ಮೋದಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣ್ಣಾ ಹಜಾರೆ ಸಜ್ಜು

ದೆಹಲಿ: ಅಂದು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಇದೀಗ ಮೋದಿ ಸರ್ಕಾರದ ವಿರುದ್ದವೂ ಸಮರಕ್ಕೆ ಸಜ್ಜಾಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಚಳವಳಿ ಜೋರಾಗಿರುವಂತೆಯೇ ಅಣ್ಣಾ ಹಜಾರೆ ಕೂಡಾ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿದಂತೆ ಕೃಷಿಗೆ ಸಂಬಂಧಿಸಿದ ಇತರೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾ ಹಜಾರೆ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರಬರೆದು ಎಚ್ಚರಿಕೆ ನೀಡಿದ್ದಾರೆ.

ಈ ಹಿಂನೀಡಿದ್ದ ಭರವಸೆಯನ್ನು ಈಡೇರಿಸಬೇಕು, ವಿರುದ್ಧ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗಕ್ಕೆ(ಸಿಎಸಿಪಿ) ಸ್ವಾಯತ್ತತೆ ನೀಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆ ವೇಳೆ ಬೇಡಿಕೆ ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿತ್ತಾದರೂ ನಂತರ ಅದನ್ನು ಮರೆತಿದೆ ಎಂಬುದು ಅಣ್ಣಾ ಹಜಾರೆ ಅವರು ಈ ಪಾತ್ರದಲ್ಲಿ ಬೊಟ್ಟು ಮಾಡಿದ್ದಾರೆ.

Related posts