ಸರ್ಕಾರದ ವಿರುದ್ಧ ಸಮರ; ಇದೀಗ ವಾಹನ ಚಾಲಕರ ಸರದಿ.

ಬೆಂಗಳೂರು: ಚಾಲಕರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅರೆಬೆತ್ತಲೆ ಮೆರವಣಿಗೆ ಕೈಗೊಂಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಚಾಲಕರೊಂದಿಗೆ ಉಪವಾಸ ಸತ್ಯಾಗ್ರಹ ನಡೆಸಿ ಶಕ್ತಿ ಪ್ರದರ್ಶನ ಏರ್ಪಡಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಿಂದ ಚಾಲಕರ ಒಕ್ಕೂಟದ ವತಿಯಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಚಾಲಕರ ನಿಗಮ ಮಂಡಳಿ, ಪೆಟ್ರೋಲ್ ಮತ್ತು ಡಿಸೆಲ್ ದರ ಇಳಿಕೆ ತುರ್ತಾಗಿ ಮಾಡಬೇಕು, ಸಾರಥಿ ಸೂರು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಕಾಲಕರ ದಿನಾಚರಣೆ ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಸುಮಾರು 110 ಸಂಘಟನೆಗಳ ಮುಖ್ಯಸ್ಥರು ಬೆಂಬಲ ಸೂಚಿಸಿವೆ

ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್; ಹೊಸ ಮಾರ್ಗಸೂಚಿ

ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.15ರಷ್ಟು ಮೀರದಂತೆ ವರ್ಗಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಪದವಿ ಹಾಗೂ ತಾಂತ್ರಿಕ ಕಾಲೇಜುಗಳ ಬೋಧನಾ ಸಿಬ್ಬಂದಿ ವರ್ಗಕ್ಕೆ ಹೊಸ ನಿಯಮಾವಳಿ ರೂಪಿಸಿ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಒಂದೇ ಕಡೆ 4 ವರ್ಷ ಕೆಲಸ ಮಾಡಿರುವ ಬೋಧಕರು ವರ್ಗಾವಣೆಗೆ ಅರ್ಹರಾಗಿದ್ದು, ಈ ಅಂಶವನ್ನು ಆಧಾರವಾಗಿಟ್ಟುಕೊಂಡು ವರ್ಗಾವಣೆ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಬೋಧಕರಿಗೆ ಇದು ಅನ್ವಯವಾಗುತ್ತದೆ ಎಂದು ಎಂದು ಅವರು ತಿಳಿಸಿದ್ದಾರೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವರ್ಗಾವಣೆಗೆ ಚಾಲನೆ ಸಿಗಲಿದೆ. ಆದಷ್ಟು ಬೇಗ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಲಾಗುವುದು.…