ಕಂಬಾರ, ಡಾ.ಬಿ.ಎಂ.ಹೆಗ್ಡೆಗೆ ಪದ್ಮ ವಿಭೂಷಣ ಪ್ರಶಸ್ತಿ

ದೆಹಲಿ ; ಕರ್ನಾಟಕದ ಐದು ಮಂದಿ ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, 2021ನೇ ಸಾಲಿನಲ್ಲಿ ಒಟ್ಟು 119 ಮಂದಿಯನ್ನು ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಹಿತ್ಯ ಕ್ಷೇತ್ರದಿಂದ ಡಾ.ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ ಹಾಗೂ ಆರೋಗ್ಯ ಕ್ಷೇತ್ರದಿಂದ ಡಾ.ಬಿ.ಎಂ.ಹೆಗ್ಡೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಕ್ರೀಡಾ ಕ್ಷೇತ್ರದಿಂದ ಕೆ.ವೈ. ವೆಂಕಟೇಶ್, ಕಲೆ ಮಾತಾ ಬಿ. ಮಂಜಮ್ಮ ಹಾಗೂ ಶಿಕ್ಷಣ ಕ್ಷೇತ್ರದಿಂದ ರಂಗಸ್ವಾಮಿ ಲಕ್ಷ್ಮೀ ನಾರಾಯಣ ಕಶ್ಯಪ್ ಅವರಿಗೆ ಪದ್ಮಶ್ರೀ ಸಿಕ್ಕಿದೆ.

ಖ್ಯಾತ ಹಿನ್ನೆಲೆ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪದ್ಮ ವಿಭೂಷಣ ಘೋಷಿಸಿರುವುದೂ ವಿಶೇಷ.

Related posts