ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರ ಮೇಲಿನ ದೌರ್ಜನ್ಯ ಪ್ರಕರಣ ಮುಂದುವರಿದಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹಾ ಪ್ರಕರಣಗಳು ಪುನರಾವರ್ತನೆಯಾಗಿದ್ದು, ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳದ ಚೆನ್ನೈತೋಡಿ ಎಂಬಲ್ಲಿ ಮಮತಾ ಗಟ್ಟಿ ಎಂಬ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಆರೋಪಿಯನ್ನು ಕಾಂತಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.

ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು ಈ ಘಟನೆ ಕುರಿತಂತೆ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿರುವ ಪಂಜಾಲಕಟ್ಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts