ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ; ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ ವಿಜಯೇಂದ್ರ ನಡೆ

ಬೆಂಗಳೂರು: ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ನಡ್ಡಾ ಅವರ ಜನ್ಮದಿನದಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿದ ವಿಜಯೇಂದ್ರ ನಡೆ ತೀವ್ರ ಕುತೂಹಲ ಮೂಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಅದೇ ಹೊತ್ತಿಗೆ ರಾಜ್ಯ ಬಿಜೆಪಿಯ ಅನೇಕ‌ನಾಯಕರು ಅತೃಪ್ತಿಯನ್ನೂ ಹೊರಹಾಕಿದ್ದಾರೆ. ಈ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದಂತೆಯೇ ಬಿಎಸ್‌ವೈ ಪುತ್ರ ವಿಜಯೇಂದ್ರ ಅವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಇಯಾಗಿ ಮಾರುಕತೆ ನಡೆಸಿದ್ದು, ಈ ಬೆಳವಣಿಗೆ ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ ಈ ಭೇಟಿಗೆ ರಾಜಕೀಯ ಮಹತ್ವ ನೀಡಬೇಕಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ವರಿಷ್ಠ ನಾಯಕನ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು…

ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…

ಎಚ್ಚರ..! ರಾಜ್ಯದಲ್ಲಿ ಮಾರಾಟವಾಗುತ್ತಿದೆ ಅವಧಿ ಮೀರಿದ ಮಕ್ಕಳ ತಿಂಡಿ

ಬೆಂಗಳೂರು: ರಾಜ್ಯದ ಹಲವೆಡೆ ಮಾರಾಟವಾಗುವ ಆಹಾರೋತ್ಪನ್ನಗಳು ಎಷ್ಟು ಸುರಕ್ಷೆ ಎಂಬ ಪ್ರಶ್ನೆ ಉದ್ಭವವಾಗಿದೆ. ಬೆಂಗಳೂರು-ಮಂಗಳೂರು ಸಹಿತ ರಾಜ್ಯದ ಹಲವೆಡೆ ನಿಷೇಧಿತ ಚೈನೀಸ್ ಸಾಲ್ಟ್ ಬಳಕೆ ಮಾಡಿರುವ ಆಹಾರ ಮಾರಾಟ ದಂಧೆ ಎಗ್ಗಿಲ್ಲದೆ ಸಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಬಹುತೇಕ ಹೊಟೇಲು ವ್ಯವಹಾರದ ಹೆಸರಲ್ಲಿ ನಡೆಯುತ್ತಿರುವ ಈ ಅಕ್ರಮದ ಬಗ್ಗೆ ಆಹಾರ ಇಲಾಖೆಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ಆಕ್ರೋಶ ಪ್ರಜ್ಞಾವಂತ ನಾಗರೀಕರದ್ದು. ಇದೇ ವೇಳೆ, ಮಕ್ಕಳ ತಿಂಡಿಗಳ ಮಾರಾಟದಲ್ಲೂ ಅಕ್ರಮಗಳು ನಡೆಯುತ್ತಿವೆ. ಇದಕ್ಕೆ ಉದಾಹರಣೆ ಎಂಬಂತಿದೆ ನೆಲಮಂಗಲ ಸಮೀಪದ ಪ್ರಕರಣ. ನಿಗೂಢ ಮಾಫಿಯಾವು ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್​ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಠಾಣಾ ಇನ್‌ಸ್ಪೆಕ್ಟರ್ ಮುರಳೀಧರ್ ನೇತೃತ್ವದ ಪೊಲೀಸರು ಬೇಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್​ಹೌಸ್​ನಲ್ಲಿ ಈ ದಂಧೆಯನ್ನು ಪತ್ತೆ ಮಾಡಿರುವ…

ಇ-ಮೇಲ್ ಬಾಂಬ್ ತಲ್ಲಣ.. ಕಿಡಿಗೇಡಿಗಳ ಮೂಲೋಚ್ಚಾಟನೆಗೆ ಕಮೀಷನರ್ ದಯಾನಂದ್ ರಣತಂತ್ರ..

ಬೆಂಗಳೂರು: ಇಡೀ ರಾಜ್ಯವನ್ನು ತಲ್ಲಣಗೊಳಿಸಿದ್ದ ಬಾಂಬ್ ಬೆದರಿಕೆಯ ಇ-ಮೇಲ್ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ಬೆಂಗಳೂರು ಮತ್ತು ಸುತ್ತಮುತ್ತಲ ಹಲವು ಶಾಲೆಗಳಿಗೆ ಶುಕ್ರವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಪೊಲೀಸರು ಬರೋಬ್ಬರಿ 48 ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್​ಗಳು ದಾಖಲಾಗಿವೆ. ಈ ಎಫ್​ಐಆರ್​ಗಳನ್ನು ಕ್ರೂಡೀಕರಿಸಿ ತನಿಖೆ ನಡೆಸುವ ಸಾಧ್ಯತೆಗಳಿವೆ ಎಂದು ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ. ಶುಕ್ರವಾರ ಬೆಳಿಗ್ಗೆ 15 ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ರವಾನೆಯಾಗಿತ್ತೆಂದು ಹೇಳಲಾಗುತ್ತಿತ್ತು. ನಂತರ ಪರಿಶೀಲನೆ ಸಂದರ್ಭದಲ್ಲಿ ಸುಮಾರು 48 ಶಾಲೆಗಳಿಗೆ ಈ ರೀತಿಯ ಬೆದರಿಕೆಯ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಈ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಬಿ.ದಯಾನಂದ್, ಈ ಬಗ್ಗೆ ಆಳವಾದ ತನಿಖೆಗೆ ಸೂಚನೆ ನೀಡಿದ್ದಾರೆ. ಇ-ಮೇಲ್…

ದೊಡ್ಡಬಳ್ಳಾಪುರ: ಆಟೋ ಚಾಲಕರು ಮಾಲೀಕರ ವತಿಯಿಂದ ವಿಶಿಷ್ಠ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದ್ವಜಾರೋಹಣ ಹಾಗೂ ಸರತಿ ಸಾಲಿನಲ್ಲಿ ಅಲಂಕರಿಸಿದ್ದ ಆಟೋಗಳಿಗೆ ಪೂಜೆ ಮತ್ತು ಗಾಯನ ಮಾಡಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆಟೋ ಚಾಲಕ ರಾಮಣ್ಣ ಸುಮಾರು 20 ವರ್ಷಗಳಿಂದ ಊರಿನ ಗ್ರಾಮಸ್ಥರು ಹಾಗೂ ಆಟೋ ಚಾಲಕರು ಹಾಗೂ ಮಾಲೀಕರ ಎಲ್ಲರ ಸಹಕಾರದಿಂದ ಸತತವಾಗಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ತಾಯಿ ಭುವನೇಶ್ವರಿ ಹೆಚ್ಚಿನ ಶಕ್ತಿ ನೀಡಲಿ ಎಂದರು. ಈ ವೇಳೆ ಕೋನಘಟ್ಟ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ಆರಾಧ್ಯ, ಆಟೋ ಚಾಲಕರು ಮತ್ತು ಮಾಲೀಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ

ಬೆಂಗಳೂರು: ರಾಜ್ಯ ಸಾರಿಗೆ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ.‌ಸಾರಿಗೆ  ಸಚಿವ ರಾಮಲಿಂಗಾರೆಡ್ಡಿಯವರು ಶುಕ್ರವಾರ ಉದ್ದೇಶಿತ ಸಾಕ್ಷ್ಯಾಧಾರಿತ ಸಮೂಹ ಮಾಧ್ಯಮ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ, ಇದು ವೇಗದ ಚಾಲನೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಜನರನ್ನು ಎಚ್ಚರಿಸುವ ಗುರಿಯನ್ನು ಹೊಂದಿದೆ ಎಂದೇ ಬಣ್ಣಿಸಲಾಗುತ್ತಿದೆ. ಪ್ರತೀ ವರ್ಷ ನವೆಂಬರ್ ಮೂರನೇ ಭಾನುವಾರದಂದು ರಸ್ತೆ ಸಂಚಾರ ಸಂತ್ರಸ್ತರಿಗಾಗಿ (WDoR) ವಿಶ್ವ ಸ್ಮಾರಕ ದಿನವನ್ನು ಆಚರಿಸಲಾಗುತ್ತದೆ. “ವೇಗದ ದುಬಾರಿ ಬೆಲೆ: ಪುರುಷೋತ್ತಮ, ಗೀತಮ್ಮ ಮತ್ತು ಕುಟುಂಬದ ಕಥೆ” ಎಂಬ ಶೀರ್ಷಿಕೆಯ ಪ್ರಶಂಸಾ-ಶೈಲಿಯ ಅಭಿಯಾನದ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (KSRSA) ವೇಗದ ವಾಹನ ಚಾಲನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಯೋಚಿಸಲು ಮತ್ತು ಚಾಲನೆ ಮಾಡುವಾಗ ವೇಗದ ಮಿತಿಗಳನ್ನು ಅನುಸರಿಸಲು ಜನರನ್ನು ಪ್ರೇರೇಪಿಸುತ್ತದೆ. ಅಕ್ಟೋಬರ್ 31, 2023 ರಂದು ಬಿಡುಗಡೆಯಾದ 2022ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ರಸ್ತೆ…

ದೊಡ್ಡಬಳ್ಳಾಪುರ ನಗರಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು, ಆದಿಲಕ್ಷ್ಮೀ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಅಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು ವಿ ಎಸ್ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ರವಿಕುಮಾರ್ ಅವರನ್ನು ಜೆಡಿಎಸ್ ಮುಖಂಡರಾದ ಹೆಚ್. ಅಪ್ಪಯ್ಯಣ್ಣ, ಎ.ನರಸಿಂಹಯ್ಯ, ಹರೀಶ್ ಗೌಡ, ಕುಂಟನಹಳ್ಳಿ ಮಂಜುನಾಥ್, ಸದಸ್ಯರಾದ ಮಲ್ಲೇಶ್, ಆನಂದ್ ಮತ್ತಿತರರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ ಎಸ್ ರವಿಕುಮಾರ್ ಮಾತನಾಡಿ ನಗರ ಭಾಗದ ಅಭಿವೃದ್ಧಿಗಾಗಿ ಶ್ರಮಿಸುವ ಅವಕಾಶ ಕಲ್ಪಿಸಲಾಗಿದೆ ನಗರದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರದೊಂದಿಗೆ ಶ್ರಮಿಸಲಾಗುವುದು ಎಂದರು. ಸಹಕಾರ ಕೊಟ್ಟಿರುವ ಪಕ್ಷದ ಮುಖಂಡರು ಹಾಗು ನಗರಸಭೆ ಸರ್ವ ಸದಸ್ಯರಿಗೂ ಅವರು ಕೃತಜ್ಞತೆ ಸಲ್ಲಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್…