ಬಲವಂತದ ಬಂದ್’ಗೆ ಪೊಲೀಸ್ ಬ್ರೇಕ್; ಹುಬ್ಬಳ್ಳಿಯಲ್ಲಿ ಖಾಕಿ-ರೈತರ ನಡುವೆ ಜಟಾಪಟಿ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್’ಗೆ ಹುಬ್ಬಳ್ಳಿ ಧಾರವಾಡ ನಗರಗಳಲ್ಲಿ ಬೆಂಬಲ ವ್ಯಕ್ತವಾಗಿದೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ರೈತ ಸಂಘಟನೆಗಳು ಬಂದ್ ಬೆಂಬಲಿಸಿ ರಸ್ತೆಗಿಳಿದಿವೆ.  ಬಂದ್ ಕರೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹೀಗಿದ್ದರೂ ರೈತರು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯ ಹೊಸೂರು ಬಸ್ ಡಿಪೋ ಬಳಿ ಬಸ್ ತಡೆದ ರೈತ ಹೊರಾಟಗಾರರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರೈತ ಹೊರಾಟಗಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು.

Related posts