ಬಿಎಸ್‌ವೈ ಬದಲಾವಣೆ ಇಲ್ಲ ಎಂದ ಬಿಜೆಪಿ ಹೈಕಮಾಂಡ್

ಬೆಂಗಳೂರು: ನಿತ್ಯವೂ ಒಂದಿಲ್ಲೊಂದು ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿರುವ ರಾಜ್ಯ ಭಾರತೀಯ ಜನತಾ ಪಕ್ಷದಲ್ಲಿ ಸಿಎಂ ಬದಲಾವಣೆಯ ಮಾತುಗಳನ್ನೂ ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನೀಡಿದ ವಿಶೇಷ ಸಂದರ್ಶನದಲ್ಲಿ ಗೊತ್ತಾದ ಸಂಗತಿಗಳು ಅಚ್ಚರಿ ಹಾಗೂ ಕುತೂಹಲಕಾರಿ ಬೆಳವಣಿಗೆಗಳತ್ತ ಬೆಳಕುಚೆಲ್ಲಿದೆ.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾಗ್ತಾರ ಎಂಬ ಪ್ರಶ್ನೆಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿರುವ ರಾಜ್ಯ ಬಿಜೆಪಿ ಯಲುಸ್ತುವಾರಿ ನಾಯಕ ಅರುಣ್ ಸಿಂಗ್, ಅದೇನಿದ್ದರೂ ವದಂತಿಗಳು. ಯಡಿಯೂರಪ್ಪ ಅವರ ರಾಜೀನಾಮೆಗೆ ಹೈಕಮಾಂಡ್ ಯಾವುದೇ ಡೆಡ್‌ಲೈನ್ ನೀಡಿಲ್ಲ. ಅವರು ಈ ವರೆಗೂ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಹಬ್ಬಾಸ್‌ಗಿರಿಯ ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ಯಡಿಯೂರಪ್ಪ ಪ್ರಬಲ ನಾಯಕರಾಗಿದ್ದಾರೆ. ಹಾಗಾಗಿ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಚಿಂತನೆಯಿದೆ ಎಂದೂ ಅರುಣ್ ಸಿಂಗ್ ತಿಳಿಸಿದ್ದಾರೆ.

Related posts