ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ’ಗೆ ಭೀಮ ಬಲ

ದೆಹಲಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಮೋದಿ ನರೇಂದ್ರ ಮೋದಿ ಘೋಷಿಸಿರುವ ‘ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ’ಗೆ ಕೇಂದ್ರ ಸರ್ಕಾರ ಭಾರೀ ಮೊತ್ತದ ಹಣವನ್ನು ಹಂಚಿಕೆ ಮಾಡಿದೆ.

ಈ ಯೋಜನೆ ಅನುಷ್ಠಾನಕ್ಕೆ 22,810 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಸಂತೋಷ್ ಗಂಗ್ವಾರ್ ಮಾಧ್ಯಮಗಳಿಗೆ ವಿವರಿಸಿದರು.

ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯಡಿ ಉದ್ಯೋಗ ಕಲ್ಪಿಸುವ ಸಂಸ್ಥೆಗಳ, ಕೈಗಾರಿಕೆಗಳ ಪರವಾಗಿ ಉದ್ಯೋಗಿ, ಸಂಸ್ಥೆ ಪಾಲನ್ನು ಕೇಂದ್ರ ಸರ್ಕಾರ ಭರಿಸಲಿದೆ.

Related posts