಸವಾಲುಗಳು ಮೋದಿ ಮುಂದಿಲ್ಲ. ಆದರೆ ಕಳೆದ ಬಾರಿಗಿಂತ ಅಲ್ಪ ಸಂಖ್ಯೆಗಳನ್ನು ಎನ್ಡಿಎ ಕಳೆದುಕೊಳ್ಳಬಹುದೆಂದು ಸಮೀಕ್ಷೆ ಹೇಳಿದೆ. ಸುಮಾರು 50 ದಿನಗಳಿಂದ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿದ್ದು ಈ ಪ್ರತಿಭಟನೆಯಲ್ಲಿ ಬಿಜೆಪಿ ವಿರೋಧಿ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿವೆ. ಹಾಗಾಗಿ ಮೋದಿ ಆಡಳಿತದ ಬಗ್ಗೆ ಜನಾಭಿಪ್ರಾಯ ಹೇಗಿದೆ…
ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೊರೊನಾ ಲಸಿಕೆ: 2ನೇ ಹಂತದಲ್ಲಿ 2 ಕೋಟಿ ಜನರಿಗೆ ಲಸಿಕೆ
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರಾಜ್ಯದಲ್ಲಿ ಈವರೆಗೆ 1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2 ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ. 8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ. ಒಟ್ಟು 7,72,591 ಆರೋಗ್ಯ ಸಿಬ್ಬಂದಿ ಇದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಹಂಪನಾ ವಿರುದ್ಧ ಕ್ರಮ, ರಾಜ್ಯ ಸರಕಾರದ ಕೀಚಕ ನಡೆ ಪ್ರತೀಕ; ಡಿಕೆಶಿ ಟೀಕೆ
ಬೆಂಗಳೂರು: ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ. ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಹಾಗೂ ಎಲ್ಲಕ್ಕೂ ಮಿಗಿಲಾಗಿ ಚಿಂತಕ. ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರಕಾರ ಮುಂದಾದದ್ದು ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ. ತಮ್ಮ ವಿರುದ್ಧ ಧ್ವನಿ ಎತ್ತುವ ರಾಜಕೀಯ ವಿರೋಧಿಗಳ ವಿರುದ್ಧ ಹಗೆತನ ಸಾಧಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇದೀಗ ಸಾಹಿತಿಗಳನ್ನೂ ಆ ಪಟ್ಟಿಗೆ…
ಎತ್ತಿನಹೊಳೆ ಕಾಮಗಾರಿಗೆ ವೇಗ; ಶೀಘ್ರವೇ ವಾಣೀವಿಲಾಸಕ್ಕೆ ನೀರು?
ಹಾಸನ: ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಣ್ಣ ನೀರಾವರಿ ಸಚಿವ ಸಿ.ಪಿ. ಯೋಗೇಶ್ವರ್, ಸ್ಥಳೀಯ ಶಾಸಕರು ಜೊತೆ ಬೇಲೂರು ತಾಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಸಚಿವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ. ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ ಮೂಲಕ ಹರಿಸಲು ಯೋಜನೆಯನ್ನು ರೂಪಿಸಲಾಗಿದೆ. ತುಮಕೂರಿನ ಭೈರಗೊಂಡ್ಲು ಜಲಾಶಯದ ಕಾಮಗಾರಿ ನಡೆಯದೇ ಇರುವುದರಿಂದ ಪ್ರಾಯೋಗಿಕವಾಗಿ ಈ ರೀತಿ ನೀರನ್ನು ಹರಿಸಿ, ಜನರಿಗೆ ವಿಶ್ವಾಸ ಮೂಡಿಸಲಾಗುತ್ತದೆ ಎಂದು ತಿಳಿಸಿದರು. ಎತ್ತಿನಹೊಳೆ ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಹೊಸ ಭೂಸ್ವಾಧೀನ ಕಾಯ್ದೆ 2013ರ ಪ್ರಕಾರ ಪ್ರಕ್ರಿಯೆಯನ್ನು ಕೈಗೊಂಡಿದೆ. ರೈತರಿಗೆ ಹಣವನ್ನು ಪಾವತಿಸಲು…