ಬೆಳಗಾವಿ ಉಪಚುನಾವಣೆಗೆ ಕೈ ರಣತಂತ್ರ

ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಿದರು.‌

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು.

Related posts