ಚಿಕ್ಕಬಳ್ಳಾಪುರದಲ್ಲಿ ಇತಿಹಾಸ; ಎಲ್ಲಾ ಗ್ರಾಮಗಳಲ್ಲಿ ಅರಳಿದ ಕಮಲ

ಚಿಕ್ಕಬಳ್ಳಾಪುರ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಎಲ್ಲಾ 29 ಗ್ರಾಮ ಪಂಚಯಿತಿಗಳಲ್ಲೂ ಕಮಲ ಅರಳಿದೆ.

ಈ ಪಂಚಾಯತ್ ಚುನಾವಣಾ ಫಲಿತಾಂಶ ಕುರಿತಂತೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಈ ಅಭೂತಪೂರ್ವ ಗೆಲುವು ಚಿಕ್ಕಬಳ್ಳಾಪುರದ ಜನತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಮತ್ತು ಕೇಂದ್ರ, ರಾಜ್ಯ ಸರ್ಕಾರಗಳ ರೈತಪರ, ಅಭಿವೃದ್ಧಿ ಪರ ಕಾರ್ಯಗಳ ಮೇಲಿಟ್ಟಿರುವ ಅಚಲ ವಿಶ್ವಾಸವನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದು ಬಣ್ಣಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಆಶೀರ್ವದಿಸಿದ ಜಿಲ್ಲೆಯ ಮಹಾ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

Related posts