ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕೇಸ್

ಕೊಪ್ಪಳ: ಕೊರೋನಾ ಸಂದರ್ಭದಲ್ಲಿ ಪರಿಸ್ಥಿತಿಯ ದುರ್ಲಾಭ ಪಡೆದು ಜೀವನಾಶ್ಯಕ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರುವವರ ಮೇಲೆ ಕಾನೂನು ರಿತ್ಯ ಕ್ತಮ ಖಚಿತ. ಅಂಥವರನ್ನು ಗುರುತಿಸಿ ಕ್ರಮ ಜರುಗಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕೊಪ್ಪಳದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕೊರೊನಾ ನಿಯಂತ್ರಣ ಸಂಬಂಧಪಟ್ಟಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಚಿವ ಬಿ.ಸಿ.ಪಾಟೀಲ್ ಪರಿಶೀಲನೆ ಮಾಡಿದರು.
ಈ ವೇಳೆ ಮಾತನಾಡಿದ ಸಚಿವರು, ಜೀವನಾವಶ್ಯಕ ಸಾಮಗ್ರಿಗಳ ಪೂರೈಕೆ ಹಾಗೂ ಸಾಗಣೆಗೆ ಸರ್ಕಾರ ನಿರ್ಬಂಧ ವಿಧಿಸಿಲ್ಲ. ಆದ್ದರಿಂದ ಕೊರತೆಯ ಪ್ರಶ್ನೆ ಉದ್ಬವಿಸುವುದಿಲ್ಲ ಎಂದರು. ಲಾಕ್ ಡೌನ್ ನೆಪವಾಗಿಟ್ಟುಕೊಂಡು ಜೀವನಾವಶ್ಯಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಿದರೆ ಕ್ರಮ ತೆಗೆದುಕೊಂಡು ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ವಸ್ತುಗಳ ಬೆಲೆಗಳ ನಿಗದಿತ ದರಗಳನ್ನು ಅಂಗಡಿಗಳ ಮುಂದೆ ಪ್ರದರ್ಶಿಸಲು ಸೂಚಿಸುವಂತೆಯೂ ಹೇಳಿದರು.

ಔಷಧ, ದಿನಸಿ, ತರಕಾರಿ ಖರೀದಿ ಬಿಟ್ಟು ಉಳಿದಂತೆ ಅನವಶ್ಯಕವಾಗಿ ಓಡಾಡುವವರ ಮೇಲೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವೂ ಇಲ್ಲ ಎಂದು ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು.

ಸ್ಥಳೀಯರಲ್ಲದ ವ್ಯಕ್ತಿಗಳು, ಜಿಲ್ಲೆಯವರಲ್ಲದ ವ್ಯಕ್ತಿಗಳ ಓಡಾಟಕ್ಕೆ ಸಂಬಂಧಿಸಿದಂತೆ ನಿಗಾ ವಹಿಸಬೇಕು. ಧಾರ್ಮಿಕ ಪ್ರವಚನಗಳಿಗೆ ಹೊರ ರಾಜ್ಯಗಳಿಂದ ಬಂದವರಿದ್ದರೆ ಮಾಹಿತಿ ಸಂಗ್ರಹಿಸಬೇಕು.
ಮರಣ ಅಥವಾ ಇನ್ನಿತರ ತೀರಾ ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಸಂಬಂಧಿಕರನ್ನು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸಾಲವೇ ನೀಡಿದರು.

Related posts