ಬೆಂಗಳೂರು: RSS ವಿರುದ್ದದ ಸಿದ್ದರಾಮಯ್ಯ ಸರ್ಕಾರದ ಪ್ರಹಾರಕ್ಕೆ ಕನ್ನಡ ಕಾರ್ಯಕರ್ತರು ತತ್ತರಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವ ಕ್ರಮ ಇದೀಗ ರಾಜ್ಯ ಸರ್ಕಾರಕ್ಕೆ ತಿರುಗುಬಾಣ ಎಂಬಂತಾಗಿದೆ. RSS ಮೇಲಿನ ದ್ವೇಷದ ನಡೆಯಿಂದಾಗಿ ಕನ್ನಡ ಸಂಘಟನೆಗಳೂ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. RSSಗೆ ತನ್ನ ಶಾಖೆಯನ್ನು ನಡೆಸಲು ಸಾರ್ವಜನಿಕ ಸ್ಥಳವೇ ಆಗಬೇಕೆಂದಿಲ್ಲ. ಬಹುತೇಕ ಊರುಗಳಲ್ಲಿ ಯಾರದಾದರೂ ಮನೆಗಳಲ್ಲಿ ಶಾಖೆ ಹಾಗೂ ಬೈಠಕ್’ಗಳನ್ನು ನಡೆಸಲಾಗುತ್ತದೆ. ಬಹಿರಂಗ ಸಮಾವೇಶ ಮತ್ತು ಪಾಠ ಸಂಚಲನಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತವೆಯಾದರೂ ಅವು ವರುಷಕ್ಕೊಮ್ಮೆ ಮಾತ್ರ. ಹಾಗಾಗಿ ನಿರ್ಬಂಧದಿಂದ RSSಗೆ ಸಮಸ್ಯೆಯಾಗದು, ಆದರೆ ಇದರ ಪರಿಣಾಮ ಬೀರುವುದು ಕನ್ನಡಿಗರ ಮೇಲೆ. ಕರುನಾಡಿನ ಗಲ್ಲಿಗಲ್ಲಿಗಳಲ್ಲಿ ಕನ್ನಡ ಧ್ವಜ ಹಾರಿಸುವ ಕನ್ನಡಿಗರಿಗೆ ಸಿದ್ದರಾಮಯ್ಯ ಸರ್ಕಾರದ ಈ ದ್ವೇಷದ ನಿಯಮದಿಂದಾಗಿ ಅನ್ಯಾಯವಾಗುತ್ತದೆ. ತಮಿಳುನಾಡು ಸಹಿತ ಹಲವು…
Blog
ರಾಣೇಬೆನ್ನೂರು ಬಳಿ ಭೀಕರ ಅಪಘಾತ; ಮೂವರು ದುರ್ಮರಣ
ಹಾವೇರಿ: ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾದ ನಿಂಗಮ್ಮ ಜಿಗಳೇರ್ (70), ಚಮನಸಾಬ್ ಕೆರಿಮತ್ತಿಹಳ್ಳಿ (65), ಮಾಬುಸಾಬ್ ದೊಡ್ಡಗುಬ್ಬಿ (65) ಎಂದು ಗುರುತಿಸಲಾಗಿದೆ.
ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ; ಶೆಟ್ಟರ್ ಆರೋಪ
ಬೆಳಗಾವಿ: ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸುವ ಉದ್ದೇಶವನ್ನು ಸಿದ್ದರಾಮಯ್ಯ ಈಡೇರಿಸಬೇಕಿದೆ. ಈ ಊದೇಶಕ್ಕಾಗಿ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದ ಪ್ರತಿಯೊಬ್ಬರಲ್ಲೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದರು. ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಆಗಿ ಕಾಂಗ್ರೆಸ್ ಹೈಕಮಾಡ್ ಮಾಡಿಕೊಂಡಿದೆ ಎಂದು ಅವರು ದೂರಿದರು. ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟ ಹೆಚ್ಚಿದ್ದು, ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶೆಟ್ಟರ್ ವಿಶ್ಲೇಷಿಸಿದರು.
ಭಾರತದ ಸುಸ್ಥಿರ ಯೋಜನೆಗಳಿಗೆ ಇಐಬಿ ಗ್ಲೋಬಲ್ನಿಂದ ₹5,200 ಕೋಟಿ ಅನುದಾನ
ನವದೆಹಲಿ: ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ನ ಅಭಿವೃದ್ಧಿ ವಿಭಾಗವಾದ EIB ಗ್ಲೋಬಲ್ ಭಾರತದಲ್ಲಿ ಶುದ್ಧ ನೀರು, ಸುಸ್ಥಿರ ನಗರ ಸಾರಿಗೆ ಮತ್ತು ಹವಾಮಾನ ಕ್ರಮವನ್ನು ಉತ್ತೇಜಿಸಲು ₹5,200 ಕೋಟಿ ಮೌಲ್ಯದ ಮೂರು ಹೊಸ ಹಣಕಾಸು ಪ್ಯಾಕೇಜ್ಗಳನ್ನು ಘೋಷಿಸಿದೆ. ಈ ಹೂಡಿಕೆಗಳಲ್ಲಿ, ನಾಗಪುರ ಮತ್ತು ಪುಣೆ ಮೆಟ್ರೋ ವಿಸ್ತರಣೆ ಯೋಜನೆಗಳಿಗೆ ₹3,040 ಕೋಟಿ ಸಾಲವನ್ನು ಒದಗಿಸಲಾಗಿದ್ದು, ಇದು ಎರಡು ನಗರಗಳಲ್ಲಿನ ಹಸಿರು ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಟ್ರಾಫಿಕ್ ದಟ್ಟಣೆ ಹಾಗೂ ಮಾಲಿನ್ಯವನ್ನು ತಗ್ಗಿಸಲು ನೆರವಾಗಲಿದೆ. EIB ಗ್ಲೋಬಲ್ ಪ್ರಕಟಣೆಯ ಪ್ರಕಾರ, “ನಾಗಪುರ ಮೆಟ್ರೋ ಕಾರ್ಯಾರಂಭದಿಂದ ಸಾರಿಗೆ ವಲಯದ CO₂ ಹೊರಸೂಸುವಿಕೆಯಲ್ಲಿ ಸುಮಾರು 22% ಇಳಿಕೆಯನ್ನು ಸಾಧಿಸುವ ನಿರೀಕ್ಷೆಯಿದೆ. ಪುಣೆ ಮೆಟ್ರೋ ಜಾಲವು 100 ಮಿಲಿಯನ್ಗಿಂತಲೂ ಹೆಚ್ಚು ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಹಸಿರು ಪ್ರಯಾಣದ ಅವಕಾಶ ಒದಗಿಸುತ್ತದೆ,” ಎಂದು ಹೇಳಲಾಗಿದೆ. ಇದಲ್ಲದೆ, ಉತ್ತರಾಖಂಡದಲ್ಲಿ ನೀರು ಸರಬರಾಜು ಮತ್ತು ನೈರ್ಮಲ್ಯ ಸೇವೆಗಳನ್ನು…
ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ನೇಮಕ; ಸರ್ಕಾರದ ಆದೇಶ
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಆಯುಕ್ತರ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ್ ವಾಳ್ವೇಕರ್ ಆಯೋಗದ ಬೆಂಗಳೂರು ಪೀಠಗಳಿಗೆ ಕಮೀಷನರ್ ಆಗಿ ಸರ್ಕಾರ ನೇಮಕ ಮಾಡಿದೆ. ಕಲಬುರಗಿ ಪೀಠಕ್ಕೆ ಬಿ.ವೆಂಕಟ್ ಸಿಂಗ್ ಅವರನ್ನು ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ರವರು ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ, ವಿವಿಧ ಆಡಳಿತ, ವ್ಯವಸ್ಥಾಪಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಸ್ತೆ ಸುರಕ್ಷತೆ, ಸಾರ್ವಜನಿಕ ಕಲ್ಯಾಣ ಮತ್ತು ಸಂಪನ್ಮೂಲ ನಿರ್ವಹಣೆಯಲ್ಲಿ ಮಾಡಿರುವ ಸಾಧನೆ ಹೆಗ್ಗುರುತಾಗಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿ ನಂತರ, ಮಾನವ ಸಂಪನ್ಮೂಲ…
ಬಿಹಾರ ವಿಧಾನಸಭಾ ಚುನಾವಣೆ: ಗಾಯಕಿ ಮೈಥಿಲಿ ಠಾಕೂರ್ಗೆ ಬಿಜೆಪಿ ಟಿಕೆಟ್
ನವದೆಹಲಿ: ಮೈಥಿಲಿ ಸಂಸ್ಕೃತಿಗೆ ನೀಡಿದ ಕೊಡುಗೆಗಳಿಗಾಗಿ ಪ್ರಸಿದ್ಧ ಜಾನಪದ ಮತ್ತು ಭಕ್ತಿ ಗಾಯಕಿ ಮೈಥಿಲಿ ಠಾಕೂರ್ ಅವರನ್ನು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ದರ್ಭಂಗಾ ಜಿಲ್ಲೆಯ ಅಲಿನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಮಧುಬನಿ ಜಿಲ್ಲೆಯ ಬೆನಿಪಟ್ಟಿಯ 25 ವರ್ಷದ ಗಾಯಕಿ, ಮಂಗಳವಾರ ರಾಜ್ಯ ಪಕ್ಷದ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪಕ್ಷದ ಆಂತರಿಕ ಚಲನಶೀಲತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವರದಿಗಳ ನಡುವೆ ಹಾಲಿ ಬಿಜೆಪಿ ಶಾಸಕ ಮಿಶ್ರಿಲಾಲ್ ಯಾದವ್ ಅವರ ಸ್ಥಾನವನ್ನು ತುಂಬಿದ್ದಾರೆ. ಅಲಿನಗರ ಪ್ರಮುಖ ಅಖಾಡವಾಗಿ ಹೊರಹೊಮ್ಮಿರುವ ಮಿಥಿಲಾಂಚಲ್ ಪ್ರದೇಶದಲ್ಲಿ ತನ್ನ ಆಕರ್ಷಣೆಯನ್ನು ಹೆಚ್ಚಿಸಲು ಯುವಜನರು ಮತ್ತು ಸಾಂಸ್ಕೃತಿಕ ಉತ್ಸಾಹಿಗಳಲ್ಲಿ ತನ್ನ ಜನಪ್ರಿಯತೆಯನ್ನು ಬಳಸಿಕೊಳ್ಳಲು ಬಿಜೆಪಿ ಮಾಡಿದ ಕಾರ್ಯತಂತ್ರದ ನಡೆ ಗಮನಸೆಳೆದಿದೆ. “ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್…
ಭತ್ತ ಸಂಶೋಧನೆ: ಫಿಲಿಪೈನ್ಸ್ ನೊಂದಿಗೆ ಮಹತ್ವದ ಒಡಂಬಡಿಕೆಗೆ ಚಲುವರಾಯಸ್ವಾಮಿ ಸಹಿ
ಮನಿಲಾ(ಫಿಲಿಪೈನ್ಸ್): ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಫೈನ್ಸ್ ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಫಿಲಿಪೈನ್ಸ್ ನ ಮನಿಲಾದಲ್ಲಿರುವ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಒಪ್ಪಂದಕ್ಕೆ ಸಹಿ ಮಾಡಿದರು. ರಾಜ್ಯದಲ್ಲಿ ನೆರೆ ಹಾವಳಿ ,ಬರ ಪರಿಸ್ಥಿತಿ ಗಳು ಕರಾವಳಿ,ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು. ಅಲ್ಲದೆ ಭತ್ತದ…
ಬಿಜೆಪಿ ಆಡಳಿತವಿರುವ ರಾಜ್ಯಗಳಿಗಿಂತ ಕರ್ನಾಟಕದ ಸಾರಿಗೆ ವ್ಯವಸ್ಥೆಯೇ ಮೇಲು; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಬಗ್ಗೆ ಟೀಕಿಸಿರುವ, ಅದರಲ್ಲೂ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕದ ಸಾರಿಗೆ ನಿಗಮಗಳ ಸುಧಾರಣೆ ಬಗ್ಗೆ ಅಂಕಿಅಂಶಗಳನ್ನು ಮುಂದಿಟ್ಟಿರುವ ರಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಗುಜರಾತ್, ರಾಜಸ್ಥಾನ, ಒಡಿಶಾಗಳಲ್ಲಿ ಪ್ರತಿ ಸಾವಿರ ಜನರಿಗೆ ಲಭ್ಯವಿರುವ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಕರ್ನಾಟಕ ಆ ಎಲ್ಲಾ ರಾಜ್ಯಗಳಿಗಿಂತ ಪ್ರಗತಿ ಸಾಧಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿದರು. ಬೆಂಗಳೂರು ನಗರದ ಜೀವನಾಡಿಯಾಗಿರುವ ಬಿಎಂಟಿಸಿಯು ಪ್ರತಿದಿನ 48 ಲಕ್ಷ ಜನರಿಗೆ ಸಾರಿಗೆ…
ಬೆಂಗಳೂರಿನಲ್ಲಿ ಸಣ್ಣ ವಿಸ್ತೀರ್ಣದ ಮನೆಗಳಿಗೆ ಇನ್ನು OC ಅಗತ್ಯವಿಲ್ಲ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಈಗ ಸ್ವಾಧೀನಾನುಭವ (Occupancy Certificate–OC) ಅಗತ್ಯವಿಲ್ಲ ಎಂಬ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಇದುವರೆಗೆ ಓಸಿ ಇಲ್ಲದ ಕಟ್ಟಡಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಹಾಗೂ ಜಲಮಂಡಳಿ ನೀರಿನ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಇದೀಗ 30×40 ಅಡಿ ವಿಸ್ತೀರ್ಣದ ನಿವೇಶನಗಳ ಮನೆಗಳಿಗೆ ಓಸಿ ವಿನಾಯಿತಿ ನೀಡುವಂತೆ ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟದ ಅನುಮೋದನೆಯಂತೆ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾವಿರಾರು ಸಣ್ಣ ಮನೆಮಾಲೀಕರಿಗೆ ಇದರಿಂದ ದೊಡ್ಡದಾದ ತಾತ್ಕಾಲಿಕ ನಿಟ್ಟಿನಲ್ಲಿಯೇ ನಿಟ್ಟಿನ ಸುಧಾರಣೆಯಾಗಿದೆ ಎಂದು ನಗರಾಭಿವೃದ್ಧಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
‘ಮನ ಶಂಕರ ವರ ಪ್ರಸಾದ್ ಗರು’: ಮೊದಲ ಸಿಂಗಲ್ ‘ಮೀಸಲ ಪಿಲ್ಲ್’ ಆಕರ್ಷಣೆ
ಚೆನ್ನೈ: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟಿ ನಯನತಾರಾ ನಾಯಕತ್ವದ ನಿರೀಕ್ಷೆಯ ಬಹುಚಿತ್ರ ‘ಮನ ಶಂಕರ ವರ ಪ್ರಸಾದ್ ಗರು’ ಚಿತ್ರದ ಮೊದಲ ಸಿಂಗಲ್ ‘ಮೀಸಲ ಪಿಲ್ಲ್’ ಮಂಗಳವಾರ ಬಿಡುಗಡೆಗೊಂಡಿದ್ದು, ಅಭಿಮಾನಿಗಳಲ್ಲಿ ಸಂತೋಷ ಮತ್ತು ಹರ್ಷ ತಂದಿದೆ. ಭೀಮ್ಸ್ ಸೆಸಿರೊಲಿಯೊ ಸಂಗೀತ ನಿರ್ದೇಶನ ಮಾಡಿರುವ ಈ ಟ್ರ್ಯಾಕ್, ಎಲೆಕ್ಟ್ರಾನಿಕ್ ಬೀಟ್, ಬಾಸ್ ಲೈನ್ಗಳು, ಆಕರ್ಷಕ ಸಿಂಥ್ ಮೆಲೋಡಿಗಳು ಹಾಗೂ ಸಾಂಪ್ರದಾಯಿಕ ತಾಳವಾಡ್ಯಗಳೊಂದಿಗೆ ಶ್ರೋತೃಹೃದಯ ಗೆದ್ದಿದೆ. ಭಾಸ್ಕರ ಭಟ್ಲ ರಚಿಸಿರುವ ಸಾಹಿತ್ಯದಲ್ಲಿ ಚಿರಂಜೀವಿ–ನಯನತಾರಾ ನಡುವಿನ ತಮಾಷೆಯ ಹಾಸ್ಯ ಮತ್ತು ಕೀರ್ತಿಪೂರ್ಣ ಸಂವಾದ ಚೆನ್ನಾಗಿ ವ್ಯಕ್ತವಾಗಿದೆ. ಹಾಡಿನ ವಿಶೇಷ ಆಕರ್ಷಣೆ ಎಂದರೆ ಉಚಿತ್ ನಾರಾಯಣ್ ಅವರ ಗಾಢ ಧ್ವನಿ, ದೀರ್ಘ ವಿರಾಮದ ನಂತರ ಚಿತ್ರಕ್ಕೆ ತಮ್ಮ ಮೆಚ್ಚಿನ ಹಾಡನ್ನು ನೀಡಿದ್ದಾರೆ. ಶ್ವೇತಾ ಮೋಹನ್ ಅವರ ಸ್ತ್ರೀಯ ಧ್ವನಿ ನಯನತಾರಾ ಪಾತ್ರದ ಶೈಲಿ ಮತ್ತು ಲವಲವಿಕೆಗೆ ಸೂಕ್ತ ಪೂರಕವಾಗಿದೆ. ಚಿರಂಜೀವಿ ನಯವಾದ ಸೂಟ್ನಲ್ಲಿ…