ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

ದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಹಿ ಅನುಭವದ ನಂತರ ಇದೀಗ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಭಾರೀ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ. ಇದೆ ಸಂದರ್ಭದಲ್ಲಿ ದಕ್ಷಿಣದ ರಾಜ್ಯಗಳ ಉಸ್ತುವಾರಿಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ವಹಿಸಿದೆ.

ತಮಿಳುನಾಡು, ಪುದುಚೇರಿ, ಗೋವಾ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ನೇಮಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ನನ್ನ ಹೆಗಲಿಗೆ ವಹಿಸಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ನನ್ನ ಮೇಲಿಟ್ಟಿರುವ ನಂಬಿಕೆಗೆ ಅಭಾರಿಯಾಗಿದ್ದೇನೆ ಎಂದಿದ್ದಾರೆ.

Related posts