ರಾಜ್ಯದಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕೆಲ ಸಮಯದ ಹಿಂದೆ ಪಾಸಿಟಿವ್ ಸಂಖ್ಯೆಗಳು ಕಡಿನೆಯಾಗುತ್ತಾ ಆಶಾವಾದ ಮೂಡಿತ್ತು. ಆದರೆ ಪ್ರಸಕ್ತ ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಡುತ್ತಿದೆ. ಸೋಮವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್ಉಗಳು 2,792 ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆಯ ಹೊತ್ತಿಗೆ 1,742 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,29,915ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ನಡುವೆ, ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತಬುಲೆಟಿನ್ ಮೂಲಕ ಮಾಹಿತಿ ನೀಡಿದೆ‌.

ಅಲ್ಲಿ ಕಣ್ ಸನ್ನೆ.. ಕನ್ನಡಲ್ಲಿ ಕೈ ಸನ್ನೆ.. ಪ್ರಿಯಾ ವಾರಿಯರ್ ಕುತೂಹಲ

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡದಲ್ಲಿ ನಟಿಸುತ್ತಿರುವ ‘ವಿಷ್ಣುಪ್ರಿಯ’ ಚಿತ್ರ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೇಯಸ್ ಮಂಜು ಕೂಡಾ ನಟಿಸಿದ್ದಾರೆ.

‘ಕಟ್ಟಿಂಗ್ ಶಾಪ್’ನಲ್ಲಿ ಪ್ರವೀಣ್, ಅರ್ಚನಾ ಆಕರ್ಷಣೆ

ಕನ್ನಡ ಸಿನಿಮಾ ಕ್ಷೇತ್ರದಲ್ಲೀಗ ಬಗೆಬಗೆಯ ಟೈಟಲ್ ನಲ್ಲಿ ಚಿತ್ರಗಳು ಹೊರಬರುತ್ತಿವೆ. ಇದೀಗ ಕೆಬಿ ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಅಭಿನಯದ ‘ಕಟ್ಟಿಂಗ್ ಶಾಪ್’ ಚಿತ್ರ ಕೂಡಾ ವಿಭಿನ್ನ ಟೈಟಲ್’ನಿಂದ ಗಮನಸೆಳೆದಿದೆ. ಪವನ್ ಭಟ್ ನಿರ್ದೇಶಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಜಾಲತಾಣಗಳಲ್ಲಿ ಈ ಟೀಸರ್ ಸಕತ್ ಸದ್ದು ಮಾಡುತ್ತಿದೆ.    

ಲಯನ್ಸ್ ಕ್ಲಬ್ ಸಂಚಾರಿ ರಕ್ತ ಸಂಗ್ರಹಣೆ ಬಸ್ಸು; ಮುಖ್ಯಮಂತ್ರಿ ಚಾಲನೆ

ಬೆಂಗಳೂರು; ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು. ಲಯನ್ಸ್ ಕ್ಲಬ್ ವತಿಯಿಂದ ಮೂರು ಸಂಚಾರಿ ರಕ್ತ ಸಂಗ್ರಹಣೆ ಹಾಗೂ ಸಾಗಾಣಿಕೆ ಬಸ್ಸುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, ರಕ್ತದಾನ ಮಹಾದಾನವೆಂದು ಪರಿಗಣಿಸಲ್ಪಟ್ಟಿದೆ. ಕೋವಿಡ್ ಬಂದ ಬಳಿಕ ಕಳೆದೊಂದು ವರ್ಷದಿಂದ ರಕ್ತಸಂಗ್ರಹ ಪ್ರಮಾಣ ಬಹಳ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಸಂಘ, ಸಂಸ್ಥೆಗಳು ಮುಂದೆ ಬಂದು ಸರ್ಕಾರದೊಂದಿಗೆ ಕೈ ಜೋಡಿಸಿ ರಕ್ತಸಂಗ್ರಹದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ನಮ್ಮ ದೇಶದಲ್ಲಿ ಪ್ರತಿ ವರ್ಷ 4 ಕೋಟಿ ಯುನಿಟ್ ನಷ್ಟು ರಕ್ತದ ಬೇಡಿಕೆ ಇದೆ. ಶೇ.1 ರಷ್ಟು ಜನರು ರಕ್ತ ನೀಡಿದರೂ ಈ ಅವಶ್ಯಕತೆಯನ್ನು ನೀಗಿಸಬಹುದು. ಇದಕ್ಕಾಗಿ ಜನರಲ್ಲಿ ಹೆಚ್ಚು…

ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಗ್ಗ ದರದಲ್ಲಿ ಮರಳು; ಸರ್ಕಾರದ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು ₹10 ಲಕ್ಷದೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಯಲ್ಲಿ ಘೋಷಿಸಿದರು. ಪ್ರಶ್ನೋತ್ತರ ಅವಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶ್ರಯ ಮನೆ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ₹10 ಲಕ್ಷದೊಳಗಿನ ಮನೆಗೆ 100ರಿಂದ 200 ರೂ. ಟನ್ ದರದಲ್ಲಿ ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು. ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರದಿಂದಲೇ ಉಚಿತವಾಗಿ ಮರಳು ಪೂರೈಕೆ ಮಾಡುವ ಯೋಜನೆ ಇದೆ. ಗ್ರಾಮಪಂಚಾಯ್ತಿಯಿಂದ ಹಿಡಿದು ನಗರಸಭೆ ವ್ಯಾಪ್ತಿಯಲ್ಲಿ ಮನೆ…

ಮೈಸೂರಿನಲ್ಲಿ ಜಿಟಿಡಿ-ಹೆಚ್ಡಿಡಿ ಫ್ಯಾಮಿಲಿ ಫೈಟ್; ಮೈಮೂಲ್‌ನಲ್ಲಿ ಹೆಚ್ಡಿಕೆ ಬಣ ಸೈಡ್

ಮೈಸೂರು: ಜೆಡಿಎಸ್ ನಾಯಕರ ಗುಂಪುಗಳ ನಡುವಿನ ಮುಸುಕಿನ‌ ಗುದ್ದಾಟ ಇದೀಗ ಎಲೆಕ್ಷನ್ ಫೈಟ್ ವರೆಗೂ ಸಾಗಿದೆ. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಕಣವೆನಿಸಿದ್ದ ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ ದೇವೇಗೌಡ ಕುಟುಂಬಕ್ಕೆ ತೀವ್ರ ನಿರಾಸೆಯಾಗಿದೆ. ಮೈಮುಲ್‌ನ 15 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 12 ಸ್ಥಾನಗಳು ಜಿಟಿಡಿ ಬಣದ ಪಾಲಾದರೆ, 3 ಸ್ಥಾನಗಳಿಗೆ ಮಾತ್ರ ಹೆಚ್‌ಡಿಕೆ ಬಣ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಒಬ್ಬ ಸದಸ್ಯ ಮಾತ್ರ ಗೆದ್ದಿದ್ದಾರೆ.   ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರು. ಹೆಚ್.ಡಿ.ಕೆ ಬಣದಲ್ಲಿದ್ದ ಹೆಚ್.ಡಿ.ರೇವಣ್ಣ ಭಾಮೈದ ಎಸ್.ಕೆ.ಮಧುಚಂದ್ರ ಸಹ ಸೋಲನಪ್ಪಿದ್ದಾರೆ. ಮೈಸೂರು ವಿಭಾಗದ 7 ಹಾಗೂ ಹುಣಸೂರು ವಿಭಾಗದ 8 ಸೇರಿ ಒಟ್ಟು 15 ನಿರ್ದೇಶಕ ಸ್ಥಾನಗಳಿಗೆ ಮತದಾನ…

ಕೊರೋನಾ 2ನೇ ಅಲೆ; ಕರ್ನಾಟಕದಲ್ಲಿ ಮತ್ತೆ ಸೋಂಕಿನ ತಲ್ಲಣ

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವೈರಾಣು ಎರಡನೇ ಅಲೆಯ ಆತಂಕ ಹೆಚ್ಚುತ್ತಲೇ ಇವೆ. ಕರ್ನಾಟಕದಲ್ಲೂ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದು, ಕೊರೋನಾ ಕಾರಣದಿಂದ ಮೃತಪಾಟ್ಟವರ ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೋಕಿನ ಪ್ರಮಾಣ ಹೆಚ್ಚುತ್ತಲಿದ್ದು ಮಂಗಳವಾರ ಸುಮಾರು 710 ಮಂದಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ಅಷ್ಟೇ ಅಲ್ಲ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಇಂದಿನ 16/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/CLJWHE1JXT @PMOIndia @narendramodi @CMofKarnataka @BSYBJP @MoHFW_INDIA @drharshvardhan @mla_sudhakar @Comm_dhfwka @MDNHM_Kar @CovidIndiaSeva @KarnatakaVarthe @PIBBengaluru pic.twitter.com/zr4W6yA4wU — K'taka Health…

ಕೊರೋನಾ ತಲ್ಲಣ; ಮುನ್ನೆಚ್ಚರಿಕೆ ವಹಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾದೀತು

  ಬೆಂಗಳೂರು: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ ಅಂತ ಎಚ್ಚರಿಕೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು. ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ…

ರಾಜ್ಯದಲ್ಲಿ ಭರ್ಜರಿ ಸರ್ಜರಿಗೆ ನಡೆದಿದೆಯೇ ತಯಾರಿ.‌.? ಬಿಜೆಪಿ ಹೈಮಾಂಡ್ ನಡೆ ಬಗ್ಗೆ ಹೆಚ್ಚಿದ ಕುತೂಹಲ

ದೆಹಲಿ: ಉತ್ತರ ಭಾರತದ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಮೂಲಕ ಕಮಲ ಪಾಳಯದಲ್ಲಿ ಸಂಚಲನ ಮೂಡಿಸಿರುವ ಹೈಕಮಾಂಡ್ ಇದೀಗ ಕರ್ನಾಟಕದಲ್ಲೂ ನಾಯಕರಿಗಾಗಿ ಹುಡುಕಾಟ ಆರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪರಿಪೂರ್ಣ ಬಹುಮತ ಗಳಿಸುವಷ್ಟು ಮಟ್ಟಕ್ಕೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಂತಹಾ ನಾಯಕರು ಯಾರಿದ್ದಾರೆ ಎಂಬ ಬಗ್ಗೆ ರಾಷ್ಟ್ರೀಯ ವರಿಷ್ಠರು ಅಳೆದು ತೂಗುತ್ತಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಲಿಂಗಾಯತ ಸಮುದಾಯ, ಒಕ್ಕಲಿಗರು, ಕುರುಬರು ಹಾಗೂ ಪರಿಶಿಷ್ಠ ಸಮುದಾಯಗಳ ಪ್ರಭಾವ ಬೇಕಿರುವುದರಿಂದ ಎಲ್ಲಾ ವರ್ಗಗಳನ್ನು ಸಮಾಧಾನಪಡಿಸುವ ಅನಿವಾರ್ಯತೆ ಬಿಜೆಪಿಗಿದೆ. ಹಾಗಾಗಿ ಹಲವರ ಹೆಸರುಗಳು ಹೈಕಮಾಂಡ್‌ನ ಪಟ್ಟಿಯಲ್ಲಿದೆ. ಲಕ್ಷ್ಮಣ್ ಸವದಿ, ಜಗದೀಶ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಹೈಕಮಾಂಡ್‌ಗೆ ಸಾಕಷ್ಟು ಒಲವು ಇದೆಯಾದರೂ, ಅಧಿಕಾರದ ವಿಚಾರ ಗಮನಿಸಿದಾಗ ಈ ವರೆಗೂ ಮುಖ್ಯಮಂತ್ತಿ, ಉಪಮುಖ್ಯಮಂತ್ರಿಯಂತಹಾ ಉನ್ನತ ಹುದ್ದೆಗಳನ್ನು ಲಿಂಗಾಯತ ನಾಯಕರೇ ಆಲಂಕರಿಸಿದ್ದಾರೆ. ಹಾಗಾಗಿ ಈ ಬಾರಿ ಬಿಎಸ್‌ವೈ ಉತ್ತರಾಧಿಕಾರಿಯಾಗಿ ಒಕ್ಕಲಿಗ ಅಥವಾ…