‘ಜಾಗ್ವಾರ್’ ನಂತರ ಮತ್ತೊಂದು ಯಶೋಗಾಥೆಯತ್ತ ನಿಖಿಲ್ ‘ರೈಡರ್’

ಜಾಗ್ವಾರ್ ನಂತರ ಮತ್ತೊಂದು ಯಶೋಗಾಥೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಅವರ ನಟನೆಯ ಬಹು ನಿರೀಕ್ಷಿತ ‘ರೈಡರ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಕೆಪಿಎಸ್’ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 14 ಮಂದಿ ಬಂಧನ

ಬೆಂಗಳೂರ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್’ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್’ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಬೆಂಗಳೂರಿನ ಸಿಸಿಬಿ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮುಖ್ಯ ಸೂತ್ರಧಾರ ಚಂದ್ರು, ರಾಚಪ್ಪ ಅವರನ್ನು ವಿಚಾರಣೆಗೆ ಗುರಿಪಡಿಸಿರುವ ಸಿಸಿಬಿ ಪೊಲೀಸರು ಈ ವರೆಗೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ನೀಡಿರುವ ಮಾಹಿತಿ ಆಧರಿಸಿ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅಧಿಕಾರಿಯೇ ಕಿಂಗ್ ಪಿನ್? ಕೆಪಿಎಸ್ಸಿ ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್’ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ರಾಜ್ಯ ಸರ್ಕಾರಕ್ಕೂ ಮುಜುಗರದ ಪ್ರಸಂಗ. ಹಾಗಾಗಿ ಸರ್ಕಾರ ಸಮಗ್ರ ತನಿಖೆಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳ ಕೈವಾಡವಿರಬಹುದೇ ಎಂಬ ಸಂಶಯವೂ ಸಿಸಿಬಿ ಪೊಲೀಸರನ್ನು ಕಾಯ್ದೆ. ಆರೋಪಿಗಳ ಹೆಜ್ಜೆ ಗುರುತು ಬೆನ್ನತ್ತಿದ ಪೊಲೀಸರು ಕಿಂಗ್ ಪಿನ್ ಯಾರೆಂಬುದನ್ನು ಪತ್ತೆಮಾಡಿದ್ದಾರೆನ್ನಲಾಗಿದೆ. ಆದರೆ ತನಿಖಾ…

ಹಳ್ಳಿ ಜನರ ಸಮಸ್ಯೆ ಅರಿಯಲು ಗ್ರಾಮವಾಸ್ತವ್ಯ ಸಹಕಾರಿ: ಡಾ.ವೀರೇಂದ್ರ ಹೆಗ್ಗಡೆ

ಉಜಿರೆ: ಹಳ್ಳಿ ಜನರ ಸಮಸ್ಯೆಗಳನ್ನು ಅರಿಯಲು ಗ್ರಾಮವಾಸ್ತವ್ಯ ಸಹಕಾರಿ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಈ ತಿಂಗಳ 31ರಂದು ಕಡಬದ ಕೊಂಬಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ರಾಜರ್ಷಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿಡಿದರು. ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ ಬಿ.ಎನ್, ಸದಸ್ಯರಾದ ಭಾಸ್ಕರ ರೈ ಕಟ್ಟ, ಅತಿಥೇಯ ಕಡಬದ ಅಧ್ಯಕ್ಷ ನಾಗರಾಜ ಎನ್.ಕೆ, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ, ಬೆಳ್ತಂಗಡಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಾರಪ್ಪ ಪೂಜಾರಿ ಬೆಳಾಲು,…

ಕಡಲತಡಿಯಲ್ಲಿ ತುರ್ತು ಸಂದರ್ಭದಲ್ಲಿ ಧಾವಿಸಲಿದೆ ERSS ತಂಡ

ಉಡುಪಿ: ಅಗ್ನಿ ಶಾಮಕ ದಳ, ಪೊಲೀಸ್ ಹೊಯ್ಸಳ, ಅಆಂಬ್ಯುಲೆನ್ಸ್’ಗಳು ತುರ್ತು ಕರೆಗೆ ಧಾವಿಸಿ ಬರುವುದು ಸಾಮಾನ್ಯ. ಇನ್ನು ಮುಂದೆ ಉಡುಪಿಯಲ್ಲಿ ಅತೀ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಕರೆಗೆ ERSS ತಂಡ ಕ್ಷಣಾರ್ಧದಲ್ಲಿ ನೆರವಿಗೆ ಧಾವಿಸಲಿದೆ. ಇದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ 12 ಇ.ಆರ್.ಎಸ್.ಎಸ್. ವಾಹನಗಳನ್ನು ಚಾಲನೆಗೊಳಿಸಲಾಗಿದೆ. ಸಾರ್ವಜನಿಕರು ಇನ್ನು ಮುಂದಕ್ಕೆ ಟೋಲ್ ಫ್ರೀ ನಂಬರ್ 100ರ ಬದಲಾಗಿ 112ಕ್ಕೆ ಕರೆ ಮಾಡಿದಲ್ಲಿ ಅವಶ್ಯಕತೆ ಇರುವ ಸ್ಥಳಕ್ಕೆ ಅತೀ ಸಮೀಪ ಇರುವ ಇ.ಆರ್.ಎಸ್.ಎಸ್. ವಾಹನವು ಸ್ಥಳಕ್ಕೆ ಧಾವಿಸಿ ಅಗತ್ಯ ನೆರವು ನೀಡಲಿದೆ. ಈ ವಾಹನಗಳು ದಿನದ 24 ಗಂಟೆಯೂ ಕಾರ್ಯಾಚರಣೆಗೆ ಸಜ್ಜಾಗಿ ನಿಂತಿವೆ. ಟೋಲ್ ಪ್ರೀ ನಂಬರ್ 112 ನೇರವಾಗಿ ಬೆಂಗಳೂರು ಕೇಂದ್ರದ ನಿಯಂತ್ರಣದಲ್ಲಿದ್ದು, ಅಕ್ಷಾಂಶ ಹಾಗೂ ರೇಖಾಂಶದ ಆಧಾರದ ಮೇಲೆ, ಕರೆ ಬಂದ ಸ್ಥಳಕ್ಕೆ ಕ್ಷಿಪ್ರವಾಗಿ ಅಗತ್ಯ ಸೇವೆಯನ್ನು ಸಲ್ಲಿಸಲು ಪ್ರತೀ ವಾಹನದಲ್ಲಿ ಓರ್ವ ಎ.ಎಸ್.ಐ. ದರ್ಜೆಯ ಪೊಲೀಸ್…

ಜ.26ರಂದು ದೆಹಲಿಯಲ್ಲಿ ರೈತರಿಂದ ಟ್ರಾಕ್ಟರ್ ಪೆರೇಡ್; ಅನುಮತಿ ನೀಡುತ್ತಾ ಸರ್ಕಾರ?

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ರೈತರು ಜನವರಿ 26ರಂದು ನಡೆಸಲುದ್ದೇಶಿಸಿರುವ ಟ್ರ್ಯಾಕ್ಟರ್ ಪರೇಡ್‌ಗೆ ಸರ್ಕಾರ ಅನುಮತಿ ನೀಡಿಲ್ಲ. ಅನುಮತಿ ನೀಡುವ ಕುರಿತುಪರಿಶೀಲನೆ ನಡೆಯುತ್ತಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಕೃಷಿ ಕಾನೂನು ಮತ್ತು ಶಾಸನಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ನವೆಂಬರ್ 28ರಿಂದ, ಪಂಜಾಬ್ ಮತ್ತು ಹರಿಯಾಣದ ರೈತರು, ಸಿಂಗು, ಟಿಕ್ರಿ ಮತ್ತು ಗಾಜಿಪುರ ಸೇರಿದಂತೆ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26ರಂದು ಎರಡು ಲಕ್ಷಕ್ಕೂ ಹೆಚ್ಚು ಟ್ರಾಕ್ಟರುಗಳ ಮೂಲಕ ರಾಜಧಾನಿಯಲ್ಲಿ ಪೆರೇಡ್ ನಡೆಸುವುದಾಗಿಯೂ ವಿವಿಧ ಸಂಘಟನೆಗಳು ಘೋಷಿಸಿವೆ. ಈ ಟ್ರ್ಯಾಕ್ಟರ್ ಪರೇಡ್‌ಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೋಹರ್ ಹೇಳಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಈ ವರೆಗೂ ಪೆರೇಡ್’ಗೆ ಅನುಮತಿ ನೀಡಿಲ್ಲ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.  

ಸಾಂಸ್ಕೃತಿ ನಗರಿಯಲ್ಲಿ ಬಸವ ಭವನ ಲೋಕಾರ್ಪಣೆ

ಮೈಸೂರು: ಹೆಬ್ಬಾಳು-ವಿಜಯನಗರದ ಬಸವ ಸಮಿತಿ ವತಿಯಿಂದ ನಿರ್ಮಿಸಿರುವ ಬಸವ ಭವನವನ್ನು ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದಸ್ವಾಮೀಜಿ,ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, , ಶಾಸಕರಾದ ಎಲ್. ನಾಗೇಂದ್ರ, ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ ಮೊಡ್ಲಾಡಿ ಗಣ್ಯರು ಈ ಸಂದರ್ಭದಲ್ಲೋ ಉಪಸ್ಥಿತರಿದ್ದರು.

ಕುರುಬರನ್ನು ಎಸ್’ಟಿ ಪಟ್ಟಿಗೆ ಸೇರಿಸುವವರೆಗೂ ಹೋರಾಟ; ನಿರಂಜನಾನಂದ ಪುರಿ ಸ್ವಾಮೀಜಿ

ಚಿತ್ರದುರ್ಗ: ಕುರುಬರನ್ನು ಎಸ್ ಟಿಗೆ ಸೇರ್ಪಡೆ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುವೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಎಸ್.ಟಿ. ಹೋರಾಟ ಸಮಿತಿಯ ಸಭೆಯನ್ನು ಉದ್ದೇಶಿಸಿ ಬಂಡೆಪ್ಪ ಕಾಶಂಪುರ್ ಮಾತನಾಡಿದರು. ಎಸ್’ಟಿ ಪಟ್ಟಿಗೆ ಸೇರ್ಪಡೆ ಕುರುಬರ ಹಕ್ಕು ಎಂದು ಅವರು ಹೇಳಿದರು. ಪಾದಯಾತ್ರೆಯ ನೇತೃತ್ವವಹಿಸಿರುವ ಕಾಗಿನೆಲೆಯ ಕನಕ ಗುರು ಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕುರುಬರ ಓಟು ಪಡೆದು ಚುನಾಯಿತರಾಗಿರುವ ಎಲ್ಲಾ ಶಾಸಕರು ಬಂಡೆಪ್ಪ ಕಾಶಂಪುರ್ ಅವರ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸೂಚಿಸಿದರು. ಕುರುಬರನ್ನು ಎಸ್ ಟಿ ಪಟ್ಟಿಗೆ ಸೇರ್ಪಡೆ ಮಾಡು ವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸ್ವಾಮಿಜಿ ಎಚ್ವರಿಸಿದರು. ಮಾಜಿ ಸಚಿವ ಎಚ್.ವಿಶ್ವನಾಥ್ ಮಾತನಾಡಿ,ಕುರುಬರು ಎಸ್ ಟಿ ಒಟ್ಟಿಗೆ ಸೇರ್ಪಡೆ ನಮ್ಮ ಹಕ್ಕು, ಅದಕ್ಕೆ…

ಮಂಗಳೂರು ರಥಬೀಧಿಯಲ್ಲಿ ಭಾರೀ ದುರಂತ; ನೆಲಕ್ಕುರುಳಿದ ಬೃಹತ್ ಅಶ್ವಥ ಮರ

ಮಂಗಳೂರು: ಬಂದರು ಮಂಗಳೂರಿನ ಕಾರ್ಸ್ಟ್ರೀಟ್’ನ ವೆಂಕಟರಮಣ ದೇವಾಲಯ ಬಳಿಯ ಬೃಹತ್ ಅಶ್ವಥ ಮರ ಇದ್ದಕ್ಕಿದ್ದಂತೆ ನೆಲಕ್ಕುರುಳಿದೆ. ಮಂಗಳೂರಿನ ರಥಬೀದಿಯ ಪ್ರಮುಖ ಆಕರ್ಷಣೆ ಹಾಗೂ ಜನರ ಪೂಜ್ಯ ಭಾವನೆಯ ಕೇಂದ್ರವಾಗಿ ಈ ಬೃಹತ್ ಮರ ಗುರುತಾಗಿತ್ತು. ದೇವಾಲಯದ ಉತ್ಸವ ಸಂದರ್ಭದಲ್ಲಿ ವಿವಿಧ ಕೈಂಕರ್ಯಗಳಿಗೂ ಈ ರಾಜ ವೃಕ್ಷ ಸಾಕ್ಷಿಯಾಗುತ್ತಿತ್ತು.   ಈ ದೈತ್ಯ ಮರ ಇದ್ದಕ್ಕಿದ್ದಂತೆ ನೆಲಕ್ಕುರುಳಿಬಿದ್ದಿದ್ದು ಈ ಅವಘಡದಲ್ಲಿ ಸಮೀಪದಲ್ಲಿದ್ದ ನೀರಿನ ತಾಂಕಾ ಹಾಗೂ ಕೆಲವು ವಾಹನಗಳಿಗೆ ಹಾನಿಯುಂಟಾಗಿದೆ ಎನ್ನಲಾಗಿದೆ.

ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿಗೆ ಹೊಸ ನಿರ್ದೇಶಕರು

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ನಿರ್ದೇಶಕರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಂಟಿಗಾನಹಳ್ಳಿಯ ವೆಂಕಟೇಶ್ ಬಾಬು ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಂಟಿಗಾನಹಳ್ಳಿಯಲ್ಲಿರುವ ತೆಂಗಿನ ನಾರಿನ ವಸ್ತುಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಕೈಗಾರಿಕಾ ಸಹಕಾರ ಸಂಘ ನಿಯಮಿತವನ್ನು ಪ್ರತಿನಿಧಿಸುತ್ತಿರುವ ವೆಂಕಟೇಶ್ ಬಾಬು ಹಾಗೂ ವಿವಿಧ ಜಿಲ್ಲೆಗಳ ಪ್ರತಿನಿಧಿಗಳನ್ನು ನಿರ್ದೇಶಕರಾಗಿ ಆಯ್ಕೆಯಾಗಿರುವ ಬಗ್ಗೆ ಚುನಾವಣಾಧಿಕಾರಿ ಚಿದಾನಂದ ಮೂರ್ತಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಎಸ್.ಎಲ್ ವೆಂಕಟೇಶ ಬಾಬು ಅವರು ಈ ಮೊದಲು ದೊಡ್ಡಬಳ್ಳಾಪುರ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸಹಾಕರ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಎಸ್.ಎಲ್ ವೆಂಕಟೇಶ ಬಾಬು ಅವರು ಅವಿರೋಧ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಆಯ್ಕೆಯಾಗಿರುವ ನಿರ್ದೇಶಕರ ಪಟ್ಟಿ ಹೀಗಿದೆ: ಬೆಂಗಳೂರಿನ ರಾಜಾಜಿನಗರದ ಕೈಗಾರಿಕಾ ವಸಾಹತಿನಲ್ಲಿರುವ…