ಗೆಲುವಿನ ಅಭಿಯಾನ ಮುಂದುವರಿಸಲು ಬಿಜೆಪಿ ಕಾರ್ಯತಂತ್ರ; ರಾಜ್ಯಗಳ ಉಸ್ತುವಾರಿಗೆ ಯುವ ತಂಡ

ದೆಹಲಿ: ಇತ್ತೀಚಿನ ಚುನಾವಣೆಗಳಲ್ಲಿ ಜಯಭೇರಿ ಭಾರಿಸಿರುವ ಬಿಜೆಪಿಯಲ್ಲಿ ಸಂಚಲನ ಉಂಟಾಗಿದೆ. ಗೆಲುವಿನ ಅಭಿಯಾನವನ್ನು ಮುಂದುವರಿಸಲು ಕಾರ್ಯತಂತ್ರ ರೂಪಿಸಿರುವ ಪಕ್ಷದ ಹೈಕಮಾಂಡ್ ವಿವಿಧ​ ರಾಜ್ಯಗಳಿಗೆ ಉಸ್ತುವಾರಿಯ ಹೊಸ ತಂಡವನ್ನು ಘೋಷಿಸಿದೆ.

ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಅರುಣ್​​ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಅವರ ಜೊತೆ ಡಿಕೆ ಅರುಣಾ ಅವರನ್ನು ನೇಮಿಸಲಾಗಿದೆ. ರಾಜ್ಯದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.

ಪಿ.ಮುರುಳೀಧರ ರಾವ್‌ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ. ನಿರ್ಮಲಕುಮಾರ್‌ ಸುರಾನಾ ಅವರನ್ನು ನೆರೆಯ ಪುದುಚೇರಿ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗದೆ.

Related posts