ಬೆಂಗಳೂರು: “ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ” ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ವ್ಯಂಗ್ಯವಾಡಿದರು.
Category: ರಾಜ್ಯ
ಮೈಸೂರು ದಸರಾ ಉದ್ಘಾಟನೆಯ ಕುರಿತ ಅಶೋಕ್ ಹೇಳಿಕೆಗೆ ಮಹದೇವಪ್ಪ ತೀಕ್ಷ್ಣ ತಿರುಗೇಟು
ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟನೆ ಮಾಡುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಆರ್. ಅಶೋಕ್ ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿರುತ್ತದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ,” ಎಂದು ಮಹದೇವಪ್ಪ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತ ಹೇಳಿದರು. “ಮೂರು ತಿಂಗಳಲ್ಲಿ ಕ್ರಾಂತಿ ನಡೆಯುತ್ತದೆ ಎಂಬ ಹೇಳಿಕೆಯನ್ನು ಅವರು ಯಾವ ಅರ್ಥದಲ್ಲಿ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಅದನ್ನು ಅವರಿಗೇ ಕೇಳಬೇಕು. ಕೆಲವರು ರಾಜಕೀಯವಾಗಿ ಅನುಕೂಲಕರವಾಗಿರುವಂತೆ ಹೇಳಿಕೆ ನೀಡುತ್ತಾರೆ. ಆದರೆ ರಾಜಕೀಯದಲ್ಲಿ ಯಾವಾಗಲೂ ಕ್ರಾಂತಿಗಳು ನಡೆಯುತ್ತಿರುತ್ತವೆ. ಅದನ್ನೇ ಸಂಕ್ರಾಂತಿಯಾಗಿ ಜೋರಾಗಿ ಮಾಡೋಣ ಬಿಡಿ,” ಎಂದು ಅವರು ವ್ಯಂಗ್ಯವಾಡಿದರು. ಆರ್. ಅಶೋಕ್ ಅವರ “ಸಿದ್ದರಾಮಯ್ಯ ಈ ಬಾರಿ ದಸರಾ ಉದ್ಘಾಟನೆ ಮಾಡುವುದಿಲ್ಲ” ಎಂಬ ಹೇಳಿಕೆಗೆ ತಿರುಗೇಟು ನೀಡಿದ…
ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ
ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 123 ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳೆಯರು ನೇತೃತ್ವದ ಉಪಕ್ರಮಗಳು ‘ಮಹಿಳಾ ನೇತೃತ್ವದ ಅಭಿವೃದ್ಧಿ’ ಆಂದೋಲನಕ್ಕೆ ಹೇಗೆ ಹೊಸ ಶಕ್ತಿಯನ್ನು ನೀಡುತ್ತಿವೆ ಎಂದರು. “ನಮ್ಮ ಭಾರತವು ಪ್ರಾದೇಶಿಕ, ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಹೆಸರುವಾಸಿಯಾಗಿರುವಂತೆಯೇ, ಕಲೆ, ಕರಕುಶಲ ವಸ್ತುಗಳು ಮತ್ತು ಕೌಶಲ್ಯಗಳ ವೈವಿಧ್ಯತೆಯು ನಮ್ಮ ದೇಶದ ಉತ್ತಮ ಗುಣವಾಗಿದೆ” ಎಂದು ಮೋದಿ ಹೇಳಿದರು. ‘ನೀವು ಯಾವುದೇ ಪ್ರದೇಶಕ್ಕೆ ಭೇಟಿ ನೀಡಿದರೂ, ನೀವು ಕೆಲವು ಸ್ಥಳೀಯ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳುತ್ತೀರಿ. ನಾವು ಮನ್ ಕಿ ಬಾತ್ನಲ್ಲಿ ದೇಶದ ಅಂತಹ ವಿಶಿಷ್ಟ ಉತ್ಪನ್ನಗಳ ಬಗ್ಗೆ ಆಗಾಗ್ಗೆ…
‘ಮಂಡಲ’ ವಿರುದ್ಧದ ‘ಕಮಂಡಲ’ ಚಳವಳಿಯ ಫಲವನ್ನು ಅಲ್ಲಗಳೆಯಲು ಸಾಧ್ಯವೇ?: ಹರಿಪ್ರಸಾದ್ ಪ್ರಶ್ನೆ
ಬೆಂಗಳೂರು: ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹ ಹಾಗೂ ಹಿಂದುಳಿದವರಿಗೆ ಮಾಡಿರುವ ಅನ್ಯಾಯ ಇತಿಹಾಸದ ಮೀಸಲಾತಿ ಚರ್ಚೆಯ ಪ್ರತಿ ಪುಟಗಳಲ್ಲೂ, ಪ್ರತಿ ಪದಗಳಲ್ಲೂ ಅಚ್ಚಳಿಯದೇ ಉಳಿದಿರುವ ಸತ್ಯ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಹಿಂದುಳಿದ ವರ್ಗಗಳ ಮೀಸಲಾತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸಿ ತಮ್ಮ ಆತ್ಮಸಾಕ್ಷಿಗೂ ವಿರುದ್ಧ ಮಾತಾಡಿರುವುದು ಹಾಸ್ಯಾಸ್ಪದ ಎಂದವರು ಹೇಳಿದ್ದಾರೆ. ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷ ಅಚಲವಾದ ನಿಲುವು ಹೊಂದಿದೆ. ಆದರೆ ಮೀಸಲಾತಿಯ ಪರಮ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಪಕ್ಷ ಇತಿಹಾಸ ತಿರುಚಲು ಹೊರಟಿದೆ ಎಂದವರು ಕಮಲ ನಾಯಕರ ನಿಲುವಿನ ಬಗ್ಗೆ ಕಟು ಟೀಕೆ ಮಾಡಿದ್ದಾರೆ. ಮಂಡಲ್ ಆಯೋಗದ ಶಿಫಾರಸ್ಸು ಜಾರಿಯಾಗಬಾರದೆಂದು ಪ್ರಭಲವಾಗಿ ವಿರೋಧ ಮಾಡಿದ್ದೇ…
ರಾಜ್ಯಕ್ಕೆ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ
ಹಾವೇರಿ: “ರಾಜ್ಯ ಕಾಂಗ್ರೆಸ್ ಪಕ್ಷದ ಒಳಗಿರುವ ಗೊಂದಲದಿಂದಾಗಿ 2026 ರೊಳಗೆ ಕರ್ನಾಟಕದಲ್ಲಿ ಮಧ್ಯಂತರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ,” ಎಂದು ಹಾವೇರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವಾಗ ಚುನಾವಣೆ ನಡೆದರೂ ಬಿಜೆಪಿ ಅದನ್ನು ಎದುರಿಸಲು ಸಂಪೂರ್ಣ ಸಿದ್ಧವಾಗಿದೆ ಎಂದರು. ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಕೆಲಸ ನೋಡಿ ಮೌನವಾಗಿದ್ದೆ. ಆದರೆ ಈ ಬಾರಿಯಂತು ಅವರು ಈಷ್ಟು ಅಸಾಯಕರಾಗಿ ಕಾಣಿಸಿಕೊಳ್ಳುತ್ತಿರುವುದು ಅಚ್ಚರಿ ಉಂಟುಮಾಡುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದರು.
ಜುಲೈ 15ರಿಂದ ಗ್ರಾಮ ಪಂಚಾಯಿತಿಗಳಲ್ಲೂ ಇ-ಖಾತಾ ವಿತರಣೆ; ರಾಜ್ಯ ಸರ್ಕಾರದ ತಯಾರಿ
ಬೆಂಗಳೂರು: ರಾಜ್ಯ ಸರ್ಕಾರ ಇ-ಖಾತಾ ವಿತರಣೆಯ ವ್ಯಾಪ್ತಿಯನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಇ-ಖಾತಾ ನೀಡುವ ಕಾರ್ಯ ಕ್ರಮೇಣ ಆರಂಭವಾಗಲಿದೆ. ಜುಲೈ 15ರಿಂದ ಈ ಯೋಜನೆ ಜಾರಿಗೆ ಬರಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇನ್ನುಳಿದಂತೆ, ಈಗಾಗಲೇ ಮಹಾನಗರ ಪಾಲಿಕೆ, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲೇ ಮಾತ್ರ ಇ-ಖಾತಾ ನೀಡಲಾಗುತ್ತಿದೆ. ಆದರೆ ಹೊಸ ಅಧೀನದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಸಿದ್ಧತೆಯಲ್ಲಿದೆ. ಜುಲೈ 15ರಿಂದ ಈ ಯೋಜನೆ ಜಾರಿಗೆ ಬರಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇ-ಖಾತಾ ಎಂಬುದೇನು? ಈ ಸಂಬಂಧ ಕರ್ನಾಟಕ ಗ್ರಾಮಸ್ವರಾಜ್ – ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಅನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮೂಲಕ ಗ್ರಾಮೀಣ ಪ್ರದೇಶದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ…
ರಾಜ್ಯದಲ್ಲಿ ಜುಲೈ 3ರಿಂದ ಭಾರೀ ಮಳೆಯ ನಿರೀಕ್ಷೆ; ಹಲವೆಡೆ ಅಲರ್ಟ್
ಬೆಂಗಳೂರು: ಜುಲೈ 3ರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 3ರ ನಂತರ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುಂಜಾಗ್ರತೆಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಸಾಧ್ಯತೆ ಇದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನ ಬೆಂಗಳೂರಿನ ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ…
ಕಾಂಗ್ರೆಸ್ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್
ಕೊಪ್ಪಳ: ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಅವಕಾಶ ಕೊಡುವವರು ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯ ಮುಂದುವರಿಯಲು ಡಿ.ಕೆ.ಶಿವಕುಮಾರ್ ಒಪ್ಪಲ್ಲ. ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನೂ ಮುಂದಕ್ಕೆ ಬರಲು ಬಿಡುತ್ತಿಲ್ಲ. ಈ ಅಂತರಿಕ ಕಲಹದಿಂದಲೇ ಸರ್ಕಾರ ಉರುಳಲಿದೆ, ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಮಾಜವಾದಿ ಅಲ್ಲ, ಮಜಾವಾದಿ. ಅಧಿಕಾರಕ್ಕಾಗಿ ಅವರು ಯಾವ ಪಕ್ಷಕ್ಕೂ ಹೋಗಬಲ್ಲವರು. ಅವರು ಮೂಲ ಕಾಂಗ್ರೆಸ್ಸಿಗರು ಅಲ್ಲ. ಹತ್ತಿರದಿಂದ ನೋಡಿದರೆ ಇಂದಿಗೂ ಅತೃಪ್ತರಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಅವರು ಎಲ್ಲೆಲ್ಲಿ ಹೋಗಿದ್ದಾರೆ ಅಲ್ಲಿ ಮಜಾ ಉಡಾಯಿಸಿದ್ದಾರೆ. ವಸತಿ ಇಲಾಖೆಯಲ್ಲಿ ಹಗರಣ ನಡೆದಿರುವುದಕ್ಕೂ ಬದ್ಧವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಉಳಿಸಿಕೊಂಡಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗಿತ್ತು. ಕಾಂಗ್ರೆಸ್ನ ನಾಯಕರು ತಾವೇ ಭ್ರಷ್ಟಾಚಾರದ ಆರೋಪವನ್ನೆತ್ತುತ್ತಿದ್ದಾರೆ ಎಂದು ಕಟೀಲ್ ಕಿಡಿಕಾರಿದರು.
‘RSS ಬಗ್ಗೆ ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ’
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದ್ದಾರೆ. ಅಖಂಡ ಭಾರತ ನಿರ್ಮಾಣದ ಸಂಕಲ್ಪತೊಟ್ಟು ಜಾತಿರಹಿತ ಧರ್ಮ ಕಟ್ಟುವ ಮೌಲ್ಯ ಅಳವಡಿಸಿಕೊಂಡು, ರಾಷ್ಟ್ರೀಯತೆಯ ಸಿದ್ದಾಂತದೊಂದಿಗೆ ಲಕ್ಷಾಂತರ ತಪಸ್ವಿ ಹಾಗೂ ಸಮರ್ಪಣಾ ಕಾರ್ಯಕರ್ತರುಗಳ ಪರಿಶ್ರಮದಿಂದ ಬೃಹತ್ ವೃಕ್ಷದಂತೆ ಬೆಳೆದು ನಿಂತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ ಎಂದವರು ಹೇಳಿದ್ದಾರೆ. ಸಮಾಜವಾದಿ ಮುಖವಾಡ ಧರಿಸಿ, ಜಾತ್ಯಾತೀತತೆಯ ಸೋಗಿನಲ್ಲಿ ಮುಸ್ಲಿಂ ಸಮುದಾಯದ ಓಲೈಕೆಯ ರಾಜಕಾರಣ ಮಾಡುತ್ತಿರುವ ನಿಮಗೆ ಸಂವಿಧಾನದ ಆಶಯ ಹಾಗೂ ಮೌಲ್ಯಗಳನ್ನು ಕುರಿತು ಮಾತನಾಡುವ ಯಾವ ನೈತಿಕ ಹಕ್ಕೂ ಇಲ್ಲ ಎಂದಿರುವ ಅವರು, ‘ಜಯಪ್ರಕಾಶ್ ನಾರಾಯಣರ ಚಳುವಳಿಯಿಂದ ಪ್ರೇರಿತರಾಗಿ ಸಮಾಜವಾದಿ ರಾಜಕಾರಣ ಆರಂಭಿಸಿದೆ’ ಎಂದು ಹೇಳಿಕೊಳ್ಳುವ ನೀವು…
ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ; ಕೇಂದ್ರದಿಂದ ತನಿಖೆಗೆ
ಬೆಂಗಳೂರು: ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳ ಅಸಹಜ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ವಿಶೇಷ ತಂಡ ರಚಿಸಿದೆ. ಹುಲಿಗಳ ಸಾವಿನ ಹಿನ್ನೆಲೆ ಪತ್ತೆ ಹಚ್ಚಲು ಇಬ್ಬರು ಹಿರಿಯ ಅಧಿಕಾರಿಗಳನ್ನು ಒಳಗೊಂಡಿರುವ ವಿಶೇಷ ತನಿಖಾ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ 14 ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಇದಲ್ಲದೆ, ಈ ಪ್ರಕರಣವನ್ನು ಹೊತ್ತಂತೆ ಮೂವರು ಸಮಿತಿಗಳನ್ನು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಲು ಸರ್ಕಾರ ಆಜ್ಞೆ ನೀಡಿದೆ. ಕಳೆದ ಬುಧವಾರ ಸಂಜೆ ಗಸ್ತು ದೌರಿಯಲ್ಲಿ ನಿರತರಾಗಿದ್ದ ಅರಣ್ಯ ಸಿಬ್ಬಂದಿಗೆ ಹುಲಿಗಳ ಶವಗಳು ಪತ್ತೆಯಾದವು. ಪ್ರಾಥಮಿಕ ವರದಿಯಂತೆ, ಮೃತಪಟ್ಟವರಲ್ಲಿ ತಾಯಿ ಹುಲಿ ಮತ್ತು ಅದರ ಮೂರು ಮರಿಗಳು ಸೇರಿವೆ ಎಂದು ಶಂಕಿಸಲಾಗುತ್ತಿದೆ. ವಿಷಪ್ರಾಶನವೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಮೃತ ಸ್ಥಳದಿಂದ ಅಲ್ಪ…