ಸಂಪುಟದಿಂದ ನಿರ್ಗಮಿಸಿದ ನಾಗೇಶ್’ಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾರಥ್ಯ

ಬೆಂಗಳೂರು: ಸಂಪುಟದಿಂದ ನಿರ್ಗಮಿಸಿರುವ ಅಬಕಾರಿ ಸಚಿವ ನಾಗೇಶ್ ಅವರಿಗೆ ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಸಾರಥ್ಯ ಸಿಕ್ಕಿದೆ.

ಸಿ.ಎಂ.ಯಡಿಯೂರಪ್ಪರವರು ರಾಜೀನಾಮೆ ಕೇಳಿದ ಸಂದರ್ಭದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡುವ ಭರವಸೆ ನೀಡಿದ್ದರು. ಇದೆ ಸಂದರ್ಭದಲ್ಲಿ ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವಂತೆ ನಾಗೇಶ್ ಅವರುಮನವಿ ಮಾಡಿದ್ದಾರೆನ್ನಲಾಗಿದೆ. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಜಿ ಸಚಿವ ಹೆಚ್.ನಾಗೇಶ್ ಅವರನ್ನು ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.

ಈ ವರೆಗೂ ಅಂಬೇಡ್ಕರ್​ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಮುನಿಕೃಷ್ಣ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಂಸಿ&ಎ ನಿಗಾಮಾಕ್ಕೆ ನೇಮಕ ಮಾಡಲಾಗಿದೆ. ​

Related posts