ಮಂಜೂರಾದ ಕಲಬುರಗಿ ರೈಲ್ವೆ ಡಿವಿಷನ್ ರದ್ದು? ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ಆಕ್ರೋಶ

ದೆಹಲಿ: 8 ವರ್ಷಗಳಾದರೂ ಕಲಬುರಗಿ ರೈಲ್ವೆ ಡಿವಿಷನ್ ಕಾರ್ಯರೂಪಕ್ಕೆ ಬಂದಿಲ್ಲ. ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿರುವ ಕಾಂಗ್ರೆಸ್ ಸಂಸದ ಜಿ.ಸಿ.ಚಂದೇರಶೇಖರ್, 2014 ರ ಕೇಂದ್ರ ಬಜೆಟ್ ನಲ್ಲಿ ಮಂಜೂರಾಗಿದ್ದರು ಸಹ ಕಾರ್ಯರೂಪಕ್ಕೆ ಬರದ ಬಗ್ಗೆ ಕೇಂದ್ರ ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ. ಮಂಜೂರಾಗಿದ್ದ ಕಲಬುರಗಿ ರೈಲ್ವೆ ಡಿವಿಷನ್ ಕಚೇರಿಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ ಎಂದ ರೈಲ್ವೆ ಮಂತ್ರಿ ಪಿಯೂಷ್ ಗೋಯಲ್ ಹೇಳಿಕೆಗೆ ಸಂಸದರಾದ ಜಿ.ಸಿ ಚಂದ್ರಶೇಖರ್  ಮತ್ತು ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಆಕ್ರೋಶವ್ಯಕ್ತಪಡಿಸಿದರು. ಇದಕ್ಕೆ ಮಣಿದ ಸಚಿವರು ಸರ್ಕಾರದ ನಿರ್ಧಾರವನ್ನು ಪುನರ್ ಪರಿಶೀಲಿಸುವುದಾಗಿ ಪಿಯೂಷ್ ಗೋಯಲ್ ಭರವಸೆ ನೀಡಿದರು. ಕಲ್ಯಾಣ ಕರ್ನಾಟಕದಿಂದ 5 ಎಂಪಿ ಗಳನ್ನು ಕೊಟ್ಟಿದ್ದರು 8 ವರ್ಷಗಳಾದರೂ ಕಾರ್ಯರೂಪಕ್ಕೆ ಬರದ ಕಲಬುರಗಿ ರೈಲ್ವೆ ಡಿವಿಷನ್ ಕಚೇರಿಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ ಎಂದ ರೈಲ್ವೆ ಮಂತ್ರಿ ಹೇಳಿಕೆಗೆ ನಾನು ಮತ್ತು ಖರ್ಗೆಯವರು ಆಕ್ರೋಶವ್ಯಕ್ತಪಡಿಸಿದ್ದಕ್ಕೆ ಪುನರ್ ಪರಿಶೀಲಿಸುವುದಾಗಿ ಹೇಳಿದ ಮಂತ್ರಿ.…

ಲಯನ್ಸ್ ಕ್ಲಬ್ ಸಂಚಾರಿ ರಕ್ತ ಸಂಗ್ರಹಣೆ ಬಸ್ಸು; ಮುಖ್ಯಮಂತ್ರಿ ಚಾಲನೆ

ಬೆಂಗಳೂರು; ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು. ಲಯನ್ಸ್ ಕ್ಲಬ್ ವತಿಯಿಂದ ಮೂರು ಸಂಚಾರಿ ರಕ್ತ ಸಂಗ್ರಹಣೆ ಹಾಗೂ ಸಾಗಾಣಿಕೆ ಬಸ್ಸುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, ರಕ್ತದಾನ ಮಹಾದಾನವೆಂದು ಪರಿಗಣಿಸಲ್ಪಟ್ಟಿದೆ. ಕೋವಿಡ್ ಬಂದ ಬಳಿಕ ಕಳೆದೊಂದು ವರ್ಷದಿಂದ ರಕ್ತಸಂಗ್ರಹ ಪ್ರಮಾಣ ಬಹಳ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಸಂಘ, ಸಂಸ್ಥೆಗಳು ಮುಂದೆ ಬಂದು ಸರ್ಕಾರದೊಂದಿಗೆ ಕೈ ಜೋಡಿಸಿ ರಕ್ತಸಂಗ್ರಹದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ನಮ್ಮ ದೇಶದಲ್ಲಿ ಪ್ರತಿ ವರ್ಷ 4 ಕೋಟಿ ಯುನಿಟ್ ನಷ್ಟು ರಕ್ತದ ಬೇಡಿಕೆ ಇದೆ. ಶೇ.1 ರಷ್ಟು ಜನರು ರಕ್ತ ನೀಡಿದರೂ ಈ ಅವಶ್ಯಕತೆಯನ್ನು ನೀಗಿಸಬಹುದು. ಇದಕ್ಕಾಗಿ ಜನರಲ್ಲಿ ಹೆಚ್ಚು…

ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಗ್ಗ ದರದಲ್ಲಿ ಮರಳು; ಸರ್ಕಾರದ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು ₹10 ಲಕ್ಷದೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಯಲ್ಲಿ ಘೋಷಿಸಿದರು. ಪ್ರಶ್ನೋತ್ತರ ಅವಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ₹10 ಲಕ್ಷದೊಳಗಿನ ಮನೆಗೆ 100ರಿಂದ 200 ರೂ. ಟನ್ ದರದಲ್ಲಿ ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು. ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರದಿಂದಲೇ ಉಚಿತವಾಗಿ ಮರಳು ಪೂರೈಕೆ ಮಾಡುವ ಯೋಜನೆ ಇದೆ. ಗ್ರಾಮಪಂಚಾಯ್ತಿಯಿಂದ ಹಿಡಿದು ನಗರಸಭೆ ವ್ಯಾಪ್ತಿಯಲ್ಲಿ ಮನೆ…