ಜುಲೈ 26 ರವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲೇ ಇದ್ದು ಪರಿಸ್ಥಿತಿ ನಿಭಾಯಿಸಲು ಸರ್ಕಾರ ಹರಸಾಹಸಪಡುತ್ತಿದೆ. ಲಾಕ್’ಡೌನ್ ನಿಯಮ ಜಾರಿಯಲ್ಲಿದ್ದರೂ ಜನರ ನಿರ್ಲಕ್ಷ್ಯ ಕಂಡುಬರುತ್ತಿವೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪ್ರಕ್ರಿಯೆಯೂ ಸಾಗಿದೆ.

ಈ ನಡುವೆ, ಬೆಂಗಳೂರು ನಗರದಲ್ಲಿ ಕೊರೋನಾ ತಡೆಗಟ್ಟಲು ಮತ್ತೆ ಒಂದು ತಿಂಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಜುಲೈ 26 ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

Related posts