ರಾಜ್ಯದಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕೆಲ ಸಮಯದ ಹಿಂದೆ ಪಾಸಿಟಿವ್ ಸಂಖ್ಯೆಗಳು ಕಡಿನೆಯಾಗುತ್ತಾ ಆಶಾವಾದ ಮೂಡಿತ್ತು. ಆದರೆ ಪ್ರಸಕ್ತ ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಡುತ್ತಿದೆ. ಸೋಮವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್ಉಗಳು 2,792 ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆಯ ಹೊತ್ತಿಗೆ 1,742 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,29,915ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ನಡುವೆ, ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತಬುಲೆಟಿನ್ ಮೂಲಕ ಮಾಹಿತಿ ನೀಡಿದೆ‌.

ಅಲ್ಲಿ ಕಣ್ ಸನ್ನೆ.. ಕನ್ನಡಲ್ಲಿ ಕೈ ಸನ್ನೆ.. ಪ್ರಿಯಾ ವಾರಿಯರ್ ಕುತೂಹಲ

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡದಲ್ಲಿ ನಟಿಸುತ್ತಿರುವ ‘ವಿಷ್ಣುಪ್ರಿಯ’ ಚಿತ್ರ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೇಯಸ್ ಮಂಜು ಕೂಡಾ ನಟಿಸಿದ್ದಾರೆ.

‘ಕಟ್ಟಿಂಗ್ ಶಾಪ್’ನಲ್ಲಿ ಪ್ರವೀಣ್, ಅರ್ಚನಾ ಆಕರ್ಷಣೆ

ಕನ್ನಡ ಸಿನಿಮಾ ಕ್ಷೇತ್ರದಲ್ಲೀಗ ಬಗೆಬಗೆಯ ಟೈಟಲ್ ನಲ್ಲಿ ಚಿತ್ರಗಳು ಹೊರಬರುತ್ತಿವೆ. ಇದೀಗ ಕೆಬಿ ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಅಭಿನಯದ ‘ಕಟ್ಟಿಂಗ್ ಶಾಪ್’ ಚಿತ್ರ ಕೂಡಾ ವಿಭಿನ್ನ ಟೈಟಲ್’ನಿಂದ ಗಮನಸೆಳೆದಿದೆ. ಪವನ್ ಭಟ್ ನಿರ್ದೇಶಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಜಾಲತಾಣಗಳಲ್ಲಿ ಈ ಟೀಸರ್ ಸಕತ್ ಸದ್ದು ಮಾಡುತ್ತಿದೆ.    

ಮರ್ಡರ್ ಮಿಸ್ಟರಿಯ ‘ಅಮೃತ ಅಪಾರ್ಟ್‌ಮೆಂಟ್ ಟೀಸರ್‌ನಲ್ಲೇ ಇದೆ ಥ್ರಿಲ್

  ತರ್ಕ, ಉತ್ಕರ್ಷದಂತಹಾ ಹಲವು ಥ್ರಿಲ್ಲರ್ ಮೂವೀಗಳು ಸಿನಿಮಾ ಇಂಡಸ್ಟ್ರಿಯಲ್ಲಿ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರಲೋಕದ ದಿಗ್ಗಜರದ್ದು. ಇದೀಗ ಅದೇ ಕಾನ್ಸೆಪ್ಟ್‌ನಲ್ಲಿ ‘ಅಮೃತ ಅಪಾರ್ಟ್‌ಮೆಂಟ್’ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತಿದೆ. ಗುರುರಾಜ್ ಕುಲಕರ್ಣಿ ಅವರು ಮರ್ಡರ್ ಮಿಸ್ಟರಿ ಕಥೆಯಾಧಾರಿತ ‘ಅಮೃತ ಅಪಾರ್ಟ್ಮೆಂಟ್ಸ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರೇ ಒಂಥರಾ ಧ್ರಿಲ್ ಕೊಡುತ್ತೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೈಸೂರಿನಲ್ಲಿ ಜಿಟಿಡಿ-ಹೆಚ್ಡಿಡಿ ಫ್ಯಾಮಿಲಿ ಫೈಟ್; ಮೈಮೂಲ್‌ನಲ್ಲಿ ಹೆಚ್ಡಿಕೆ ಬಣ ಸೈಡ್

ಮೈಸೂರು: ಜೆಡಿಎಸ್ ನಾಯಕರ ಗುಂಪುಗಳ ನಡುವಿನ ಮುಸುಕಿನ‌ ಗುದ್ದಾಟ ಇದೀಗ ಎಲೆಕ್ಷನ್ ಫೈಟ್ ವರೆಗೂ ಸಾಗಿದೆ. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಕಣವೆನಿಸಿದ್ದ ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ ದೇವೇಗೌಡ ಕುಟುಂಬಕ್ಕೆ ತೀವ್ರ ನಿರಾಸೆಯಾಗಿದೆ. ಮೈಮುಲ್‌ನ 15 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 12 ಸ್ಥಾನಗಳು ಜಿಟಿಡಿ ಬಣದ ಪಾಲಾದರೆ, 3 ಸ್ಥಾನಗಳಿಗೆ ಮಾತ್ರ ಹೆಚ್‌ಡಿಕೆ ಬಣ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಒಬ್ಬ ಸದಸ್ಯ ಮಾತ್ರ ಗೆದ್ದಿದ್ದಾರೆ.   ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರು. ಹೆಚ್.ಡಿ.ಕೆ ಬಣದಲ್ಲಿದ್ದ ಹೆಚ್.ಡಿ.ರೇವಣ್ಣ ಭಾಮೈದ ಎಸ್.ಕೆ.ಮಧುಚಂದ್ರ ಸಹ ಸೋಲನಪ್ಪಿದ್ದಾರೆ. ಮೈಸೂರು ವಿಭಾಗದ 7 ಹಾಗೂ ಹುಣಸೂರು ವಿಭಾಗದ 8 ಸೇರಿ ಒಟ್ಟು 15 ನಿರ್ದೇಶಕ ಸ್ಥಾನಗಳಿಗೆ ಮತದಾನ…

ಕೊರೋನಾ ತಲ್ಲಣ; ಮುನ್ನೆಚ್ಚರಿಕೆ ವಹಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾದೀತು

  ಬೆಂಗಳೂರು: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ ಅಂತ ಎಚ್ಚರಿಕೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು. ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ…

ಶಿವಣ್ಣ ಪತ್ನಿ ಗೀತಾ ಶೀಘ್ರವೇ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ದಿವಂಗತ ಮಾಜಿ ಸಿಎಂ ಬಂಗಾರಪ್ಪ ಪುತ್ರ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಇದೀಗ ನಟ, ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ಪತ್ನಿ ಗೀತಾ ಕೂಡಾ ಕೈ ಹಿಡಿಯಲು ಮುಂದಾಗಿದ್ದಾರೆ. ಈ ಸಂಬಂಧ ನಟ ಶಿವರಾಜ್ ಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಇಂದಿನ ಭೇಟಿಗೆ ಭಾರೀ ಮಹತ್ವ ಬಂದಿದೆ. ಈ ಕುರಿತಂತೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ ಎಂದು ಹೇಳಿ ಕುತೂಹಲವನ್ನು ಕೆರಳುವಂತೆ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ…

ಬೆಂಗಳೂರು: ಸಮಾಜದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ಸರಿಯಾದ ಸದುಪಯೋಗ ಮತ್ತು ರಕ್ಷಣೆ ಈ ಸಂಸ್ಥೆ ಮುಂದಾಗಿರುವುದು ಸಂತೋಷದ ವಿಷಯ ಎಂದು ಮಾಜಿ ಶಾಸಕ ಎಸ್ ಮುನಿರಾಜು ಹೇಳಿದ್ದಾರೆ. ಪೀಣ್ಯ ದಾಸರಹಳ್ಳಿ ಸಮೀಪ, ಕೆರೆ ಗುಡ್ಡದಹಳ್ಳಿಯಲ್ಲಿ ಜನ್ಮಭೂಮಿ ನಾಗರಾಜು ನೇತೃತ್ವದಲ್ಲಿ ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸೇವಾ ಸಮಿತಿಯ ಉದ್ಘಾಟನೆ ನೆರವೇರಿತು. ಸಮಿತಿ ಉದ್ಘಾಟಿಸಿ ಮಾತನಾಡಿದ ಎಸ್ ಮುನಿರಾಜು, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ನಿಶಕ್ತರಾದ ಜನರಿಗೆ ಈ ಸಂಸ್ಥೆ ದಾರಿದೀಪವಾಗಲಿ , ಮುಂದೆಯೂ ಕೂಡ ಈ ಸಂಸ್ಥೆ ನಿಂತ ನೀರಾಗದೆ ನಿರಂತರ ಚಟುವಟಿಕೆಯಿಂದ ಜನರ ರಕ್ಷಣೆಯ ಗುರಿ ಹೊಂದಲಿ ಎಂದರು. ಉಪ ಪೊಲೀಸ್ ಆಯುಕ್ತ ಶಿವರಾಜು ಮಾತನಾಡಿ ಮಾನವನ ಹಕ್ಕು ಹಗರಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಅದನ್ನು ಕೇಳಲು ಶಕ್ತಿ ಇರುವುದಿಲ್ಲ ಅಂತಹ ಜನರ ಬಾಳಿಗೆ ನಿಂತ ಈ ಸಂಸ್ಥೆ ನಮ್ಮೆಲ್ಲರ ಸಹಾಯ ಸಲಹೆ…

ಕರಾವಳಿಗಾಗಿ ಪ್ರತ್ಯೇಕ ಮರಳು ನೀತಿ; ರಾಜ್ಯ ಸರ್ಕಾರದ ಚಿಂತನೆ

ಬೆಂಗಳೂರು: ಕರಾವಳಿ ಭಾಗಗಳಲ್ಲಿ ಮರಳು ಗಣಿಗಾರಿಕೆ ಚಟುವಟಿಕೆ ನಡೆಸಲು ಅನುಕೂಲವಾಗಲು ಪ್ರತ್ಯೇಕ ಕರಾವಳಿ ಮರಳು ನೀತಿಯನ್ನು ಸರ್ಕಾರ ಪ್ರಕಟಿಸಲಿದೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಯು.ಟಿ.ಖಾದರ್ ಅವರ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ ಈ ಮರಳು ನೀತಿಯನ್ನು ಪ್ರಕಟಿಸಲಿದ್ದೇವೆ. ಇದರಿಂದಾಗಿ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು. ನಾನು ಜಿಲ್ಲೆಗಳಿಗೆ ಭೇಟಿ ಕೊಟ್ಟಾಗ ನನಗೂ ಕೂಡ ಇದೇ ಸಮಸ್ಯೆ ಎದುರಾಗಿತ್ತು. ರಾಜ್ಯದ ಅನೇಕ ಕಡೆ ಮರಳಿನ ಅಲಭ್ಯತೆಯಿಂದಾಗಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲೂ ಇಂತಹ ಸಮಸ್ಯೆ ಉಂಟಾಗದಂತೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಜಿಲ್ಲಾ ಮತ್ತು ರಾಜ್ಯಮಟ್ಟದ…

ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ: ಕೊರೊನಾ ಲಸಿಕೆ ಬಗ್ಗೆ ಹಿಂಜರಿಕೆ ಬಿಡಿ

ಬೆಂಗಳೂರು: ಜನವರಿ 31 ರಂದು ಪೋಲಿಯೊ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ಜನವರಿ 17 ರಂದು ಪೋಲಿಯೋ ಲಸಿಕೆ ನೀಡಬೇಕಿತ್ತು. ಕೊರೊನಾ ಲಸಿಕೆ ಬಂದಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೇ ತಿಂಗಳು 31 ರಂದು 0-5 ವರ್ಷದ 64,07,930 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಲಸಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಚಾಲನೆ ಸಿಗಲಿದೆ. ಪೋಷಕರು ಹಿಂದೆ ಲಸಿಕೆ ಹಾಕಿಸಿದ್ದರೂ ಮತ್ತೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕಳೆದ 10-11 ವರ್ಷಗಳಿಂದ ಪೊಲೀಯೋ ಸೋಂಕು ಕಂಡುಬಂದಿಲ್ಲ. ಭಾರತದಲ್ಲಿ ಈ ರೋಗ ನಿಮೂರ್ಲನೆಯಾಗಿದೆ. ಆದರೆ ಪಕ್ಕದ ಪಾಕಿಸ್ತಾನ, ಅಫ್ಘನಿಸ್ತಾನದಲ್ಲಿ ಈ ರೋಗ ಇರುವುದರಿಂದ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕಿದೆ ಎಂದರು. ನಮ್ಮಲ್ಲಿ ಒಟ್ಟು…