ಕುಂದಾನಗರಿಯಲ್ಲಿ ಕಸ ಎತ್ತುವ ನೂತನ ಆಟೋಗಳಿಗೆ ಹಸಿರು ನಿಶಾನೆ

ಬೆಳಗಾವಿ: ಕುಂದಾ ನಗರಿಯಲ್ಲಿ ನಗರದಲ್ಲಿ ಕಸ ಎತ್ತುವ ನೂತನ ಆಟೋ ಗಳಿಗೆ ನಗರಾಭಿವೃದ್ಧಿ ಸಚಿವಬಿ.ಎ.ಬಸವರಾಜ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಸೇವೆಗೆ ಮುಕ್ತಗೊಳಿಸಿದರು.

ಬೆಳಗಾವಿಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ ನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಅರ್.ಅಂಬೇಡ್ಕರ್ ಅವರ ಪುತ್ಥಳಿ ಗೆ ಮಾಲಾರ್ಪಣೆ ಮಾಡಿದರು. ಬಳಿಕ ಈ ವಾಹನಗಳನ್ನು ಸೇವೆಗೆ ಮುಕ್ತಗೊಳಿಸಿದರು.

ಇದೇ ಸಂದರ್ಭದಲ್ಲಿ ಅವರು, ಬೆಳಗಾವಿ ಮಹಾನಗರ ಪಾಲಿಕೆ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಗರದಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ನಿರ್ದೇಶನ ನೀಡಿದರು.

ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಶಂಕರ್ ಪಾಟೀಲ ಮುನೇನಕೊಪ್ಪ, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಹಿರೇಮಠ, ಬೆಳಗಾವಿ ಮೇಯರ್, ಆಯುಕ್ತರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Related posts