ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ಸಂಪುಟ ಒಪ್ಪಿಗೆ.

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.

ಬೆಂಗಳೂರು: ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರದ ಮೇಲೆ ನಿರಂತರ ಒತ್ತಡ ಹೇರಿದ್ದು, ಆ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕತೃತ್ವಶಕ್ತಿ ಮತ್ತು ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ. 60ರಷ್ಟು ಹಣಕಾಸಿನ ನೆರವು ನೀಡಲಿದೆ. ಉಳಿದ ಶೇ. 40ರಷ್ಟು ರಾಜ್ಯ ಸರ್ಕಾರದ ಪಾಲಿನ‌ ಅನುದಾನಕ್ಕೆ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Related posts