ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳ ಗುರಿ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಫ್ಯೂರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಕಲ್ಪ ಮಾಡಿದ್ದಾರೆ.

ರಾಜ್ಯದಲ್ಲಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ಚುನಾವಣೆಗಳಲ್ಲೂ ನಾವು ಅಭೂತಪೂರ್ವ ಗೆಲುವು ಸಾಧಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆ ನಮ್ಮದಾಗಲಿ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಗ್ರಾಮ ಪಂಚಾಯತ್‍ಗಳಲ್ಲಿ 45 ಸಾವಿರ ಜನ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಕನಕಪುರದಲ್ಲೂ ಬಿಜೆಪಿ ಗೆದ್ದಿದೆ. ಬಾದಾಮಿಯಲ್ಲೂ ಉತ್ತಮ ಸಾಧನೆ ಮಾಡಿದೆ. ಹಾಸನ ಮತ್ತು ಮಂಡ್ಯದಲ್ಲೂ ಕೇಸರಿ ಧ್ವಜ ಹಾರಾಡುತ್ತಿದೆ. ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಚಿವರಾದ ಆರ್.ಅಶೋಕ್, ಸುರೇಶ್‍ಕುಮಾರ್, ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಅರವಿಂದ ಲಿಂಬಾವಳಿ, ಸಂಸದರಾದ ಪಿ.ಸಿ.ಮೋಹನ್, ಪ್ರತಾಪ್‍ಸಿಂಹ, ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭಾಗವಹಿಸಿದ್ದರು.

Related posts