ಬಿಜೆಪಿ ನಾಯಕರ ಸಿಡಿ ವಿಚಾರ; ಅಮಿತ್ ಶಾ ಸಿಡಿಮಿಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿನ ಸಿಡಿ ಮುಂದಿಟ್ಟು ನಡೆಯುತ್ತಿರುವ ವಾಗ್ಬಾಣಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಡಿಮಿಡಿಗೊಂಡಿದ್ದಾರೆ. ಬಿಜೆಪಿಯಲ್ಲಿನ ಸಚಿವಾಕಾಂಕ್ಷಿಗಳು ಸಾರ್ವಜನಿಕವಾಗಿ ಟೀಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಶನಿಬಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕ್ಯಾಬಿನೆಟ್ ವಿಸ್ತರಣೆ ನಂತರದ ಬೆಳವಣಿಗೆ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ ಸಿಡಿ ಬಾಂಬ್ ಬಗ್ಗೆಯೂ ಪ್ರಸ್ತಾಪವಾಯಿತೆನ್ನಲಾಗಿದೆ. ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಅಮಿತ್ ಶಾ, ಇಲ್ಲಿ ವ್ಯಕ್ತಿಗಿಂತ ಪಕ್ಷ ಮೊದಲು ಎಂದು ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆನ್ನಲಾಗಿದೆ.

ಯಾವೊಬ್ಬ ನಾಯಕರ ಹೆಸರನ್ನು ಪ್ರಸ್ತಾಪ ಮಾಡದಿದ್ದರೂ ಕೂಡ, ಸಚಿವ ಹುದ್ದೆ ವಂಚಿತರು ಮಾಧ್ಯಮಗಳ ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಪಕ್ಷದ ಸಂಘಟನೆ ವಿಷಯ ಮತ್ತು ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರು ಚರ್ಚೆ ನಡೆದಿದೆ.

Related posts