ಟೆಕ್‌ ಸಮಿಟ್; ದೂರದ ದೇಶಗಳು ಈಗ ಹತ್ತಿರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಟೆಕ್‌ ಸಮಿಟ್‌ನಲ್ಲಿ ವರ್ಚುಯಲ್‌ ಮೂಲಕ ಆವಿಷ್ಕಾರ ಮೈತ್ರಿಕೂಟದ ದೇಶಗಳಾದ ಇಪ್ಪತ್ತೈದು ಗಣರಾಜ್ಯಗಳು ಇದೀಗ ಭಾರತದ ಹತ್ತಿರಕ್ಕೆ ಬಂದಿವೆ. ಮುಖ್ಯವಾಗಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು, ತಂತ್ರಜ್ಞಾನ ವಿನಿಮಯ ಮಾಡಿಕೊಳ್ಳಲು ಈ ದೇಶಗಳು ಉತ್ಸುಕವಾಗಿವೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಆಸ್ಟ್ರೀಯಾ, ಬೆಲ್ಪಿಯಂ, ಡೆನ್ಮಾರ್ಕ್‌, ಫಿನ್‌ಲೆಂಡ್‌, ಫ್ರಾನ್ಸ್‌, ಜರ್ಮನಿ, ಜಪಾನ್‌, ಇಸ್ರೇಲ್‌, ಲಿಥುವೇನಿಯಾ, ನೆಡರ್‌ಲ್ಯಾಂಡ್ಸ್‌, ಸಿಂಗಾಪುರ, ಸ್ವೀಡನ್‌, ದಕ್ಷಿಣ ಕೊರಿಯಾ, ಸ್ವಿಡ್ಜರ್‌ಲೆಂಡ್‌, ಬ್ರಿಟನ್‌, ತೈವಾನ್‌ ಮತ್ತು ಅಮೆರಿಕ ದೇಶಗಳ ವಿವಿಧ ನಾಯಕರು, ಕೈಗಾರಿಕೋದ್ಯಮಿಗಳು ಬೆಂಗಳೂರು ಟೆಕ್‌ ಸಮಿಟ್‌ನಲ್ಲಿ ಭಾಗಿಯಾಗಿದ್ದಾರೆ.

ಟೆಕ್‌ ಸಮಿಟ್‌ನಲ್ಲಿ ರಾಜ್ಯವು ವಿವಿಧ ದೇಶಗಳ ಅನೇಕ ಒಪ್ಪಂದಗಳಿಗೆ ಸಹಿ ಹಾಕಲಿದೆ. ಈಗಾಗಲೇ ಏಳಕ್ಕೂ ಹೆಚ್ಚು ಪ್ರಮುಖ ಒಪ್ಪಂದಗಳು ಅಂತಿಮಗೊಂಡಿವೆ. ಅವುಗಳಿಗೆ ಅಂಕಿತ ಬೀಳುವುದೊಂದೇ ಬಾಕಿ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಮುಖ್ಯವಾಗಿ; ಅಂತರೀಕ್ಷ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ರಕ್ಷಣೆ, ಕೃಷಿ, ವೈದ್ಯಕೀಯ ಆವಿಷ್ಕಾರ, ಮಾಹಿತಿ ತಂತ್ರಜ್ಞಾನ, ಇ-ಕಾಮರ್ಸ್‌, ಸಂಪರ್ಕ, ನವೋದ್ಯಮ, ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌, ಡ್ರೋನ್‌ ಮತ್ತು ರೋಬೋಟಿಕ್ಸ್‌, ವಿಪುಲ ಉದ್ಯೋಗಾವಕಾಶ, ಸೈಬರ್‌ ಭದ್ರತೆ, ಡಿಜಿಟಲ್‌ ಹೆಲ್ತ್‌ಕೇರ್‌ ಸೇರಿದಂತೆ ಅನೇಕ ಕ್ಷೇತ್ರಗಳ ಬಗ್ಗೆ ಒಟ್ಟಿಗೆ ಕೆಲಸ ಮಾಡಲು ಆವಿಷ್ಕಾರ ಮೈತ್ರಿಕೂಟದ ದೇಶಗಳು ತುದಿಗಾಲ ಮೇಲೆ ನಿಂತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಅಭಿವೃದ್ಧಿಯಲ್ಲಿ ಹೊಸ ಮೈಲುಗಲ್ಲು ದಾಟಲಿದ್ದು, ರಾಜ್ಯವು ತಂತ್ರಜ್ಞಾನಕ್ಕೆ ಮುಕ್ತವಾಗಿ ತೆರೆದುಕೊಂಡಿದ್ದೇ ಇಷ್ಟೆಲ್ಲದ್ದಕ್ಕೂ ಕಾರಣವಾಯಿತು ಎಂದು ಅಶ್ವತ್ಥನಾರಾಯಣ ಸಂತಸ ಹಂಚಿಕೊಂಡಿದ್ದಾರೆ.

Related posts