ಅಲುಗಾಡುತ್ತಿರುವ ‘ಬಿಎಸ್‌ವೈ’ ಕುರ್ಚಿ; ಶೀಘ್ರ ಚುನಾವಣೆ ನಡೆದರೆ ‘ಕೈ’ ಮೇಲುಗೈ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದ್ದು, ಅವರು ಸಿಎಂ ಆಗಿ ಹೆಚ್ಚು ಸಮಯ ಉಳಿಯುವುದಿಲ್ಲ ಎಂದು ವಿಧಾಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ. ತಕ್ಷಣ ವಿಧಾನಸಭಾ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಹಾಗೂ ಆಡಳಿತಾರೋದ ಪಕ್ಷದ ನಾಯಕರ ಹೇಳಿಕೆಗಳಲ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಣೆ ಮಾಡಿದರು. ತಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಯಡಿಯೂರಪ್ಪ ಅವರು ಹಗಲುಕನಸು ಕಾಣುತ್ತಿದ್ದಾರೆ. ಆದರೆ ಅವರ ಕುರ್ಚಿ ಅಲುಗಾಡುತ್ತಿದೆ ಟೀಕಿಸಿದರು.

ಬಿಜೆಪಿ ನಾಯಕರ ನಡೆ ಬಗ್ಗೆ ಟೀಕೆ ಮಾಡಿದ ಸಿದ್ದರಾಮಯ್ಯ, ವಿಧಾನಸಭೆಯನ್ನು ವಿಸರ್ಜಿಸಿ, ಚುನಾವಣೆಯನ್ನು ಎದುರಿಸಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರಲ್ಲದೆ, ಒಂದು ವೇಳೆ ನಾಳೆಯೇ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು ಸಾಧಿಸಿ, ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಯುಡಿಯೂರಪ್ಪ ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದ್ದು, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಆಡಳಿತ ವ್ಯವಸ್ಥೆ ಕುಸಿದಿದೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

Related posts