ರಾಜ್ಯದಲ್ಲಿ ಬಿಜೆಪಿ ಸೋಲಿನ ಪ್ರತಿಧ್ವನಿ; ನಳಿನ್ ರಾಜೀನಾಮೆಗೆ BSY ಆಪ್ತ ಆಗ್ರಹ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯಲ್ಲೀಗ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ತಮ್ಮ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಬಳಿಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಿತ್ತು ಎಂದು ವಾಗ್ದಾಳಿ ನಡೆಸಿದರು. ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಯಡಿಯೂರಪ್ಪ, ಬಿಎಸ್​ವೈ, ವಿಜಯೇಂದ್ರ ಅವರು ಸಾಂತ್ವನ ಹೇಳಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಯಾರಿಗಾದರೂ ಕರೆ ಮಾಡಿದ್ರಾ? ಎಂದು ಪ್ರಶ್ನಿಸಿದರು. ಬಿಜೆಪಿ ಪಕ್ಷದ ಕಚೇರಿಯನ್ನು ಕೆಲವರು ಕಾರ್ಪೊರೇಟ್​​ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಅವರು ಕುಟುಕಿದ ವೈಖರಿಯೂ ಅಚ್ಚರಿಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡುತ್ತಾರೆ. ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ…

ಯತ್ನಾಳ್-ರೇಣುಕಾಚಾರ್ಯ ವಾಕ್ಸಮರ; ಬಿಜೆಪಿ‌ ನಾಯಕರಿಗೆ ನೊಟೀಸ್..

ಬೆಂಗಳೂರು: ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿಯಲ್ಲೀಗ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಅದರಲ್ಲೂ ನಾಯಕರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ನಡುವಿನ ವಾಕ್ಸಮರ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ. ನಾಯಕರ ವಾಕ್ಸಮರ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಹಿತ ಕೆಲವರಿಗೆ ನೋಟಿಸ್ ನೀಡಿದೆ. ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿರುವ ವರಿಷ್ಠರು, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿದ್ದಾರೆ ಎನ್ನಲಾಗಿದೆ.

ಮುಂದಿನ 10 ದಿನ ಕರಾವಳಿಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ, ಕರಾವಳಿಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವವಿದ್ದು,ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು. ಈ ಹಿನ್ನೆಲೆಯಲ್ಲಿ ಸೂಕ್ತ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸಲಹೆ ನೀಡಲಾಗಿದೆ.

ಕೋಟಿ ಲೂಟಿಗೆ ಅಡ್ಡ ದಾರಿ; HSRPಯಲ್ಲಿ ಲಂಚದ ಪಾಲು ಯಾರಿಗೆಷ್ಟು?

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ಮುನ್ನವೇ ಅಕ್ರಮದ ಸಂಚು ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಒತ್ತಾಯಿಸಿದೆ. ಈ ಸಂಬಂಧ ತಮ್ಮ ಒಕ್ಕೂಟವು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿರುವ ದೂರಿನ ಆಧಾರದಲ್ಲಿ ಸೂಕ್ತ ಕ್ರಮವಿಡಬೇಕೆಂದು ಆಗ್ರಹಿಸಿದೆ, ಬೆಂಗಳೂರು ಪ್ರೆಸ್ ಕ್ಲಬ್’ನಲ್ಲಿ ಗುರುವಾರ (29.06.2023) ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ಅಧ್ಯಕ್ಷರೂ ಆದ ಸಾಮಾಜಿಕ ಹೋರಾಟಗಾರ ಲೋಕೇಶ್ ರಾಮ್, ಕೇಂದ್ರ ಸರ್ಕಾರ ಜಾರಿಗೊಳಿಸಲುದ್ದೇಶಿಸಿರುವ ಈ ಯೋಜನೆಯನ್ನು ಲಂಚದ ಆಸೆಗಾಗಿ ಹಾದಿತಪ್ಪಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. ಏನಿದು ಅಕ್ರಮದ ಸಂಚು? ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ನಡೆಯುವ ಕೃತ್ಯಗಳನ್ನು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ…

ಸಾಮೂಹಿಕ ಬಕ್ರೀದ್ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮರಾಜಪೇಟೆ ಈದ್ಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.

ಯೂರಿಯಾ ಸಬ್ಬಿಡಿ; ಖುಷಿ ತಂದ ಕೇಂದ್ರದ ನಿರ್ಧಾರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ ಕಬ್ಬು ಬೆಳೆಗಾರರಿಗೆ ಎಫ್‍ಆರ್‍ಪಿ ದರವನ್ನು ಪ್ರತಿ ಟನ್ ಗೆ 100 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಸರ್ಕಾರ 2014-15ನೇ ಸಾಲಿನಲ್ಲಿ ಪ್ರತಿ ಟನ್ ಗೆ 2100 ರೂ. ಇದ್ದ ಎಫ್‍ಆರ್‍ಪಿ ದರವನ್ನು ಇಂದು 2023-24ನೇ ಸಾಲಿನಲ್ಲಿ ಟನ್ ಗೆ 3150 ರೂ.ಗೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ 5 ಕೋಟಿ ಕಬ್ಬು ಬೆಳೆಗಾರರಿಗೆ ಮತ್ತು 5 ಲಕ್ಷ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಗೊಬ್ಬರದ ಬೆಲೆಗಳು ಪ್ರತಿ ವರ್ಷ ಜಾಗತಿಕವಾಗಿ ಬಹುಪಟ್ಟು ಹೆಚ್ಚಾಗುತ್ತಿವೆ. ಆದರೆ ಕೇಂದ್ರ…

ಬೊಲೋರೋ ಟೈರ್ ಸ್ಫೋಟಗೊಂಡು ಅಪಘಾತ; ಕೆಎಸ್ಸಾರ್ಟಿಸಿ ಚಾಲಕ ದುರ್ಮರಣ

ಬೆಂಗಳೂರು: ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇವಿ ಪವರ್‌ಪ್ಲಸ್ ವಾಹನದ ಮುಂಭಾಗದಲ್ಲಿ ಚಲಿಸುತ್ತಿದ್ದ ಬೊಲೋರೋ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ. ಬೊಲೆರೋ ಲಗೇಜ್ ವಾಹನವು ಒಳಗೆ ಮತ್ತು ಟಾಪ್ ಮೇಲೆ plywood sheetಗಳನ್ನು overload ಮಾಡಿ ತುಂಬಿಕೊಂಡು ಹೋಗುತ್ತಿದ್ದು, ಹಠಾತ್ತನೆ ಬೊಲೊರೋ ವಾಹನದ‌ ಟೈರ್ ಬಸ್ಟ್ ಅಗಿ ಅದರಲ್ಲಿನ ಫ್ಲೈವುಟ್ ಕೆಎಸ್ಸಾರ್ಟಿಸಿ ಬಸ್ಸಿನ ಮುಂಭಾಗದ ಗಾಜನ್ನು ಹೊಕ್ಕಿದೆ. ಈ ಅಪಘಾತದಲ್ಲಿ ಬಸ್ಸಿನ ಚಾಲಕನ ಎದೆಗೆ ಗಾಯವಾಗಿ, ಬಸ್ ಸಂಪೂರ್ಣ ನಿಯಂತ್ತಣ ಕಳೆದುಕೊಂಡು‌ ಡಿವೈಡರ್ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದೆ. ಈ ಅವಘಡದಲ್ಲಿ ಬಸ್ ಚಾಲಕ ರಮೇಶ್ ಎಂಬವರು ಸಾವನ್ನಪ್ಪದ್ದು, 22 ಜನ ಪ್ರಯಾಣಿಕರಿಗೆ‌ ಸಣ್ಣ‌ಪುಟ್ಟ ಗಾಯಗಳಾಗಿವೆ, ಗಾಯಳುಗಳನ್ನು ರಾಮನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು, ಮುಖ್ಯ ಭದ್ರತಾ ಮತ್ತು ಜಾಗೃತಧಿಕಾರಿ, ರಾಮನಗರ ವಿಭಾಗೀಯ ನಿಯಂತ್ರಣಾಧಿಕಾರಿ…

ಭ್ರಷ್ಟರಿಂದ HSRP ಕಬ್ಜ? ಸಣ್ಣ ವ್ಯಾಪಾರಿಗಳ ಮೇಲೆ ತೂಗುಗತ್ತಿ

ಬೆಂಗಳೂರು: ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ಹಳಿತಪ್ಪಿದೆ. ಈ ವರೆಗೂ ಒಂದಿಲ್ಲೊಂದು ಹಗರಣಗಳಿಗೆ ಸಾಕ್ಷಿಯಾಗುತ್ತಿರುವ ಸಾಕ್ಷಿಯಾಗಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಹುಕೋಟಿ ಅಕ್ರಮದ ಹಾದಿಯಲ್ಲಿದೆ. ಅತೀ ಸುರಕ್ಷಾ ನೋಂದಣಿ ಫಲಕ (HSRP) ಯೋಜನೆಯು ಜಾರಿಗೆ ಮುನ್ನವೇ ಅವ್ಯವಹಾರಕ್ಕೆ ನಾಂದಿ ಹಾಡಿರುವ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಭ್ರಷ್ಟಾಚಾರ ವಿರುದ್ಧ ಸಮರ ಸಾರಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಸವಾಲೆಂಬಂತಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವ್ವಿದ್ಯಾರ್ಥಿಗಳ ಒಕ್ಕೂಟ ನೀಡಿರುವ ಈ ದೂರು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದೆ. ಏನಿದು ಕರ್ಮಕಾಂಡ? ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ಕೃತ್ಯಗಳನ್ನು ನಡೆಸುವುದನ್ನು ತಡೆಯಲು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ ಆಧುನಿಕ ವ್ಯವಸ್ಥೆಯಾಗಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ…

ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಬೆಂಗಳೂರು: ದೇಶದ ಐದು ಕಡೆಗಳಲ್ಲಿ ನಮ್ಮೆಲ್ಲರ ಕನಸಿನ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದು, ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ ಎರಡನೇ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ಜನರು ಅತ್ಯಂತ ಕಡಿಮೆ ಅವಧಿಯಲ್ಲಿ ವೇಗವಾಗಿ ಬೆಂಗಳೂರು ತಲುಪಲು ಅನುಕೂಲವಾಗಲಿದೆ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನತೆಗೆ ಈ ಸೌಲಭ್ಯ ಒದಗಿಸಿಕೊಟ್ಟ ನಮ್ಮ ನೆಚ್ಚಿನ ಪ್ರಧಾನಮಂತ್ರಿ ‌ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ನಮ್ಮವರೇ ಆದ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. .…

2022ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ

ಮಂಡ್ಯ: ಸಕ್ಕರೆ ಜಿಲ್ಲೆಯ ಪಾಲಿಗೆ ಅತ್ಯಂತ ಸವಿಯಾದ ನುಡಿಸುಗ್ಗಿಯ ಸಂಭ್ರಮ. ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಶ್ರೀಮಂತಿಕೆ ತುಂಬಿರುವ ಮಂಡ್ಯದ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ ಭಾನುವಾರ ಮತ್ತೊಂದು ವಾರ್ಷಿಕ ನುಡಿ ಸುಗ್ಗಿಯ ಅನನ್ಯ ಸಮಾರಂಭ ನೆರವೇರಿತು. ಸರಸ್ವತ ಲೋಕದ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನೆರವೇರಿದ ಈ ಸಮಾರಂಭದಲ್ಲಿ 2022ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನನ್ಯ, ಅಪೂರ್ವ ಸಮಾರಂಭ.. ಪ್ರತೀ ವರ್ಷ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ ಕಥಾಸಂಕಲನ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರುತ್ತಿದೆ. ಸಿಹಿಜಲ್ಲೆಯ ನಾಡಲ್ಲಿ ನಡೆಯುವ ಈ ಸಮಾರಂಭ ಈ ಬಾರಿ ಅತ್ಯಂತ ವೈಭವದಿಂದ ನೆರವೇರಿತು. ಸಾರಸ್ವತ ಲೋಕದ ಅಪ್ರತಿಮ ಸೇವೆ ಸಲ್ಲಿಸಿರುವ ಸಾಹಿತ್ಯ ದಿಗ್ಗಜ ದಿವಂಗತ ಬೆಸಗರಹಳ್ಳಿ ರಾಮಣ್ಣ ಅವರ ಸ್ಮರಣಾರ್ಥ ಈ ಸಮಾರಂಭ ಆಯೋಜಿಸಲಾಗಿತ್ತು. ಈ ಬಾರಿ ಕಥಾಸಂಕಲನ ಪ್ರಶಸ್ತಿ ಪ್ರದಾನದ ಜೊತೆಗೆ ‘ಹಿಂಗಿದ್ದ ನಮ್ಮ…