ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪಿದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಯಲಹಂಕ- ಹಿಂದೂಪುರ ಹೆದ್ದಾರಿಯ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಈಶ್ವರಪ್ಪ (75), ಪುರುಷೋತ್ತಮ (75), ಕಾಳಪ್ಪ(68), ನಾರಾಯಣಪ್ಪ(70),ಗೋಪಿನಾಥ್ (45) ಸೇರಿದಂತೆ ಚಾಲಕ ನರಸಿಂಹಮೂರ್ತಿ(50) ಎಂದು ಗುರುತಿಸಲಾಗಿದೆ. ಸುದ್ದಿತಿಳಿದು ಸ್ಥಳಕ್ಕೆ ಧಾವಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Author: NavaKarnataka
‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್; ಪ್ರೀತಿಯ ಕಥಾಹಂದರ ತಂದ ಭರವಸೆ!
ಮುಂಬೈ: ಮುಂಬರುವ ‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್‌ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು ಸಾದಿಯಾ ಖತೀಬ್ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ. ಇದು ಇಬ್ಬರು ಮುಖ್ಯಪಾತ್ರಗಳನ್ನು ಆಳವಾದ ಆತ್ಮೀಯ ಅಪ್ಪುಗೆಯಲ್ಲಿ ಸೆರೆಹಿಡಿಯುತ್ತದೆ, ಪ್ರೀತಿ, ಹಂಬಲ ಮತ್ತು ಮಾತನಾಡದ ಪ್ರಕ್ಷುಬ್ಧತೆಯ ಬಗ್ಗೆ ಮಾತನಾಡುವ ಒಂದು ಕ್ಷಣ. ಅವರ ದೇಹ ಭಾಷೆ ಮತ್ತು ಅಭಿವ್ಯಕ್ತಿಗಳು ಉತ್ಸಾಹದಿಂದ ಕೆತ್ತಿದ ಮತ್ತು ವಿಧಿಯಿಂದ ಪರೀಕ್ಷಿಸಲ್ಪಟ್ಟ ಸಂಬಂಧವನ್ನು ಸೂಚಿಸುತ್ತವೆ. ಈ ಪೋಸ್ಟರ್ ಅನ್ನು ಬ್ರೆಜಿಲಿಯನ್ ಗಾಯಕಿ ಅಲೆಕ್ಸಿಯಾ ಎವೆಲಿನ್ ಹಾಡಿದ ಗಾಯನ ಟ್ರ್ಯಾಕ್‌ಗೆ ಹೊಂದಿಸಲಾಗಿದೆ, ಇದು ಭಾವನಾತ್ಮಕವಾಗಿ ತಲ್ಲೀನಗೊಳಿಸುವ ಅನುಭವಕ್ಕೆ ಧ್ವನಿಯನ್ನು ಹೊಂದಿಸುತ್ತದೆ. HARSHVARDHAN RANE – SADIA KHATEEB STARRER TITLED 'SILAA' – FILMING BEGINS TOMORROW… #Silaa is the title of the upcoming romantic-action drama starring #HarshvardhanRane and #SadiaKhateeb,…
ಖರ್ಗೆ ಕೇವಲ ಕೈಗೊಂಬೆ’: ಪ್ರಲ್ಹಾದ್ ಜೋಶಿ ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಸರಿಗೆ ಮಾತ್ರ ಅಧ್ಯಕ್ಷರನ್ನಾಗಿ ಮಾಡಿದೆ ಮತ್ತು ಅವರನ್ನು ಕೇವಲ ಕೈಗೊಂಬೆಯಾಗಿಟ್ಟುಕೊಂಡು ಪಕ್ಷವನ್ನು ನಡೆಸುತ್ತಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬಣ್ಣಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಖರ್ಗೆ ಹೊಂದಿದ್ದರೂ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಕೇವಲ ಸಾಂಕೇತಿಕ ಅಧಿಕಾರವನ್ನು ನೀಡಿದೆ ಎಂದು ವಿಶ್ಲೇಷಿಸಿದರು. ಖರ್ಗೆ ಅವರ ಪ್ರಸ್ತುತ ಪರಿಸ್ಥಿತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪರಿಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೈಕಮಾಂಡ್ ಕೈಯಲ್ಲಿದೆ; ನಮಗೆ ಅದರ ಬಗ್ಗೆ ಏನೂ ತಿಳಿದಿಲ್ಲ’ ಎಂಬ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಇದು ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಸ್ಪಷ್ಟ ಪ್ರತಿಬಿಂಬವಾಗಿದೆ ಮತ್ತು ಹಿರಿಯ ನಾಯಕರಿಗೆ ಪಕ್ಷದಲ್ಲಿ ಯಾವುದೇ…
ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್
ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ ಘೋಷಿಸಿರುವುದು ಸಾರ್ವಜನಿಕರಲ್ಲಿ ಸಂತಸ ತಂದಿದೆ. ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಗಳು ಮಂಗಳವಾರದಿಂದಲೇ ಈ ಹೊಸ ದರ ಪ್ರಕಟಿಸಿವೆ. ಇಳಿಕೆಯಿಂದಾಗಿ ಹೋಟೆಲ್, ರೆಸ್ಟೋರೆಂಟ್, ವ್ಯಾಪಾರಿ ಬಳಕೆದಾರರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.ಆದರೆ, ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
RSSಗೆ ನಿಷೇಧ? ಪ್ರಿಯಾಂಕ್ ಪ್ರತಿಪಾದನೆಗೆ ವಿಜಯೇಂದ್ರ ಪ್ರಹಾರ
ಬೆಂಗಳೂರು: ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?’ ಎಂದು ಆರೆಸ್ಸೆಸ್ ಬ್ಯಾನ್ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ ಮಹಾನ್ ದೇಶಭಕ್ತರ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಪ್ರಖರ ಸತ್ಯವನ್ನು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹತಾಶೆಯ ಮನಸ್ಸಿನ ಬಾಗಿಲ ಕಿಂಡಿಯಿಂದ ಇಣುಕಿ ನೋಡಲಿ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಹಾನ್ ವೃಕ್ಷ, ಈ ವೃಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತೇವೆಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ರಾಜಕೀಯ ಶಕ್ತಿಗಳು ವ್ಯರ್ಥ ಪ್ರಲಾಪ ಮಾಡುತ್ತಲೇ ಇವೆ. RSSನ ರಂಬೆ-ಕೊಂಬೆಗಳನ್ನೂ ಕೊಂಕಿಸಲಾಗದವರ ಸೊಲ್ಲಡಗಿ ದಿಕ್ಕು ಕಾಣದಂತೆ ಧೂಳಿಪಟವಾಗಿವೆ ಎಂದು ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಗೆ ನೆನಪಿಸಿದರು. ಈ ಸಾಲಿಗೆ ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದಲೇ…
ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ
ಹೈದರಾಬಾದ್: ತೆಲಂಗಾಣದ ಸಾಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕಂಪನಿಯ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸ್ಥಳದಲ್ಲೇ ಸಾವನ್ನಪಿದರೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದ ಹಿನ್ನೆಲೆ ಇದಾಗಿದ್ದು, ಘಟನೆಯ ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ ಪಡೆ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು. ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಹುಲಿ ಹಾಗೂ ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಮೂರು ಹಿರಿಯ ಅರಣ್ಯ ಅಧಿಕಾರಿಗಳನ್ನು ‘ಕಡ್ಡಾಯ ರಜೆ’ಯ ಮೇಲೆ ಕಳುಹಿಸಿದೆ. ಈ ಸಂಬಂಧ ಸೋಮವಾರ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಹುಲಿಗಳ ಸಾವು ಸ್ಥಳೀಯ ಅರಣ್ಯ ಅಧಿಕಾರಿಗಳ ಕಣ್ಣಿಂದ ದೂರವಿದ್ದದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ. ಚಕ್ರಪಾಣಿ, ಹನೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ, ಹೂಗ್ಯಂ ವಲಯದ ಉಸ್ತುವಾರಿ ಉಪವಿಭಾಗಾಧಿಕಾರಿ ಮಾದೇಶ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹುಲಿಗಳ ಶವಗಳು ಕಾಡು ಶಿಬಿರದಿಂದ ಕೇವಲ 800 ಮೀ. ದೂರದಲ್ಲಿ ಪತ್ತೆಯಾಗಿದ್ದರೂ…
‘ಹಳೆಯ ವಾಹನಗಳಿಗೆ ತೈಲ ಬಳಕೆ ನಿಷೇಧ’; ಇಂದಿನಿಂದಲೇ ಜಾರಿ, ದೆಹಲಿಯಿಂದ ಪ್ರಾರಂಭ
ನವದೆಹಲಿ: ವಾಹನ ಮಾಲಿನ್ಯವನ್ನು ಎದುರಿಸುವ ಪ್ರಮುಖ ಹೆಜ್ಜೆಯಾಗಿ, ದೆಹಲಿ ಸರ್ಕಾರವು ಮಂಗಳವಾರದಿಂದ ಜೀವಿತಾವಧಿಯ ಅಂತ್ಯ (EOL) ವಾಹನಗಳ ಮೇಲೆ ಕಠಿಣ ಹೊಸ ನಿಯಮಗಳನ್ನು ಜಾರಿಗೊಳಿಸಲು ಪ್ರಾರಂಭಿಸಿದೆ. ವಾಯು ಗುಣಮಟ್ಟ ನಿರ್ವಹಣಾ ಆಯೋಗ (CAQM) ಹೊರಡಿಸಿದ ನಿರ್ದೇಶನಗಳ ಪ್ರಕಾರ, ರಾಷ್ಟ್ರೀಯ ರಾಜಧಾನಿ ಪ್ರದೇಶದ (NCT) ಎಲ್ಲಾ ಪೆಟ್ರೋಲ್ ಪಂಪ್‌ಗಳು AI-ಚಾಲಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳ ಮೂಲಕ ಗುರುತಿಸಲಾದ ಹಳೆಯ ವಾಹನಗಳಿಗೆ ಇಂಧನ ನಿರಾಕರಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. EOL ವಾಹನಗಳು, ಡೀಸೆಲ್‌ಗೆ 10 ವರ್ಷಗಳು ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷಗಳು ಎಂಬ ಕಾನೂನುಬದ್ಧ ವಯಸ್ಸಿನ ಮಿತಿಯನ್ನು ಮೀರಿದ ವಾಹನಗಳನ್ನು ಪೆಟ್ರೋಲ್ ಅಥವಾ ಡೀಸೆಲ್ ಬಂಕ್‌ಗಳಲ್ಲಿ ಇಂಧನ ತುಂಬಿಸಲು ಅನುಮತಿಸಲಾಗುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬಂದರೆ ಈ ವಾಹನಗಳು ಭಾರಿ ದಂಡಕ್ಕೆ ಗುರಿಯಾಗುತ್ತವೆ. ನಿಯಮವನ್ನು ಉಲ್ಲಂಘಿಸಿದ ನಾಲ್ಕು ಚಕ್ರದ ಮಾಲೀಕರಿಗೆ 10,000 ರೂ. ದಂಡ ವಿಧಿಸಲಾಗುತ್ತದೆ…
ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ
ಬೆಂಗಳೂರು: “ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ” ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ವ್ಯಂಗ್ಯವಾಡಿದರು.
ಮೈಸೂರು ದಸರಾ ಉದ್ಘಾಟನೆಯ ಕುರಿತ ಅಶೋಕ್ ಹೇಳಿಕೆಗೆ ಮಹದೇವಪ್ಪ ತೀಕ್ಷ್ಣ ತಿರುಗೇಟು
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟನೆ ಮಾಡುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಆರ್. ಅಶೋಕ್ ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿರುತ್ತದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ,” ಎಂದು ಮಹದೇವಪ್ಪ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತ ಹೇಳಿದರು. “ಮೂರು ತಿಂಗಳಲ್ಲಿ ಕ್ರಾಂತಿ ನಡೆಯುತ್ತದೆ ಎಂಬ ಹೇಳಿಕೆಯನ್ನು ಅವರು ಯಾವ ಅರ್ಥದಲ್ಲಿ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಅದನ್ನು ಅವರಿಗೇ ಕೇಳಬೇಕು. ಕೆಲವರು ರಾಜಕೀಯವಾಗಿ ಅನುಕೂಲಕರವಾಗಿರುವಂತೆ ಹೇಳಿಕೆ ನೀಡುತ್ತಾರೆ. ಆದರೆ ರಾಜಕೀಯದಲ್ಲಿ ಯಾವಾಗಲೂ ಕ್ರಾಂತಿಗಳು ನಡೆಯುತ್ತಿರುತ್ತವೆ. ಅದನ್ನೇ ಸಂಕ್ರಾಂತಿಯಾಗಿ ಜೋರಾಗಿ ಮಾಡೋಣ ಬಿಡಿ,” ಎಂದು ಅವರು ವ್ಯಂಗ್ಯವಾಡಿದರು. ಆರ್. ಅಶೋಕ್ ಅವರ “ಸಿದ್ದರಾಮಯ್ಯ ಈ ಬಾರಿ ದಸರಾ ಉದ್ಘಾಟನೆ ಮಾಡುವುದಿಲ್ಲ” ಎಂಬ ಹೇಳಿಕೆಗೆ ತಿರುಗೇಟು ನೀಡಿದ…