ಭಾರತ್ ಬಂದ್’; ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ತರಾಟೆ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧದ ಭಾರತ್ ಬಂದ್’ಗೆ ಬೆಂಬಲ ನೀಡಿರುವ ಕಾಂಗ್ರೆಸ್ ನಾಯಕರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂಬ ಸಂಗತಿಯನ್ನು ಸುಧಾಕರ್ ಬಹಿರಂಗ ಮಾಡಿದ್ದಾರೆ.

Related posts